Advertisement
ಇಲ್ಲಿನ ಜಯನಗರದ ಅನುಭವ ಮಂಟಪದಲ್ಲಿ ಶನಿವಾರ ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಬ್ಬ-ಹರಿ ದಿನಗಳಲ್ಲಿ ನಡೆಯುತ್ತಿದ್ದ ಜನಕಲೆಗಳು ನಿಂತು ಹೋಗಿವೆ. ಇದರಿಂದ ಅನಾದಿಕಾಲದಿಂದ ಬಳುವಳಿಯಾಗಿ ಬಂದ ದೇಶಿಯ ಶ್ರೀಮಂತಿಕೆ ಸೊರಗುತ್ತಾ ಸಾಗಿದೆ ಎಂದು ಹೇಳಿದರು.
Related Articles
Advertisement
ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಜಾನಪದ ವಿದ್ವಾಂಸ ಡಾ| ವೀರಣ್ಣ ದಂಡೆ, ನಮ್ಮ ಪ್ರದೇಶವು ಕನ್ನಡದ ಕಲೆ, ಭಾಷೆಗೆ ಹದವಾದ ನೆಲೆಯಾಗಿದೆ. ಕನ್ನಡಕ್ಕಾಗಿ ಅನೇಕ ಮಹನೀಯರು ದುಡಿದಿದ್ದಾರೆ. ನೈಜ ಕನ್ನಡವನ್ನು ಉಳಿಸಿಕೊಂಡು ಹೋಗುವುದು ಹಿಂದೆಂದಿಗಿಂತಲೂ ಅತ್ಯವಶ್ಯಕವಾಗಿದೆ ಎಂದರು.
ಸಾನ್ನಿಧ್ಯ ವಹಿಸಿದ್ದ ಶ್ರೀನಿವಾಸ ಸರಡಗಿಯ ರೇವಣಸಿದ್ಧ ಶಿವಾಚಾರ್ಯರು ಮಾತನಾಡಿ, ಕನ್ನಡ ಸಾಹಿತ್ ಪರಿಷತ್ ಇತ್ತೀಚಿಗೆ ಗ್ರಾಮೀಣ ಭಾಗದಲ್ಲೂ ಸಾಹಿತ್ಯ ಚಟುವಟಿಕೆಗಳನ್ನು ಆರಂಭಿಸಿದೆ. ಇದರಿಂದ ಗ್ರಾಮೀಣ ಭಾಗದ ಸಾಹಿತ್ಯಾಸ್ತಕರು, ಯುವ ಲೇಖಕರಿಗೆ ವೇದಿಕೆ ಸಿಕ್ಕಂತಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ವೇಳೆ ಶರಣಬಸವ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆ ಮುಖ್ಯಸ್ಥ ಡಾ| ಎಂ.ಎಸ್.ಪಾಟೀಲ “ನೆನಪು’ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ಜಿಲ್ಲಾ ಬಸವ ಸಮಿತಿ ಅಧ್ಯಕ್ಷೆ ಡಾ| ವಿಲಾಸವತಿ ಖೂಬಾ ಆರು ಕಾದಂಬರಿಗಳನ್ನು ಬಿಡುಗಡೆಗೊಳಿಸಿದರು. ಎಂ.ವೈ. ಸುರಪುರ ಹಾಗೂ ತಂಡದವರು ನಾಡಗೀತೆ ಹಾಡಿದರು.
ತಾಲೂಕು ಕಸಾಪ ಅಧ್ಯಕ್ಷ ಸಿ.ಎಸ್. ಮಾಲಿಪಾಟೀಲ ಸ್ವಾಗತಿಸಿದರು. ಟಿ.ಸಿ.ಮಾಲಿಪಾಟೀಲ ನಿರೂಪಿಸಿದರು. ಡಾ| ಸಂಗಮೇಶ ಹಿರೇಮಠ ವಂದಿಸಿದರು.