ಹೊಸದಿಲ್ಲಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ರಾಜ್ಯದ ಬಿಜೆಪಿ ಸಂಸದರು ರಾಜ್ಯಾಧ್ಯಕ್ಷ , ಸಂಸದ ಯಡಿಯೂರಪ್ಪ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ ಧಿಕ್ಕಾರ ಕೂಗಿದರು.
ಸಂಸತ್ ಭವನದ ಎದುರಿನ ಮಹಾತ್ಮಾ ಗಾಂಧೀಜಿ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಿದ 13 ಸಂಸದರು ಸರ್ಕಾರದ ವಿರುದ್ಧ, ಕಾಂಗ್ರೆಸ್ ಪಕ್ಷದ ವಿರುದ್ಧ, ಮುಖ್ಯಮಂತ್ರಿ ಸಿದ್ಧರಾಮಯ್ಯ ಧೋರಣೆ ವಿರುದ್ಧ ಧಿಕ್ಕಾರ ಕೂಗಿದರು.
ಆರ್‌ಎಸ್‌ಎಸ್ ಕಾರ್ಯಕರ್ತ ಶರತ್ ಮಡಿವಾಳ್ ಮತ್ತು 24 ಕ್ಕೂ ಹೆಚ್ಚು ಸಂಘ ಪರಿವಾರದ ಕಾರ್ಯಕರ್ತರ ಕೊಲೆ ನಡೆದಿದ್ದು ಈ ಪ್ರಕರಣಗಳನ್ನು ಮುಚ್ಚಿ ಹಾಕಲು ಸರ್ಕಾರ ಯತ್ನಿಸುತ್ತಿದೆ ಹೀಗಾಗಿ ಎನ್‌ಐಎ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಕರಾವಳಿಯ ಕಾಸರಗೋಡು, ಭಟ್ಕಳ ಮಂಗಳೂರು ಸೂಕ್ಷ್ಮಭಾಗಗಳು ಹೀಗಾಗಿ ಮಂಗಳೂರಿನಲ್ಲಿ ಎನ್‌ಐಎ ಕಚೇರಿಯನ್ನು ತೆರೆಬೇಕು ಎಂದು ಆಗ್ರಹಿಸಿದರು.
ಕೆಎಫ್ಡಿ, ಪಿಎಫ್ಐ ಸಂಘಟನೆಯನ್ನು ತಕ್ಷಣ ನಿಷೇಧ ಮಾಡಬೇಕು ಎಂದು ಯಡಿಯೂರಪ್ಪ ಆಗ್ರಹಿಸಿದರು.
ಪ್ರಾಮಾಣಿಕ ಅಧಿಕಾರಿಗಳನ್ನು ರಕ್ಷಿಸಿ ,ಕೊಲೆಗಡುಕ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಡೌನ್ ಡೌನ್ ಕಾಂಗ್ರೆಸ್ ಎಂಬ ಘೋಷಣೆಗಳನ್ನು ಕೂಗಿದರು.