Advertisement
ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಂಪುಟ ಸಭೆ ನಡೆಯಲಿದೆ. ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್, ವಿನಯ್ ಕುಲಕರ್ಣಿ, ಬಸವರಾಜ ರಾಯರೆಡ್ಡಿ, ಡಾ. ಶರಣ ಪ್ರಕಾಶ್ ಪಾಟೀಲ್ ಲಿಂಗಾಯತ ಪ್ರತ್ಯೇಕ ಧರ್ಮದಪರವಾಗಿ ವಾದ ಮಾಡುತ್ತಿದ್ದು, ಈಶ್ವರ್ ಖಂಡ್ರೆ ಹಾಗೂ ಎಸ್.ಎಸ್. ಮಲ್ಲಿಕಾರ್ಜುನ ವೀರಶೈವರ ಪರನಿಂತಿದ್ದಾರೆ. ವೀರಶೈವ ಹಾಗೂ ಲಿಂಗಾಯತ ಬಣದ ಸಚಿವರು ತಮ್ಮ ಪರವಾಗಿ ನಿಲ್ಲುವಂತೆ ಹಿರಿಯ ಸಚಿವರನ್ನು ಓಲೈಕೆ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಎನ್ನಲಾಗಿದೆ. ಲಿಂಗಾಯತ ಸಮುದಾಯಕ್ಕೆ ರಾಜ್ಯ ಸರ್ಕಾರವೇ ಅಲ್ಪ ಸಂಖ್ಯಾತರ ಮಾನ್ಯತೆ ನೀಡಬಹುದೆಂದು ನ್ಯಾ. ನಾಗಮೋಹನ್ ದಾಸ್ ನೇತೃತ್ವದ ತಜ್ಞರ ಸಮಿತಿ ವರದಿಯಲ್ಲಿ ಉಲ್ಲೇಖೀಸಿದೆ. ರಾಜ್ಯ ಸರ್ಕಾರ ಅಲ್ಪ ಸಂಖ್ಯಾತರ ಮಾನ್ಯತೆ ನೀಡದೇ ನೇರವಾಗಿ ಕೇಂದ್ರ
ಸರ್ಕಾರಕ್ಕೆ ಶಿಫಾರಸ್ಸು ಮಾಡಿದರೇ ಅವರೇ ಅಲ್ಪ ಸಂಖ್ಯಾತರ ಮಾನ್ಯತೆ ನೀಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ ಎಂದು ವಾಪಸ್ ಕಳುಹಿಸುವ ಸಾಧ್ಯತೆ ಇದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
Related Articles
Advertisement
ಸಂಪುಟ ಸಭೆಯಲ್ಲಿ ಅಲ್ಪ ಸಂಖ್ಯಾತ ಸಚಿವರ ನಿಲುವೂ ಕೂಡ ಮಹತ್ವದ್ದಾಗಿದ್ದು, ಅವರೂ ಸಭೆಯಲ್ಲಿ ಆತಂಕ ವ್ಯಕಪಡಿಸಿದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಇಕ್ಕಟ್ಟಿನಲ್ಲಿ ಸಿಲುಕುವಂತಾಗುತ್ತದೆ. ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪರವಾಗಿರುವ ಅಲ್ಪ ಸಂಖ್ಯಾತ ಸಮುದಾಯವನ್ನು ಎದುರು ಹಾಕಿಕೊಂಡು ಲಿಂಗಾಯತ ಸಮುದಾಯಕ್ಕೆ ಅಲ್ಪ ಸಂಖ್ಯಾತರ ಮಾನ್ಯತೆಗೆ ಮುಖ್ಯಮಂತ್ರಿಸಿದ್ದರಾಮಯ್ಯ ತೀರ್ಮಾನ ಕೈಗೊಳ್ಳುತ್ತಾರಾ ಎಂಬ ಕುತೂಹಲ ಮೂಡಿದೆ.