Advertisement

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

02:46 PM Jul 08, 2019 | Suhan S |

ರಾಮದುರ್ಗ: ಪಟ್ಟಣದ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ಬಿಡುಗಡೆಗೆ ಶ್ರಮಿಸುತ್ತಿದ್ದು, ಸ್ಥಳೀಯ ನಿವಾಸಿಗಳು ಪಕ್ಷಾತೀತವಾಗಿ ಸಹಕಾರದಿಂದ ಗುಣಮಟ್ಟದ ಕಾಮಗಾರಿ ಮಾಡಿಸಿಕೊಳ್ಳಬೇಕು. ಅಂದಾಗ ಪಟ್ಟಣದ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.

Advertisement

ಪಟ್ಟಣದ ಶ್ರೀಪತಿ ನಗರದಲ್ಲಿ ವಿವಿಧ ವಾರ್ಡ್‌ಗಳಲ್ಲಿ ಸುಮಾರು 25 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುರುವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿ, ಸ್ಥಳೀಯ ಜನಪ್ರತಿನಿಧಿಗಳು ತಮ್ಮ ವಾರ್ಡ್‌ಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳ ಕುರಿತು ಗಮನ ಹರಿಸಿ ಗುತ್ತಿಗೆದಾರರೊಂದಿಗೆ ಸಹಕಾರದಿಂದ ವರ್ತಿಸಿ, ಗುಣಮಟ್ಟದ ಕಾಮಗಾರಿ ಮಾಡಿಸಿಕೊಳ್ಳುವ ಮೂಲಕ ವಾರ್ಡ್‌ ನಿವಾಸಿಗಳ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಬೇಕು. ಸಮಸ್ಯೆಗಳು ಅತಿಯಾಗಿದ್ದಲ್ಲಿ ತಮ್ಮ ಗಮನಕ್ಕೆ ತಂದಲ್ಲಿ ಪರಿಹಾರಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಮಂಜುನಾಥ ರಾವಳ, ಮುಖಂಡರಾದ ನಾರಾಯಣಪ್ಪ ಯಾದವಾಡ, ಕರವೀರಪ್ಪ ಹೊನ್ನುಂಗರ, ವಿಠuಲ ಕೊಳ್ಳಿ, ನೀಲಕಂಠ ಘಂಟಿ, ಮುರ್ತೋಜಿ ಪೆಂಡಾರಿ, ಏಕನಾಥ ರಾವಳ, ಗುತ್ತಿಗೆದಾರ ಕಿತ್ತೂರ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next