Advertisement
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸಚಿವ ಸಂಪುಟ ಉಪ ಸಮಿತಿಯಲ್ಲಿ ನೂತನ ಕೈಗಾರಿಕೆಗಳ ಸ್ಥಾಪನೆ ಕುರಿತು ಸುದೀರ್ಘ ಚರ್ಚೆ ನಡೆಸಿ ಅನುಮತಿ ನೀಡಲಾಗಿತ್ತು. ಜನವರಿ 12ರಂದು ಕೈಗಾರಿಕೆಗಳ ಸ್ಥಾಪನೆಗೆ ಹಣಕಾಸು ಇಲಾಖೆಯ ಅನುಮತಿ ದೊರೆತಿದೆ. ಶೀಘ್ರ ಕಂಪನಿಗಳಿಗೆ ಅನುಮೋದನೆ ಪ್ರಮಾಣ ಪತ್ರ ನೀಡಲಾಗುವುದು ಎಂದರು.
Related Articles
Advertisement
ಕ್ಲಸ್ಟರ್ ಸ್ಥಾಪನೆ ಬೇಕಾದ ಸೌಲಭ್ಯಗಳನ್ನು ಒದಗಿಸುವ ಕೈಗಾರಿಕೆ ಇಲಾಖೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಕುರಿತು ಹಣಕಾಸು ಇಲಾಖೆಯೊಂದಿಗೆ ಸಮಾಲೋಚಿಸಿ, ಮುಖ್ಯಮಂತ್ರಿಗಳ ನೇತೃತ್ವದ ಸಚಿವ ಸಂಪುಟ ಸಮಿತಿಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ಉತ್ತರ ಭಾರತದ ಗೌವಾಟಿಯಲ್ಲಿ ಸದ್ಯ ಎಫ್.ಎಂ.ಸಿ.ಜಿ ಕ್ಲಸ್ಟರ್ ಇದ್ದು, ಅಲ್ಲಿನ ಉದ್ಯಮಿಗಳ ಮನ ಒಲಿಸಿ ಹುಬ್ಬಳ್ಳಿಗೆ ಕರೆ ತರಲು ಉದ್ಯಮಿ ಉಲ್ಲಾಸ ಕಾಮತ ನೇತೃತ್ವದಲ್ಲಿ ಪ್ರಯತ್ನ ನಡೆಸಲಾಗುತ್ತದೆ ಎಂದು ವಿವರಿಸಿದರು.
ಉ-ಕ ಕೈಗಾರಿಕಾ ಅಭಿವೃದ್ಧಿ: ಕೊಪ್ಪಳದಲ್ಲಿ ಬಾಣಾವರ ಗ್ರಾಮದಲ್ಲಿ 400 ಎಕರೆ ಜಮೀನು ಖರೀದಿಸಿ ಎಸ್‌ಇಝಡ್ ಘೋಷಣೆ ಮಾಡಲಾಗಿದೆ. ಆಟಿಕೆ ತಯಾರಿಕಾ ಕ್ಲಸ್ಟರ್ ನಿರ್ಮಿಸಲಾಗುತ್ತಿದೆ. ಯಾದಗಿರಿ ಜಿಲ್ಲೆಯ ಕಡೆಚೂರು ಕೈಗಾರಿಕಾ ಪ್ರದೇಶದಲ್ಲಿ 4000 ಎಕರೆ ಭೂಮಿಯನ್ನು ಕೈಗಾರಿಕೆ ಸ್ಥಾಪನೆಗಾಗಿ ಅಭಿವೃದ್ಧಿ ಪಡಿಸಲಾಗಿದೆ. ಹೈದ್ರಾಬಾದ್ ಮೂಲದ ಔಷಧ ತಯಾರಿಕಾ ಕಂಪನಿಗಳು ಕಡೆಚೂರು ಕೈಗಾರಿಕಾ ಪ್ರದೇಶದಲ್ಲಿ ಘಟಕಗಳನ್ನು ಸ್ಥಾಪಿಸಲು ಮುಂದೆ ಬಂದಿವೆ. ರಾಜ್ಯಮಟ್ಟದ ಸಮಿತಿಯಿಂದ ಲಾಕ್ ಡೌನ್ ಸಂದರ್ಭದಲ್ಲಿ 55 ಔಷಧ ಕಂಪನಿಗಳ ಸೇರಿದಂತೆ ಒಟ್ಟು 70 ಕಂಪನಿಗಳ ಸ್ಥಾಪನೆಗೆ ಅನುಮತಿ ನೀಡಲಾಗಿದೆ. 2289 ಕೋಟಿ ಬಂಡವಾಳ ಹೂಡಿಕೆಯಾಗಲಿದೆ. 11,000 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿಕೆ ಅಭಿವೃದ್ಧಿ ಪರ್ವ ಶುರುವಾಗಿದೆ ಎಂದರು. ವಿಧಾನ ಪರಿಷತ್ತು ಸದಸ್ಯ ಪ್ರದೀಪ ಶೆಟ್ಟರ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕಾರ್ಯದರ್ಶಿ ಗೌರವ ಗುಪ್ತಾ ಇನ್ನಿತರರಿದ್ದರು.