Advertisement

2 ತಿಂಗಳ ಪಡಿತರ ವಿತರಣೆ ಆರಂಭ

05:01 PM May 01, 2020 | Suhan S |

ಬಾಗಲಕೋಟೆ: ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಅನ್ನಯೋಜನೆಯಡಿ ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ಪದ್ದತಿಯಡಿ 700 ನ್ಯಾಯಬೆಲೆ ಅಂಗಡಿಗಳ ಮೂಲಕ ಏಪ್ರಿಲ್‌ ಮತ್ತು ಮೇ ಮಾಹೆಯ ಎರಡು ತಿಂಗಳಿನ ಪಡಿತರ ಧಾನ್ಯವನ್ನು ಮೇ 1ರಿಂದ ಅಂತ್ಯೋದಯ ಮತ್ತು ಬಿಪಿಎಲ್‌ ಪಡಿತರ ಚೀಟಿ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ಮತ್ತು ಪ್ರತಿ ಅಂತ್ಯೋದಯ ಮತ್ತು ಬಿಪಿಎಲ್‌ ಕಾರ್ಡ್‌ಗೆ 1 ಕೆಜಿ ತೊಗರಿಬೇಳೆ ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ|ಕೆ.ರಾಜೇಂದ್ರ ತಿಳಿಸಿದ್ದಾರೆ.

Advertisement

ಎಪಿಎಲ್‌ ಕುಟುಂಬಗಳಿಗೂ ಸಹ ಏಕಸದಸ್ಯ ಕುಟುಂಬಕ್ಕೆ 5 ಕೆಜಿ, ಎರಡು ಮತ್ತು ಎರಡಕ್ಕಿಂತ ಹೆಚ್ಚು ಸದಸ್ಯರಿರುವ ಕುಟುಂಬಗಳಿಗೆ 10 ಕೆಜಿ ಅಕ್ಕಿಯನ್ನು ಪ್ರತಿ ಕೆಜಿಗೆ 15 ರೂ.ಗಳಂತೆ ನೀಡಲಾಗುತ್ತಿದೆ. ಹೊಸದಾಗಿ ಬಿಪಿಎಲ್‌ ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಪ್ರತಿ ಅರ್ಜಿಗೆ 10 ಕೆಜಿ ಅಕ್ಕಿಯನ್ನು ಉಚಿತ ಹಾಗೂ ಹೊಸದಾಗಿ ಎಪಿಎಲ್‌ ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಪ್ರತಿ ಅರ್ಜಿಗೆ ಪ್ರತಿ ಕೆಜಿಗೆ 15 ರೂ.ಗಳಂತೆ 10 ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತದೆ. ಅರ್ಜಿದಾರರು ಅರ್ಜಿ ಹಾಕಿದ ನಕಲು ಪ್ರತಿಯನ್ನು ನ್ಯಾಯಬೆಲೆ ಅಂಗಡಿಗೆ ನೀಡಿ ಆಹಾರ ಧಾನ್ಯ ಪಡೆಯಬಹುದಾಗಿದೆ ಎಂದು ಹೇಳಿದ್ದಾರೆ.

ಬೆಳಗ್ಗೆ 7ರಿಂದ ರಾತ್ರಿ 9 ಗಂಟೆವರೆಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್‌, ಓಟಿಪಿ ಮೂಲಕ ಪಡಿತರ ವಸ್ತುಗಳನ್ನು ಪಡೆದುಕೊಳ್ಳಬಹುದಾಗಿದೆ. ನ್ಯಾಯಬೆಲೆ ಅಂಗಡಿಕಾರರು ಕಡ್ಡಾಯ ಮಾಸ್ಕ್ ಅಥವಾ ಕರವಸ್ತ್ರ, ಹ್ಯಾಂಡ್‌ ಸ್ಯಾನಿಟೈಜರ್‌ ಗಳನ್ನು ಬಳಸಬೇಕು. ಪ್ರತಿದಿನ 50ರಿಂದ 70 ಪಡಿತರ ಚೀಟಿದಾರರಿಗೆ ಮಾತ್ರ ಟೋಕನ್‌ ನೀಡಿ, ಸಾಮಾಜಿಕ ಅಂತರ, ಸ್ವಚ್ಛತೆ ಕಾಯ್ದುಕೊಂಡು ಅಂಗಡಿ ಎದುರು ಚೌಕ್‌ ಬಾಕ್ಸ್‌ ಹಾಕಿ. ನಿಯಮಾನುಸಾರ ಪಡಿತರ ವಿತರಿಸಬೇಕು ಎಂದು ಸೂಚನೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next