Advertisement

ಸ್ವತ್ಛತೆ ಪ್ರತಿ ಮನೆಯಿಂದ ಆರಂಭಿಸಿ

12:17 PM Oct 27, 2018 | Team Udayavani |

ಬೀದರ: ಸ್ವತ್ಛತೆ ಅಭಿಯಾನ ಕೇವಲ ವೇದಿಕೆಗಳಿಗೆ ಮಾತ್ರ ಸೀಮಿತವಾಗದೇ ಪ್ರತಿ ಮನೆಯಿಂದ ಆರಂಭಗೊಳ್ಳಬೇಕಿದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪಾ ಖಾಶೆಂಪೂರ ಹೇಳಿದರು.

Advertisement

ನಗರದ ಬಿ.ವಿ.ಭೂಮರೆಡ್ಡಿ ಕಾಲೇಜು ಆವರಣದಲ್ಲಿ ಶುಕ್ರವಾರ ನಡೆದ ಸ್ವತ್ಛ ಭಾರತ ಅಭಿಯಾನ ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸ್ವತ್ಛತೆ ಎಂದೊಡನೆ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ನೆನಪಾಗುತ್ತಾರೆ. ಅವರ ವಿಚಾರಗಳನ್ನು ಕಾರ್ಯರೂಪಕ್ಕೆ ತಂದಲ್ಲಿ ಸ್ವತ್ಛ ಭಾರತ ಯೋಜನೆ ಯಶಸ್ವಿಗೊಳಿಸಬಹುದು. ಅವರಂತೆ ಪ್ರತಿಷ್ಠೆಯ ಭಾವನೆ ಬದಿಗೊತ್ತಿ ಎಲ್ಲರೊಂದಿಗೆ ಬೆರೆಯಬೇಕು. ತಮ್ಮ ಕೆಲಸಗಳನ್ನು ತಾವೇ ಮಾಡಿಕೊಳ್ಳಬೇಕು. ತಿಂಗಳಲ್ಲಿ ಒಂದು ಬಾರಿ ತಮ್ಮ ಮನೆ ಮತ್ತು ಸುತ್ತಲಿನ ಪ್ರದೇಶ ಸ್ವತ್ಛಗೊಳಿಸಿದಲ್ಲಿ ದೇಶದೆಲ್ಲೆಡೆ ಸ್ವತ್ಛತೆ ಕಾಣಬಹುದು ಎಂದರು.

ಬೀದರ ನಗರಸಭೆ ಅಧ್ಯಕ್ಷೆ ಶಾಲಿನಿರಾಜು ಚಿಂತಾಮಣಿ ಮಾತನಾಡಿ, ನಗರದಲ್ಲಿ ಪ್ಲಾಸ್ಟಿಕ್‌ ನಿಷೇಧವನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿರುವುದರಿಂದ ಸ್ವತ್ಛತೆಯಲ್ಲಿ ಸುಧಾರಣೆಯಾಗಿದೆ. ದೇಶದ ವಿವಿಧ ರಾಜ್ಯಗಳಿಂದ ಆಗಮಿಸುವ ಜನರು ಬೀದರ ನಗರದ ಸ್ವತ್ಛತೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇದು ಹೀಗೆಯೇ ಮುಂದುವರಿಯಬೇಕು ಎಂದು ತಿಳಿಸಿದರು.

ನಗರಸಭೆಯ ಪೌರಾಯುಕ್ತ ಮನೋಹರ ಮಾತನಾಡಿ, ಬೀದರ ನಗರವನ್ನು ಬಯಲು ಬಹಿರ್ದೆಸೆ ಮುಕ್ತವಾಗಿಸಿದ್ದು, ಪ್ಲಾಸ್ಟಿಕ್‌ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಾಗರಿಕರು ನಗರಸಭೆಯ ಕೆಲಸಗಳಿಗೆ ಕೈ ಜೋಡಿಸಿದಲ್ಲಿ ಇನ್ನಷ್ಟು ಸುಧಾರಣೆ ಕಾಣಲು ಸಾಧ್ಯ ಎಂದರು.

ಇದೇ ವೇಳೆ ರಂಗೋಲಿ, ಭಾಷಣ, ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಲಾವಿದರಾದ ದೇವಿದಾಸ ಚಿಮಕೋಡ ಅವರ ನೇತೃತ್ವದಲ್ಲಿ ಕಲಾವಿದರು ಜಾನಪದ ಗೀತೆಗಳ ಮೂಲಕ ಸcತ್ಛ ಭಾರತ ಅಭಿಯಾನದ ಕುರಿತು ಜಾಗೃತಿ ಮೂಡಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಯತು.

Advertisement

ಸ್ವತ್ಛ ಭಾರತ ಅಭಿಯಾನದ ಜಿಲ್ಲಾ ಸಮಾಲೋಚಕ ವಿನಯಕುಮಾರ ಮಾತನಾಡಿದರು. ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ| ಮಲ್ಲಿಕಾರ್ಜುನ ಸಿ.ಕನಕಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬಿ.ವಿ.ಭೂಮರೆಡ್ಡಿ ಮಹಾವಿದ್ಯಾಲಯದ ಪ್ರಾಚಾರ್ಯ ರಾಘವೇಂದ್ರ ಡಿ.ಎಚ್‌, ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಕಾಲೇಜು ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

ಕಲಬುರಗಿ-ಬಳ್ಳಾರಿಯ ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ, ನಗರಸಭೆ, ಶಿಶು ಅಭಿವೃದ್ಧಿ ಯೋಜನೆ(ನಗರ), ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬಿ.ವಿ.ಭೂಮರೆಡ್ಡಿ ಪದವಿ ಪೂರ್ವ ಕಾಲೇಜು, ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. 

Advertisement

Udayavani is now on Telegram. Click here to join our channel and stay updated with the latest news.

Next