Advertisement

ಸಿಸಿ ರಸ್ತೆ ಕಾಮಗಾರಿಗೆ ಚಾಲನೆ

12:28 PM May 03, 2022 | Team Udayavani |

ಆಳಂದ: ಕ್ಷೇತ್ರದ ಎಲ್ಲ ಹಳ್ಳಿಗಳ ಒಂದಿಲ್ಲೊಂದು ರೀತಿಯ ಅಭಿವೃದ್ಧಿ ಕಾರ್ಯಕ್ಕೆ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಸಾಮಾಜಿಕ ನ್ಯಾಯ ಒದಗಿಸುವ ಕೆಲಸವನ್ನು ಶಾಸಕ ಸುಭಾಷ ಗುತ್ತೇದಾರ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಕಲ್ಯಾಣಿ ದೊಡ್ಡಮನಿ ಹೇಳಿದರು.

Advertisement

ತಾಲೂಕಿನ ದೇವಂತಗಿ ಗ್ರಾಮದಲ್ಲಿ ಗುರುವಾರ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ 15 ಲಕ್ಷ ರೂ. ವೆಚ್ಚದಲ್ಲಿ ಸಿಮೆಂಟ್‌ ರಸ್ತೆ ಕಾಮಗಾರಿಗೆ ಶಾಸಕರ ಮಾರ್ಗದರ್ಶನದಲ್ಲಿ ಕಾಮಗಾರಿ ಚಾಲನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರಸ್ತೆ, ಕುಡಿಯುವ ನೀರು, ನೀರಾವರಿ, ಶಾಲೆ ಕಟ್ಟಡ, ಸಮುದಾಯ ಭವನ, ಕಲ್ಯಾಣ ಮಂಟಪ ಹೀಗೆ ಅನೇಕ ಕಾಮಗಾರಿಗಳಿಗೆ ಆದ್ಯತೆ ನೀಡಿದ್ದಾರೆ. ಕ್ಷೇತ್ರದ ಜನತೆಗಾಗಿ ಹಲವಾರು ದೊಡ್ಡ ಯೋಜನೆಗಳನ್ನು ಜಾರಿಗೊಳಿಸಲು ಮುಖ್ಯಮಂತ್ರಿಗಳ ಬಳಿ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಶಾಸಕರ ಕೊಡುಗೆ ಅಪಾರವಾಗಿದೆ ಎಂದರು.

ಗ್ರಾಮದ ರೇಣುಕಾ ಶಿವಾಚಾರ್ಯ ಹಿರೇಮಠದ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಗುಣಮಟ್ಟದ ಕಾಮಗಾರಿ ಕೈಗೊಂಡರೆ ಜನರಿಗೆ ಅನುಕೂಲವಾಗುತ್ತದೆ ಎಂದು ಸಲಹೆ ನೀಡಿದರು.

ಗ್ರಾಮದ ಹಿರಿಯ ಮುಖಂಡ ಕಲ್ಯಾಣಿ ಡಿ. ಪೊಲೀಸ್‌ ಪಾಟೀಲ, ಪಿಎಲ್‌ಡಿ ಬ್ಯಾಂಕ್‌ ಮಾಜಿ ನಿರ್ದೇಶಕ ಮಲ್ಲಿನಾಥ ಎಸ್‌. ಚಿಂಚೋಳಿ, ಕಾಶಪ್ಪ ತಡಕಲ್‌, ದಾನಯ್ಯ ಸ್ವಾಮಿ, ಗೌರಿಶಂಕರ ದೇಶೆಟ್ಟಿ, ಶರಣಬಸಪ್ಪ ನಿಂಬಿತೋಟ, ಮಲ್ಲಪ್ಪ ಪ್ಯಾಟಿ ಇದ್ದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next