ಹೆಬ್ರಿ: ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆ ಸಹಕಾರಿ. ಓದುವಿನ ಜೊತೆ ಕ್ರೀಡೆಯಲ್ಲಿ ನಮ್ಮನ್ನು ತೊಡಗಿಸಿಕೊಂಡಾಗ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಕಳೆದ 17 ವರ್ಷಗಳಿಂದ ಸಮಗ್ರ ಪ್ರಶಸ್ತಿಯನ್ನು ಕ್ರೀಡೆಯಲ್ಲಿ ಪಡೆದುಕೊಂಡ ಕುಚ್ಚುರು ಶಾಲೆಯಲ್ಲಿ ಈ ಕ್ರೀಡಾಕೂಟ ಆಯೋಜನೆ ಮಾಡಿರುವುದು ಸಂತೋಷ ತಂದಿದೆ ಎಂದು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಬಿ. ಹರ್ಷ ಶೆಟ್ಟಿ ಹೇಳಿದರು.
ಅವರು ಅ. 29ರಂದು ಕುಚ್ಚೂರು ಹೆರ್ಗ ವಿಠ್ಠಲ್ ಶೆಟ್ಟಿ ಸರಕಾರಿ ಪ್ರೌಢಶಾಲೆಯಲ್ಲಿ 2 ದಿನಗಳ ಕಾಲ ನಡೆಯುವ ಹೆಬ್ರಿ ಮತ್ತು ಕಾರ್ಕಳ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ಸಮಾರಂಭದ ಅಧ್ಯಕ್ಷತೆ ವಹಿಸಿ ಕ್ರೀಡೆಯಲ್ಲಿ ಅಂತರ್ ರಾಷ್ಟ್ರಮಟ್ಟದಲ್ಲಿ ಸಾಧನೆ ಗೈದ ಮೂಡುಬಿದ್ರೆ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ ಅವರನ್ನು ಸನ್ಮಾನಿಸಿ ಮಾತನಾಡಿದರು.
ಕುಚ್ಚೂರು ಪಂಚಾಯತ್ ಅಧ್ಯಕ್ಷೆ ಶಶಿಕಲಾ ಕಾರ್ಯಕ್ರಮ ಉದ್ಘಾಟಿಸಿದರು. ಹೆಬ್ರಿ ತಾಲೂಕು ಪಂಚಾಯತ್ ಕಾರ್ಯನಿರ್ವಾಣಧಿಕಾರಿ ಶಶಿಧರ ಧ್ವಜಾರೋಹಣ ನೆರವೇರಿಸಿದರು. ಹೆಬ್ರಿ ಠಾಣಾಧಿಕಾರಿ ಮಹೇಶ್ ಟಿ.ವಂದನೆ ಸ್ವೀಕಾರ ಮಾಡಿದರು. ಉದ್ಯಮಿ ಮಿಥುನ್ ಕುಮಾರ್ ಹೆಗ್ಡೆ ಕ್ರೀಡಾ ಜ್ಯೋತಿಯನ್ನು ಉದ್ಘಾಟಿಸಿದರು.
ಸಮಾರಂಭದಲ್ಲಿ ಶಿಕ್ಷಣಧಿಕಾರಿ ಟಿ. ಭಾಸ್ಕರ, ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಬಿ. ಕರುಣಾಕರ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹೇಶ್ ಶೆಟ್ಟಿ, ನಿವೃತ್ತ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್, ಶಿಶು ಅಭಿವೃದ್ಧಿ ಅಧಿಕಾರಿ ವಿಜಯ ನಾರಾಯಣ, ಸೀತಾನದಿ ವಿಟ್ಟಲ್ ಶೆಟ್ಟಿ, ವಾದಿರಾಜ್ ಶೆಟ್ಟಿ, ಸಂತೋಷ್ ಶೆಟ್ಟಿ, ಸತೀಶ್ ಪೂಜಾರಿ, ಸ್ನೇಹಲತಾ, ಮಾಲತಿ, ರಾಜಾರಾಮ್ ಸೇರ್ವೆಗಾರ್, ಮಾಲಿನಿ, ಸಂಜೀವ ಪೂಜಾರಿ, ಆನಂದ ಮಾಳ,ಸಂತೋಷ, ಬೋಜ ಕುಲಾಲ್, ಟಿ.ಜಿ. ಆಚಾರ್ ಮೊದಲಾದವರು ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣಾಧಿಕಾರಿ ರವಿಚಂದ್ರ ಕಾರಂತ ಪ್ರಸ್ತಾವನೆಗೈದರು. ಮುಖ್ಯ ಶಿಕ್ಷಕಿ ಪ್ರಭಾವತಿ ಸ್ವಾಗತಿಸಿ, ತುಳಸಿ ಕಾರ್ಯಕ್ರಮ ನಿರೂಪಿಸಿ, ಜಯರಾಮ್ ಶೆಟ್ಟಿ ವಂದಿಸಿದರು.
ಕ್ರೀಡಾಕೂಟದಲ್ಲಿ ಹೆಬ್ರಿ ಹಾಗೂ ಕಾರ್ಕಳ ತಾಲೂಕಿನ ಸುಮಾರು 57 ಪ್ರೌಡ ಶಾಲೆಗಳ ಸಾವಿರಕ್ಕೂ ಮಿಕ್ಕಿ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡರು.