Advertisement
ಬಿಎಸ್‌ವೈ ಅವರು ರವಿವಾರ ದಿಲ್ಲಿಯಲ್ಲಿ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಜತೆಗೆ ಒಂದು ತಾಸು ಚರ್ಚಿಸಿದ್ದಾರೆ. ಸಂಪುಟ ವಿಸ್ತರಣೆ, ಪಕ್ಷ ಸಂಘಟನೆ, ಉಪ ಚುನಾವಣೆಗಳ ಸಿದ್ಧತೆ ಸಂಬಂಧ ಮಾತುಕತೆ ನಡೆದಿದೆ ಎಂದು ತಿಳಿದುಬಂದಿದೆ.
Related Articles
Advertisement
ಯಡಿಯೂರಪ್ಪ ಅವರನ್ನು ಬದಲಾಯಿಸಿದರೆ ಮುಂದೆ ರಾಜ್ಯದಲ್ಲಿ ಯಾವ ರೀತಿ ಪಕ್ಷ ಸಂಘಟಿಸ ಬೇಕು ಮತ್ತು ಅವರಿಗೆ ಯಾವ ಸ್ಥಾನಮಾನ ನೀಡ ಲಾಗುತ್ತದೆ ಎನ್ನುವ ಕುರಿತು ವರಿಷ್ಠರು ಯಡಿಯೂರಪ್ಪ ಅವರೊಂದಿಗೆ ಮುಕ್ತ ಚರ್ಚೆ ನಡೆಸಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.
ಯಡಿಯೂರಪ್ಪ ಅವರಿಗೆ ದಕ್ಷಿಣ ಭಾರತದ ಯಾವುದಾದರೂ ರಾಜ್ಯದ ರಾಜ್ಯಪಾಲ ಹುದ್ದೆ ನೀಡುವುದು, ಜತೆಗೆ ಸಿಎಂ ಪುತ್ರ, ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವ ಬಗ್ಗೆ ವರಿಷ್ಠರು ಆಲೋಚನೆ ಹೊಂದಿದ್ದಾರೆ ಎನ್ನಲಾಗಿದೆ. ಇದನ್ನು ಬಿಎಸ್‌ವೈ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.
7 ಮಂದಿಗೆ ಸ್ಥಾನ? :
ದಿಲ್ಲಿ ಭೇಟಿಯ ಬಳಿಕ ರವಿವಾರ ರಾತ್ರಿ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಪಕ್ಷದ ವರಿಷ್ಠರು ಸಿಎಂ ಯಡಿಯೂರಪ್ಪ ಅವರಿಗೆ ಕರೆ ಮಾಡಿ ಅಂತಿಮ ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ. ಜನವರಿ 13ರ ಮಧ್ಯಾಹ್ನ 7 ಮಂದಿಯನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಲು ವರಿಷ್ಠರು ಅನುಮತಿ ನೀಡಿದ್ದು, ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ಇನ್ನೂ ಅಂತಿಮವಾಗಿಲ್ಲ. ಇದು ಸೋಮವಾರ ಪ್ರಕಟವಾಗುವ ನಿರೀಕ್ಷೆ ಇದೆ.
ಇದೇ ಸಂಕ್ರಾಂತಿ ಸೂಚನೆ!
ಈ ನಡುವೆ ಶಾಸಕ ಯತ್ನಾಳ್, “ಮುಖ್ಯಮಂತ್ರಿಗಳನ್ನು ದಿಲ್ಲಿಗೆ ಕರೆಯಿಸಿರುವುದೇ ಸಂಕ್ರಾಂತಿ ಸೂಚನೆ’ ಎಂದಿದ್ದಾರೆ. “ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಆಗಬಹುದು, ಪುನಾರಚನೆ ಯಾಗಬಹುದು’ ಎಂದಿದ್ದಾರೆ.
ಮುಖ್ಯಮಂತ್ರಿ ಒಲವು :
- ತತ್‌ಕ್ಷಣ ಸಂಪುಟ ವಿಸ್ತರಣೆ, ಬಿಜೆಪಿ ಸರಕಾರ ರಚನೆಗೆ ಕಾರಣ ವಾಗಿರುವವರ ಸೇರ್ಪಡೆ.
- ಆರ್. ಶಂಕರ್, ಎಂ.ಟಿ.ಬಿ. ನಾಗರಾಜ್ ಮತ್ತು ಮುನಿರತ್ನ ಅವರಿಗೆ ಸಂಪುಟದಲ್ಲಿ ಸ್ಥಾನ ಕಲ್ಪಿಸಿ ಮಾತು ಉಳಿಸಿಕೊಳ್ಳುವ ಪ್ರಯತ್ನ.