Advertisement

ಕಸ ವಿಲೇವಾರಿ ವಾಹನಗಳಿಗೆ ಚಾಲನೆ

11:48 AM Oct 02, 2019 | Team Udayavani |

ಬೆಳಗಾವಿ: ನಗರದಲ್ಲಿ ಕಸ ವಿಲೇವಾರಿಯ ಸಂಬಂಧ ಖರೀದಿಸಿರುವ ನೂತನ ವಾಹನಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್‌ ಶೆಟ್ಟರ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ಶಾಸಕ ಅಭಯ ಪಾಟೀಲ, ಜಿಲ್ಲಾಧಿಕಾರಿ

Advertisement

ಡಾ.ಎಸ್‌.ಬಿ.ಬೊಮ್ಮನಹಳ್ಳಿ, ಪಾಲಿಕೆ ಆಯುಕ್ತ ಜಗದೀಶ್‌ ಕೆ.ಎಚ್‌. ಉಪಸ್ಥಿತರಿದ್ದರು. ಬೆಳಗಾವಿ ನಗರವನ್ನು ಸ್ವಚ್ಛ ಮತ್ತು ಸುಂದರ ನಗರವನ್ನಾಗಿಸುವ ದೃಷ್ಟಿಯಿಂದ ವಿನೂತನ ಪ್ರಯೋಗ ಮಾಡಲಾಗುತ್ತಿದೆ. ಹೊಸ ಯಂತ್ರಗಳನ್ನು ಖರೀದಿಸಿ ನಗರದಲ್ಲಿ ಕಸದ ಸಮಸ್ಯೆ ಉದ್ಭವಿಸದಂತೆ ಕ್ರಮಕೈಗೊಳ್ಳಲಾಗುತ್ತಿದೆ. ಬರುವ ದಿನಗಳಲ್ಲಿ ಪ್ರತಿ ವಾರ್ಡಿನಲ್ಲಿ ಬಯೋಮೆಟ್ರಿಕ್‌ ಅಳವಡಿಸುವ ಮೂಲಕ ನಗರದ ಸ್ವತ್ಛತೆ ಮಾಡಲಾಗುತ್ತದೆ ಎಂದು ಶಾಸಕ ಅಭಯ ಪಾಟೀಲ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next