ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ಬಳಿಕ ಶುಕ್ರವಾರ ಮೊದಲ ಬಾರಿಗೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ.
ಈ ಮಧ್ಯೆ, ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಬೆಂಗಳೂರಿನ ಪ್ರಮುಖ ನಾಯಕರೊಂದಿಗೆ ಚರ್ಚಿಸಿದರು. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಉಪಮುಖ್ಯಮಂತ್ರಿ ಡಾ.ಸಿ. ಎನ್.ಅಶ್ವತ್ಥ ನಾರಾಯಣ, ಸಚಿವ ಆರ್.ಅಶೋಕ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಅರವಿಂದ ಲಿಂಬಾವಳಿ, ಎನ್.ರವಿಕುಮಾರ್, ಅರುಣ್ ಕುಮಾರ್ (ಸಂಘಟನೆ), ನಗರ ಬಿಜೆಪಿ ಅಧ್ಯಕ್ಷ ಪಿ.ಎನ್.ಸದಾಶಿವ, ನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್.ಮುನಿರಾಜು ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.
ಪಕ್ಷ ಸಂಘಟನೆ, ಸದಸ್ಯತ್ವ ನೋಂದಣಿ, ಮತಗಟ್ಟೆಗೆ ಎರಡು, ಮೂರು ಸಕ್ರಿಯ ಸದಸ್ಯರ ನೇಮಕ ಪ್ರಕ್ರಿಯೆ ಯನ್ನು ಸೆ.15ರೊಳಗೆ ಪೂರ್ಣಗೊಳಿಸುವ ಬಗ್ಗೆ ಚರ್ಚೆ ನಡೆಯಿತು. ಬಿಬಿಎಂಪಿಯಲ್ಲಿ ಮೇಯರ್, ಉಪ ಮೇಯರ್ ಸ್ಥಾನದ ಜತೆಗೆ ಅಧಿಕಾರ ಹಿಡಿಯಲು ಅವಕಾಶವಿದ್ದು, ಆ ನಿಟ್ಟಿನಲ್ಲಿ ಸೂಕ್ತ ಪ್ರಯತ್ನ ನಡೆಸಬೇಕು ಎಂಬ ಬಗ್ಗೆ ಚರ್ಚೆ ನಡೆಯಿತು ಎನ್ನಲಾಗಿದೆ.
ಡಿ.ಕೆ.ಶಿವಕುಮಾರ್ ಬಂಧನ ವಿಚಾರ ಚರ್ಚೆ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ಹಾಗೂ ಅದರ ಪರಿಣಾಮಗಳ ಬಗ್ಗೆಯೂ ಚರ್ಚೆ ನಡೆಯಿತು. ಡಿ.ಕೆ.ಶಿವಕುಮಾರ್ ಬಂಧನ ವಿಚಾರವನ್ನು ಕಾಂಗ್ರೆಸ್, ಜೆಡಿಎಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆಯೂ ಪ್ರಸ್ತಾಪವಾಯಿತು. ಆದರೆ, ಅದಕ್ಕೆ ಪ್ರತಿಯಾಗಿ ಬಿಜೆಪಿ ನಡೆ ಏನಿರಬೇಕು ಎಂಬ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳಲಿಲ್ಲ ಎಂದು ಮೂಲಗಳು ಹೇಳಿವೆ.
Advertisement
ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಯಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿದ ನಂತರ ಹಾಗೂ ಬಿಜೆಪಿ ರಾಜ್ಯಾ ಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಅವರು ಅಧಿಕಾರ ವಹಿಸಿ ಕೊಂಡ ಬಳಿಕ ನಡೆಯುತ್ತಿರುವ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಬಗ್ಗೆ ಕುತೂಹಲ ಮೂಡಿದೆ. ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಪಕ್ಷದ ಕಚೇರಿಯಲ್ಲೇ ಕೋರ್ ಕಮಿಟಿ ಸಭೆ ನಿಗದಿಯಾಗಿದೆ.
