Advertisement

ಗಾಂಧೀಜಿ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ

03:20 PM Oct 15, 2019 | Team Udayavani |

ರಾಯಚೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ವರ್ಷಾಚರಣೆ ನಿಮಿತ್ತ ಬೆಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಗರದ ಕೃಷಿ ವಿಜ್ಞಾನಗಳ ವಿವಿಯಲ್ಲಿ ಸೋಮವಾರ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.

Advertisement

ಪ್ರದರ್ಶನಕ್ಕೆ ಚಾಲನೆ ನೀಡಿದ ಶಿಕ್ಷಣ ನಿರ್ದೇಶಕ ಎಸ್‌. ಕೆ.ಮೇಟಿ ಮಾತನಾಡಿ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಕಗೃಹದಲ್ಲಿ ಆಯೋಜಿಸಿರುವ ಛಾಯಾಚಿತ್ರ ಪ್ರದರ್ಶನ ಅ.16ರವರೆಗೆ ನಡೆಯಲಿದೆ. ಪ್ರದರ್ಶನ ಸಂಪೂರ್ಣ ಉಚಿತವಾಗಿದೆ. ಸಾರ್ವಜನಿಕರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ವೀಕ್ಷಿಸಿ ಉಪಯುಕ್ತ ಮಾಹಿತಿ ಪಡೆಯಬಹುದು ಎಂದರು. ಮಹಾತ್ಮ ಗಾಂಧೀಜಿಯವರು ಜಗತ್ಪ್ರಸಿದ್ಧ ವ್ಯಕ್ತಿ. ಅಹಿಂಸಾ ಮಾರ್ಗದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಅವರು, ದೇಶದಲ್ಲಿ ಆಚರಣೆಯಲ್ಲಿದ್ದ ಹಲವು ಅನಿಷ್ಟ ಪದ್ಧತಿಗಳನ್ನು ಹೊಡೆದೋಡಿಸಿ ಸುಧಾರಣೆ ತರಲು ಯತ್ನಿಸಿದರು. ಅವರು ಸಾಗಿದ ಜೀವನ ಪಯಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯವರು ಛಾಯಾಚಿತ್ರಗಳ ಮೂಲಕ ಸಾರ್ವಜನಿಕರಿಗೆ ತಿಳಿಸುತ್ತಿರುವುದು ಶ್ಲಾಘನೀಯ ಎಂದರು.

ಗಾಂಧಿಧೀಜಿ ಯಾವುದೇ ಅಧಿಕಾರಕ್ಕೆ ಆಸೆ ಪಡಲಿಲ್ಲ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಸಂಪೂರ್ಣವಾಗಿ ತಮ್ಮನ್ನು ತೊಡಗಿಸಿಕೊಂಡವರು. ವಿದ್ಯಾರ್ಥಿಗಳು ಇಂತಹ ಮಹಾತ್ಮರ ಚಿಂತನೆ, ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದರು. ಕೃಷಿ ತಾಂತ್ರಿಕ ಮಹಾವಿದ್ಯಾಲಯ ಮುಖ್ಯಸ್ಥ ವೀರನಗೌಡ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್‌ ಎಚ್‌.ಜಿ. ಸೇರಿ ಇತರೆ ಹಲವರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next