Advertisement
ಮೃತರು ಐವರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ. ಅಕ್ಷರಾಭ್ಯಾಸದ ಹೊರತಾಗಿಯೂ ಓ ಬೆಲೆ, ನಲ್ಲೊರಿ ಮಾಮ, ಮಂಜೊಟ್ಟಿ ಗೋಣ, ಗೋವಿಂದ ಬದನೆ, ಕನಡ, ಮಾಲ್‌ಂಡ್ ಮರ, ಕುಮಾರ, ಸಿರಿ, ಬಂಟರು, ಅಬ್ಬಗ-ದಾರಗೆ ಸೇರಿದಂತೆ ಹಲವಾರು ದೈವಿಕ ಆಚರಣೆ ಹಾಗೂ ಶ್ರಮಿಕ ಸಂಸ್ಕೃತಿಯ ಸಂಧಿ-ಪಾಡªನಗಳು ಅವರಿಗೆ ಕಂಠಸ್ಥವಾಗಿದ್ದವು. ಅವರು ದೀರ್ಘವಾಗಿ ಹಾಡಿರುವ “ಸಿರಿ ಪಾಡªನ’ವು ಎ.ವಿ. ನಾವಡ ಅವರ ಸಂಪಾದಕತ್ವದಲ್ಲಿ “ರಾಮಕ್ಕ ಮುಗ್ಗೇರ್ತಿ ಕಟ್ಟಿದ ಸಿರಿಪಾಡªನ’ ಎಂದು ಗ್ರಂಥರೂಪದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾನಿಲಯದಿಂದ ಪ್ರಕಟವಾಗಿದೆ.
2000ದಲ್ಲಿ ವೀರರಾಣಿ ಅಬ್ಬಕ್ಕ ಪ್ರಶಸ್ತಿ, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪ್ರಶಸ್ತಿ, ಕಟೀಲು ದೇವಸ್ಥಾನದ “ಪಾಡªನ ಕೋಗಿಲೆ’ ಬಿರುದು, 2001ರಲ್ಲಿ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಪ್ರಶಸ್ತಿ, 2015ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, 2004-05ನೇ ಸಾಲಿನ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯತ್ವ ಅಲ್ಲದೆ ನೂರಾರು ಗೌರವ, ಸಮ್ಮಾನಗಳು ಅವರಿಗೆ ಸಂದಿವೆ.
Related Articles
Advertisement