ಗೋಕಾಕ: ಪ್ರಯಾಣಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್‌ನಿಲ್ದಾಣವನ್ನು ನಿರ್ಮಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದ್ದ ಸಾರಿಗೆಗಳನ್ನು ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತೆ ಆರಂಭಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಸಾರಿಗೆ ಇಲಾಖೆಯ ಹಿಂದುಳಿದ ಪ್ರದೇಶಾಭಿವೃದ್ಧಿ ಯೋಜನೆಯಡಿ 85 ಲಕ್ಷ ರೂ. ವೆಚ್ಚದಲ್ಲಿ ಕೌಜಲಗಿಯಲ್ಲಿ ನೂತನವಾಗಿ ನಿರ್ಮಿಸಲಾದ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸುತ್ತಮುತ್ತಲಿನ ಗ್ರಾಮಗಳಿಗೆ ಕೌಜಲಗಿಯು ಕೇಂದ್ರಸ್ಥಾನವಾಗಿದ್ದು ಈ ಮಾರ್ಗವಾಗಿ ಓಡಿಸಲಾಗುತ್ತಿರುವ ಕೆಲವೊಂದು ಸಾರಿಗೆಗಳನ್ನು ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಿದ್ದು, ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಲಾಭ-ನಷ್ಠವನ್ನು ಗಮನಿಸದೇ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಹಿಂದಿನ ಸಾರಿಗೆಗಳನ್ನು ಪುನರ್‌ಆರಂಭಿಸಬೇಕು ಎಂದು ಸಾರಿಗೆ ಅ ಧಿಕಾರಿಗಳಿಗೆ ಸೂಚನೆ ನೀಡಿದರು.
ನೂತನ ಶಾಲಾ ಕೊಠಡಿಗಳ ಉದ್ಘಾಟನೆ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ 2 ಕೊಠಡಿ ಮತ್ತು ಸರ್ಕಾರಿ ಬಾಲಕಿಯರ ಪ್ರಾಥಮಿಕ ಶಾಲೆಯ 2 ಕೊಠಡಿಗಳನ್ನುಇದೇ ಸಂದರ್ಭದಲ್ಲಿ ಉದ್ಘಾಟಿಸಿದರು. ಠೇವಣಿ ವಂತಿಗೆಅನುದಾನದಲ್ಲಿ ಸುಮಾರು 42.40 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದೆ. 45 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸರ್ಕಾರಿಮಾಧ್ಯಮಿಕ ಶಾಲೆಯ 3 ಕೊಠಡಿಗಳನ್ನು ಇದೇ ಸಂದರ್ಭದಲ್ಲಿ ಉದ್ಘಾಟಿಸಲಾಯಿತು.
ಅರ್ಬನ್ ಬ್ಯಾಂಕ್ ಅಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ, ಪ್ರಭಾಶುಗರ ನಿರ್ದೇಶಕ ಮಹಾದೇವಪ್ಪ ಭೋವಿ, ಜಿಪಂ ಮಾಜಿ ಸದಸ್ಯ ಪರಮೇಶ್ವರ ಹೊಸಮನಿ, ತಾಪಂ ಸದಸ್ಯರಾದ ಶಾಂತಪ್ಪ ಹಿರೇಮೇತ್ರಿ, ಲಕ್ಷ್ಮಣ ಮಸಗುಪ್ಪಿ, ಯುವ ಮುಖಂಡ ರವಿ ಪರುಶೆಟ್ಟಿ, ಅರ್ಬನ್ ಬ್ಯಾಂಕ್ ಮಾಜಿ ಅಧ್ಯಕ್ಷ ಶಿವಾನಂದ ಲೋಕನ್ನವರ, ಗ್ರಾಪಂ ಮಾಜಿ ಅಧ್ಯಕ್ಷರಾದ ಮಕು¤ಮಸಾಬ ಖಾಜಿ, ಹೊಳೆಪ್ಪ ಲೋಕನ್ನವರ, ಅಶೋಕ ಉದ್ದಪ್ಪನವರ, ರಾಯಪ್ಪ ಬಳ್ಳೋಲದಾರ, ಪಿಕೆಪಿಎಸ್ ಅಧ್ಯಕ್ಷ ಜಿ.ಎಸ್. ಲೋಕನ್ನವರ, ಮಾಜಿ ಅಧ್ಯಕ್ಷ ಮಹೇಶ ಪಟ್ಟಣಶೆಟ್ಟಿ, ಚಿಕ್ಕೋಡಿ ಡಿಟಿಓ ರಾಜಶೇಖರ ವಾಜಂತ್ರಿ, ಘಟಕ ವ್ಯವಸ್ಥಾಪಕ ಪ್ರಭುಲಿಂಗ ಮಡಿವಾಳರ, ಚಿಕ್ಕೋಡಿ ಎಇ ಶಿವಕುಮಾರ, ಕೆಜಿಎಸ್ ಮುಖ್ಯೋಪಾಧ್ಯಾಯ ವಿಠ್ಠಲ ಹಳ್ಳೂರ, ಕೆಯುಎಸ್ ಮುಖ್ಯೋಪಾಧ್ಯಾಯ ಎಸ್.ಎ. ಮುಲ್ಲಾ, ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಸುಭಾಸ ವಲ್ಯಾಪೂರ ಇತರರಿದ್ದರು.