Advertisement

ಸಣ್ಣ ಉದ್ಯಮ ಶುರು ಮಾಡಿ: ಪಾಟೀಲ

02:52 PM Feb 26, 2017 | |

ಕಲಬುರಗಿ: ನಿರುದ್ಯೋಗಿಗಳು ಉದ್ಯೋಗ ಹುಡುಕುವಲ್ಲಿ ಸಾಮರ್ಥ್ಯ ವ್ಯಯ ಮಾಡುವುದಕ್ಕಿಂತ ಸಣ್ಣ ಉದ್ಯಮ ಆರಂಭಿಸಲು ಮುಂದೆ ಬರಬೇಕು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಕರೆ ನೀಡಿದರು. 

Advertisement

ಇಲ್ಲಿನ ಕನ್ನಡ ಭವನದಲ್ಲಿ ಶನಿವಾರ ಎಂ.ಎಸ್‌. ಎಂ.ಇ. ಅಭಿವೃದ್ಧಿ ಸಂಸ್ಥೆ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಹೈದ್ರಾಬಾದ ಕರ್ನಾಟಕ ಚೇಂಬರ್‌ ಆಫ್‌ ಕಾಮರ್ಸ್‌ ಇಂಡಸ್ಟ್ರಿ, ಕೆ-ಲ್ಯಾಂಪ್‌ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಐದು ದಿನಗಳ ನ್ಯಾಷನಲ್‌ ವೆಂಡರ್‌ ಡೆವಲಪ್‌ ಮೆಂಟ್‌ ಕಾರ್ಯಕ್ರಮ ಹಾಗೂ ಕೈಗಾರಿಕಾ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು. 

ಸಣ್ಣ ಉದ್ಯಮ ಆರಂಭಿಸಲು ಸರಕಾರ ಎಲ್ಲ ರೀತಿಯಿಂದ ಸಹಕಾರ ನೀಡುತ್ತದೆ. ಇದಕ್ಕಾಗಿ ಕೈಗಾರಿಕಾ ಇಲಾಖೆ ಹಾಗೂ ಬ್ಯಾಂಕುಗಳು ಉತ್ತೇಜನ ನೀಡುತ್ತಿವೆ. ಆದ್ದರಿಂದ ಡಿಪ್ಲೋಮಾ ಮತ್ತು  ಐಟಿಐ ವೃತ್ತಿ ಕೋರ್ಸು ಮುಗಿಸಿದ ಅಭ್ಯರ್ಥಿಗಳು ಸರ್ಕಾರಿ ಉದ್ಯೋಗಕ್ಕಾಗಿ ಕಾಯದೆ ಸ್ವಯಂ ಉದ್ಯೋಗಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು. 

ಜಿಲ್ಲೆಯಲ್ಲಿ ಸಣ್ಣ ಸಣ್ಣ ಉದ್ಯಮಗಳ ಅವಕಾಶ ಮತ್ತು ದಾಲ್‌ಮಿಲ್‌ ಸ್ಥಾಪಿಸಲು ಸಣ್ಣ ಕೈಗಾರಿಕೆಗೆ ವಹಿಸುವ ನಿಟ್ಟಿನಲ್ಲಿನ ಸಾಧ್ಯತೆಗಳನ್ನು ಮುಖ್ಯಮಂತ್ರಿಗಳ ಅವಗಾಹನೆಗೆ ತರಲು ಅನುಕೂಲವಾಗುವಂತೆ ಸಮಸ್ಯೆಗಳ ಪಟ್ಟಿ ತಯಾರಿಸಿ ನೀಡುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಅಧಿಧಿ ಕಾರಿಗಳಿಗೆ ಇದೇ ಸಂದರ್ಭದಲ್ಲಿ ಸೂಚಿಸಿದರು. 

ಜಿಲ್ಲೆಯಲ್ಲಿ ಮಹಿಳಾ ಉದ್ಯಮಿಗಳಿಗೆ ಮತ್ತು ಉದ್ಯಮಕ್ಕೆ ಉತ್ತೇಜನ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ 50 ಎಕರೆ ಭೂಮಿಯನ್ನು ಜಿಲ್ಲೆಯ ಕೈಗಾರಿಕೆ ವಸಾಹತುವಿನಲ್ಲಿ ಮೀಸಲಿಡಲಾಗಿದೆ. ಇದರ ಸದ್ಬಳಕೆ ಮಾಡಿಕೊಂಡು ಹೆಚ್ಚು ಮಹಿಳೆಯರು ಉದ್ಯಮದತ್ತ ಆಸಕ್ತಿವಹಿಸಬೇಕು ಎಂದರು. 

Advertisement

ಅಧ್ಯಕ್ಷತೆ ವಹಿಸಿದ್ದ ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಮಾತನಾಡಿ, ಉದ್ಯಮವನ್ನು ನಾವು ಬೆಳೆಸಬೇಕಿದೆ. ಇದಕ್ಕಾಗಿ ಸರಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಬಳಕೆ ಮಾಡುವಲ್ಲಿ ಯುವಜನತೆ ಹಿಂದೆ ಬೀಳಬಾರದು ಎಂದರು. ಎಂ.ಎಸ್‌.ಎಂ.ಇ. ಅಭಿವೃದ್ಧಿ ಸಂಸ್ಥೆ ನಿರ್ದೇಶಕ ಎಸ್‌.ಎನ್‌. ರಂಗಪ್ರಸಾದ ಮಾತನಾಡಿ, ವಿವಿಧ ಜಿಲ್ಲೆಗಳ ವೆಂಡರ್ಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಸುಮಾರು 80-90 ಮಳಿಗೆಗಳನ್ನು ಸ್ಥಾಪಿಸಲಾಗಿದೆ.

ಹೈದ್ರಾಬಾದ ಕರ್ನಾಟಕ ಭಾಗದಲ್ಲಿ ಇದೇ ಮೊದಲ ಬಾರಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.  ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಲಾಜಿ, ಉಪಾಧ್ಯಕ್ಷತೆ ಶೋಭಾ ಸಿರಸಗಿ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಇಲಿಯಾಸ್‌ ಬಾಗಬಾನ್‌, ಕರ್ನಾಟಕ ತೊಗರಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ, ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸಂಜೀವನ್‌ ರಮೇಶ ಯಾಕಾಪುರ,

ಹೈದ್ರಾಬಾದ ಕರ್ನಾಟಕ ಚೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟ್ರಿ ಅಧ್ಯಕ್ಷ ಸೋಮಶೇಖರ ಟೇಂಗಳಿ, ಕೆ-ಲ್ಯಾಂಪ್‌ ಅಧ್ಯಕ್ಷೆ ಜ್ಯೋತಿ ಕಾಡಾದಿ ಇದ್ದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ದೊಡ್ಡಬಸವರಾಜ ಸ್ವಾಗತಿಸಿದರು. ನ್ಯಾಷನಲ್‌ ವೆಂಡರ್‌ ಡೆವಲಪ್‌ಮೆಂಟ್‌ ಕಾರ್ಯಕ್ರಮ ಹಾಗೂ ಕೈಗಾರಿಕಾ ವಸ್ತು ಪ್ರದರ್ಶನದ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು.  

Advertisement

Udayavani is now on Telegram. Click here to join our channel and stay updated with the latest news.

Next