Related Articles
Advertisement
ಬೆಂಗಳೂರಿಗೆ ಸಂಬಂಧಪಟ್ಟ ವಿಚಾರಗಳ ಬಗ್ಗೆ ಆರ್.ಅಶೋಕ್ ಅವರಿಗಿಂತ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರೇ ಹೆಚ್ಚು ಚರ್ಚೆ ನಡೆಸಿದರು. ಪಾಲಿಕೆಯಲ್ಲಿ ಅಧಿಕಾರ ಹಿಡಿಯುವುದು ಸೇರಿದಂತೆ ಇತರ ವಿಷಯಗಳ ಬಗ್ಗೆಯೂ ಅವರೇ ಹೆಚ್ಚು ಚರ್ಚೆಯಲ್ಲಿ ತೊಡಗಿದ್ದರು ಎನ್ನಲಾಗಿದೆ.
ಸಭೆ ಬಳಿಕ ನಳಿನ್ ಕುಮಾರ್ ಕಟೀಲ್ ಅವರು, ಆರ್.ಅಶೋಕ್ ಅವರ ಜಯನಗರ ನಿವಾಸಕ್ಕೆ ಭೇಟಿ ನೀಡಿ ಕೆಲಹೊತ್ತು ಚರ್ಚೆ ನಡೆಸಿದರು. ಖಾತೆ ಹಂಚಿಕೆ, ಉಪಮುಖ್ಯಮಂತ್ರಿ ಸ್ಥಾನ ಸೃಷ್ಟಿ ಹಾಗೂ ಇನ್ನಿತರ ಬೆಳವಣಿಗೆಯಿಂದ ಆರ್.ಅಶೋಕ್ ಬೇಸರಗೊಂಡಿದ್ದರು ಎಂಬ ಮಾತುಗಳ ಬೆನ್ನಲ್ಲೇ ರಾಜ್ಯಾಧ್ಯಕ್ಷರು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ.
ಬಳಿಕ ಪ್ರತಿಕ್ರಿಯಿಸಿದ ನಳಿನ್ ಕುಮಾರ್ ಕಟೀಲ್, ಪಕ್ಷದಲ್ಲಿ ಅಸಮಾಧಾನವಿದೆ ಎಂಬುದು ಮಾಧ್ಯಮಗಳಲ್ಲಿ ಮಾತ್ರ. ಪಕ್ಷದ ರಾಜ್ಯಾಧ್ಯಕ್ಷನಾದ ಬಳಿಕ ಬೆಂಗಳೂರಿನ ಪ್ರಮುಖ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ. ಅದರಂತೆ ಆರ್.ಅಶೋಕ್ ಅವರನ್ನು ಭೇಟಿಯಾಗಿದ್ದೇನೆ ಎಂದು ಹೇಳಿದರು.
ಆರ್.ಅಶೋಕ್ ಮಾತನಾಡಿ, ಬೆಂಗಳೂರು ಹಾಗೂ ರಾಜ್ಯದ ಕೆಲ ವಿಚಾರಗಳ ಬಗ್ಗೆ ಚರ್ಚಿಸಲು ನೂತನ ಅಧ್ಯಕ್ಷರು ಮನೆಗೆ ಆಗಮಿಸಿದ್ದರು. ಬಿಬಿಎಂಪಿ ಮೇಯರ್ ಚುನಾವಣೆ ಗೆಲ್ಲುವ ಬಗ್ಗೆ ಚರ್ಚಿಸಿದ್ದೇವೆ. ಪ್ರತಿ ಬಾರಿ ಮೇಯರ್ ಚುನಾವಣೆಗೆ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತಿತ್ತು. ಈ ಬಾರಿ ಗೆಲ್ಲುವ ಸಾಧ್ಯತೆ ಹೆಚ್ಚಿದ್ದು, ಗೆಲ್ಲುವ ವಿಶ್ವಾಸವಿದೆ. ಖಾತೆ ಹಂಚಿಕೆ ಬಗ್ಗೆ ಭಿನ್ನಾಭಿಪ್ರಾಯ ಎಂದೇನೂ ಇಲ್ಲ. ರಾಜಕೀಯವಾಗಿ ಇದೆಲ್ಲಾ ಸಹಜ ಎಂದು ಮಾರ್ಮಿಕವಾಗಿ ನುಡಿದರು.
