Advertisement

ಕಾನೂನು ಸಾಕ್ಷರತಾ ರಥ ಯಾತ್ರೆಗೆ ಚಾಲನೆ

01:21 PM Nov 12, 2019 | Suhan S |

ಕೊಪ್ಪಳ: ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರದಿಂದ ತಾಲೂಕಿನಲ್ಲಿ ನಡೆಯಲಿರುವ ಕಾನೂನು ಸಾಕ್ಷರತಾ ರಥ ಸಂಚಾರಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾ ಧೀಶರಾದ ಸಂಜೀವ್‌ ವಿ. ಕುಲಕರ್ಣಿ ಅವರು ಸೋಮವಾರ ಚಾಲನೆ ನೀಡಿದರು.

Advertisement

ಬಳಿಕ ಮಾತನಾಡಿದ ಅವರು, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಕಾನೂನು ಸಾಕ್ಷರತಾ ವಾಹನದ ಮೂಲಕ ಕಾನೂನು ಬಗ್ಗೆ ಸಾಮಾನ್ಯರಿಗೂ ಅರಿವು ಮೂಡಿಸಲು ಪ್ರತಿ ವರ್ಷ ಈ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಕಾನೂನಿನ ಮೂಲಕ ಪಡೆಯಬಹುದಾದ ಸೇವೆಗಳು, ಹಕ್ಕುಗಳು ಸೇರಿದಂತೆ ಇನ್ನೂ ಅನೇಕ ಕಾನೂನುಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಗ್ರಾಮೀಣ, ನಗರ ಪ್ರದೇಶದಲ್ಲಿ ಕಾನೂನು ರಥ ಸಂಚರಿಸಲಿದೆ.

ಇದರ ಜೊತೆ ನಮ್ಮ ಕಾನೂನು ತಂಡವು ಸಹ ಭಾಗವಹಿಸಿ ಕಾನೂನು ಸೇವೆಗಳ ಬಗ್ಗೆ ತಿಳಿಸಲಿದೆ. ಈ ಕಾರ್ಯಕ್ರಮವನ್ನು ಕೊಪ್ಪಳ ಜಿಲ್ಲಾದ್ಯಂತ ಆರಂಭಿಸಲಾಗಿದ್ದು, ಗಂಗಾವತಿ ಮತ್ತು ಕುಷ್ಟಗಿ ತಾಲೂಕಿನಲ್ಲಿ ಕಾರ್ಯಕ್ರಮ ಈಗಾಗಲೇ ನಡೆದಿದೆ.  ಈಗ ಕೊಪ್ಪಳ ತಾಲೂಕಿನಲ್ಲಿ ನಂತರ ಉಳಿದ ಎಲ್ಲ ತಾಲೂಕುಗಳಲ್ಲಿ ಈ ಕಾರ್ಯಕ್ರಮ ಜರುಗಲಿದೆ. ಜಿಲ್ಲೆಯಸಾರ್ವಜನಿಕರು ಕಾನೂನು ಸಾಕ್ಷರತಾ ವಾಹನದ ಮೂಲಕ ಕಾನೂನು ಸೇವೆಗಳ ಬಗ್ಗೆ ಮಾಹಿತಿ ಪಡೆದು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ಹಿರಿಯ ಸಿವಿಲ್‌ ನ್ಯಾಯಾಧೀಶ ಟಿ. ಶ್ರೀನಿವಾಸ್‌, ಹಿರಿಯ ಸಿವಿಲ್‌ ನ್ಯಾಯಾಧೀಶ ಕುಮಾರ್‌ ಎಸ್‌., ಪ್ರಧಾನ ಸಿವಿಲ್‌ ನ್ಯಾಯಾಧಿಧೀಶರಾದ ಹರೀಶ ಪಾಟೀಲ, ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾದ ಮನುಶರ್ಮಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಚ್‌.ಎಚ್‌. ಮುರಡಿ, ಜಿಲ್ಲಾ ಸರ್ಕಾರಿ ವಕೀಲ ಆಸೀಫ್‌ ಅಲಿ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next