ಬೆಂಗಳೂರು: ರಾಜ್ಯ ಬಿಜೆಪಿಯ ಮಾಧ್ಯಮ ವಕ್ತಾರ ಟಿ.ಎಸ್.(ಕೊರಿಯ) ಚಂದ್ರಶೇಖರ್ ಅವರು ಸೋಮವಾರ ಮಧ್ಯಾಹ್ನ ನಿಧನ ಹೊಂದಿದ್ದಾರೆ.
ಬೆಂಗಳೂರಿನಲ್ಲಿ ಕೆ ಆರ್ ಮಾರ್ಕೆಟ್ ಬಳಿ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಜಾಗತಿಕ, ರಾಷ್ಟ್ರೀಯ ವಿಷಯಗಳ ಕುರಿತು ಪಾಂಡಿತ್ಯ ಹೊಂದಿದ್ದ ಚಂದ್ರಶೇಖರ್ ಮಾಧ್ಯಮ ವಕ್ತಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ವಿದೇಶಾಂಗ ವ್ಯವಹಾರಕ್ಕೆ ಸಂಬಂಧಿಸಿ ತಜ್ಞರಾಗಿದ್ದ ಅವರು, ವಿವಿಧ ಟಿ.ವಿ. ಚಾನೆಲ್ಗಳಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಸಂವಾದಗಳಲ್ಲಿ ವಿಷಯ ತಜ್ಞರಾಗಿ ಚರ್ಚೆಗಳಲ್ಲಿ ಭಾಗವಹಿಸುತ್ತಿದ್ದರು. ಪಕ್ಷವನ್ನು ಸಮರ್ಥಿಸಿ ಮಾತನಾಡುತ್ತಿದ್ದರು. ಸಂಘ ಪರಿವಾರದ ಹಿನ್ನೆಲೆಯವರಾದ ಅವರು ಹಲವಾರು ವರ್ಷಗಳಿಂದ ಪಕ್ಷದಲ್ಲಿ ಕೆಲಸ ಮಾಡಿದ್ದರು.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವರ ಪಾರ್ಥಿವ ಶರೀರ ಇಡಲಾಗಿದೆ.
Related Articles
ನಳಿನ್ಕುಮಾರ್ ಕಟೀಲ್ ಸಂತಾಪ
ಬಿಜೆಪಿ ವಕ್ತಾರ ಚಂದ್ರಶೇಖರ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ. ದುಃಖತಪ್ತ ಕುಟುಂಬಕ್ಕೆ ಈ ನೋವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.