ಅಶೋಕ್ ನಿವಾಸಕ್ಕೆ ರಾಜ್ಯಾಧ್ಯಕ್ಷರು
ಸಭೆ ಬಳಿಕ ನಳಿನ್ ಕುಮಾರ್ ಕಟೀಲ್ ಅವರು, ಆರ್.ಅಶೋಕ್ ಅವರ ಜಯನಗರ ನಿವಾಸಕ್ಕೆ ಭೇಟಿ ನೀಡಿ ಕೆಲಹೊತ್ತು ಚರ್ಚೆ ನಡೆಸಿದರು. ಖಾತೆ ಹಂಚಿಕೆ, ಉಪಮುಖ್ಯಮಂತ್ರಿ ಸ್ಥಾನ ಸೃಷ್ಟಿ ಹಾಗೂ ಇನ್ನಿತರ ಬೆಳವಣಿಗೆಯಿಂದ ಆರ್.ಅಶೋಕ್ ಬೇಸರಗೊಂಡಿದ್ದರು ಎಂಬ ಮಾತುಗಳ ಬೆನ್ನಲ್ಲೇ ರಾಜ್ಯಾಧ್ಯಕ್ಷರು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ. ಬಳಿಕ ಪ್ರತಿಕ್ರಿಯಿಸಿದ ನಳಿನ್ ಕುಮಾರ್ ಕಟೀಲ್, ಪಕ್ಷದಲ್ಲಿ ಅಸಮಾಧಾನವಿದೆ ಎಂಬುದು ಮಾಧ್ಯಮಗಳಲ್ಲಿ ಮಾತ್ರ. ಪಕ್ಷದ ರಾಜ್ಯಾಧ್ಯಕ್ಷನಾದ ಬಳಿಕ ಬೆಂಗಳೂರಿನ ಪ್ರಮುಖ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ. ಅದರಂತೆ ಆರ್.ಅಶೋಕ್ ಅವರನ್ನು ಭೇಟಿಯಾಗಿದ್ದೇನೆ ಎಂದು ಹೇಳಿದರು. ಆರ್.ಅಶೋಕ್ ಮಾತನಾಡಿ, ಬೆಂಗಳೂರು ಹಾಗೂ ರಾಜ್ಯದ ಕೆಲ ವಿಚಾರಗಳ ಬಗ್ಗೆ ಚರ್ಚಿಸಲು ನೂತನ ಅಧ್ಯಕ್ಷರು ಮನೆಗೆ ಆಗಮಿಸಿದ್ದರು. ಬಿಬಿಎಂಪಿ ಮೇಯರ್ ಚುನಾವಣೆ ಗೆಲ್ಲುವ ಬಗ್ಗೆ ಚರ್ಚಿಸಿದ್ದೇವೆ. ಪ್ರತಿ ಬಾರಿ ಮೇಯರ್ ಚುನಾವಣೆಗೆ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತಿತ್ತು. ಈ ಬಾರಿ ಗೆಲ್ಲುವ ಸಾಧ್ಯತೆ ಹೆಚ್ಚಿದ್ದು, ಗೆಲ್ಲುವ ವಿಶ್ವಾಸವಿದೆ. ಖಾತೆ ಹಂಚಿಕೆ ಬಗ್ಗೆ ಭಿನ್ನಾಭಿಪ್ರಾಯ ಎಂದೇನೂ ಇಲ್ಲ. ರಾಜಕೀಯವಾಗಿ ಇದೆಲ್ಲಾ ಸಹಜ ಎಂದು ಮಾರ್ಮಿಕವಾಗಿ ನುಡಿದರು.