Advertisement

ರಾಜ್ಯ ಬಿಜೆಪಿ ಸರ್ಕಾರ ಮಹಿಳಾ ವಿರೋಧಿ ಸರ್ಕಾರ: ಡಿಕೆಶಿ ಆರೋಪ

09:09 PM Mar 08, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಮಹಿಳಾ ವಿರೋಧಿ ಸರ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ.

Advertisement

ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಬಿಜೆಪಿಯವರು ಮಹಿಳೆಯರ ಅಭಿವೃದ್ಧಿಗೆ 10 ಸಾವಿರ ಕೋಟಿ ಕೊಡುತ್ತೇವೆ . ಮಹಿಳೆಯರಿಗೆ 2 ಲಕ್ಷದವರೆಗೂ ಸಾಲ, ಬಡ ಮಹಿಳೆಯರಿಗೆ ಸ್ಮಾರ್ಟ್‌ ಫೋನ್‌ ವಿತರಣೆ ಎಂಬ ಭರವಸೆಗಳನ್ನು ನೀಡಿದ್ದರು. 3 ಗ್ರಾಂ ತಾಳಿ, 25 ಸಾವಿರ ಹಣ ನೀಡುವುದಾಗಿ ಹೇಳಿದ್ದರು.

ಮೂರು ವರ್ಷಗಳಾದರೂ ಅದ್ಯಾವುದೂ ಈಡೇರಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳೇ ನಿಮ್ಮ ಬಜೆಟ್‌ ಬಂದಾಯ್ತು, ನೀವು ವಿಫಲವಾಗಿಯಾಯ್ತು. ನೀವು ಕ್ಷಮಾಪಣೆ ಕೇಳುವುದು ಬೇಡ. ನಿಮಗೆ ಹೆಣ್ಣು ಮಕ್ಕಳ ಬಗ್ಗೆ ಗೌರವವಿಲ್ಲ ಎಂಬುದಕ್ಕೆ ನಿಮ್ಮ ಬಜೆಟ್‌ ಸಾಕ್ಷಿ. ಮಹಿಳೆಯರು ನಿಮ್ಮನ್ನು ಕ್ಷಮಿಸುವುದಿಲ್ಲ ಎಂದು ಹೇಳಿದರು.

ರಾಷ್ಟ್ರೀಯ ಮಹಿಳಾ ಕಾಂಗ್ರೆಸ್‌ ಹೊಸ ಹೆಜ್ಜೆ ಇಟ್ಟಿದ್ದು, ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಅವರು ದೇಶದಲ್ಲೇ ದೊಡ್ಡ ಪರಿವರ್ತನಾ ಹೆಜ್ಜೆ ಇಟ್ಟಿದ್ದಾರೆ. ಅವರ ತಂದೆ ರಾಜೀವ್‌ ಗಾಂಧಿ ಅವರು ಮಹಿಳೆಯರಿಗೆ ಮೀಸಲಾತಿಯಂತಹ ಕ್ರಾಂತಿಕಾರಿ ಬದಲಾವಣೆಗೆ ಪ್ರಯತ್ನ ಮಾಡಿದ್ದರು. ನಾವು ನಮ್ಮ ಪ್ರಣಾಳಿಕೆಯಲ್ಲಿ ಶೇ. 33 ರಷ್ಟು ಮೀಸಲಾತಿ ನೀಡುತ್ತೇವೆ ಎಂದು ಹೇಳಿದ್ದು, ರಾಜ್ಯಸಭೆಯಲ್ಲಿ ಪಾಸ್‌ ಆಗಿ ಲೋಕಸಭೆಯಲ್ಲಿ ಬಿಜೆಪಿ ಇನ್ನು ಕಾರ್ಯರೂಪಕ್ಕೆ ತಂದಿಲ್ಲ ಎಂದು ತಿಳಿಸಿದರು.

Advertisement

ಮುಂದಿನ ದಿನಗಳಲ್ಲಿ ನಮಗೆ ಒಂದು ಅವಕಾಶ ಮಾಡಿಕೊಡಿ ಎಂದು ರಾಜ್ಯದ ಎಲ್ಲ ತಾಯಂದಿರು, ಸೋದರಿಯರಿಗೆ ಮನವಿ ಮಾಡುತ್ತೇನೆ. ನಿಮ್ಮ ವಿಚಾರಗಳನ್ನು ನಮಗೆ ಕೊಡಿ, ನಾವು ಅವುಗಳನ್ನು ಪ್ರಣಾಳಿಕೆ ಯಲ್ಲಿ ಸೇರಿಸಿಕೊಂಡು ಜನರ ಮುಂದೆ ಹೋಗಲು ಇಚ್ಛಿಸುತ್ತೇವೆ ಎಂದು ಹೇಳಿದರು.

ನಾವು ಚುನಾವಣೋತ್ತರ ಸಮೀಕ್ಷೆಗಿಂತ ವಾಸ್ತವದ ಮೇಲೆ ಹೆಚ್ಚು ನಂಬಿಕೆ ಇಟ್ಟಿದ್ದೇವೆ. ಉತ್ತರ ಪ್ರದೇಶ ಹೊರತಾಗಿ ಗೋವಾ, ಪಂಜಾಬ್‌, ಉತ್ತರಾಖಂಡದಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ. ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವಿದೆ.
-ಡಿ.ಕೆ.ಶಿವಕುಮಾರ್‌

 

Advertisement

Udayavani is now on Telegram. Click here to join our channel and stay updated with the latest news.

Next