Advertisement

ಹಿಂದುಳಿದ ವರ್ಗಗಳ ಆಯೋಗಕ್ಕೆ ಸಾಂವಿಧಾನಿಕ ಸ್ಥಾನ

07:20 AM Jul 30, 2017 | |

ಬೆಂಗಳೂರು: ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಾಂವಿಧಾನಾತ್ಮಕ ಸ್ಥಾನಮಾನ ನೀಡಲು ಲೋಕಸಭೆ ಒಪ್ಪಿಗೆ ನೀಡಿದೆ. ಶೀಘ್ರವೇ ರಾಜ್ಯಸಭೆಯ ಒಪ್ಪಿಗೆ ಪಡೆದು, 3-4 ತಿಂಗಳಲ್ಲಿ ಆಯೋಗದ ಅನುಷ್ಠಾನ ಮಾಡುವುದಾಗಿ ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವ ತಾವರ್‌ ಚಂದ್‌ ಗೆಲ್ಹೋಟ್‌ ತಿಳಿಸಿದರು.

Advertisement

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಶನಿವಾರ ನಗರದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಸಾಂವಿಧಾನಾತ್ಮಕ ಸ್ಥಾನಮಾನ ಹಾಗೂ ಉಪಯೋಗ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಮೂವರು ಸದಸ್ಯರ ನೇಮಕ ಮಾಡಲಿದ್ದೇವೆ. ಈ ಆಯೋಗವು ದೇಶದ ಹಿಂದುಳಿದ ವರ್ಗದ ಸಮಸ್ಯೆ ಆಲಿಸಿ, ಸರ್ಕಾರಕ್ಕೆ ವರದಿ ನೀಡಲಿದೆ. ಅದರ ಆಧಾರದಲ್ಲಿ ಲೋಕಸಭೆ, ರಾಜ್ಯಸಭೆಯಲ್ಲಿ ಚರ್ಚಿಸಿ, ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಆಯೋಗಕ್ಕೆ ಸಿವಿಲ್‌ ನ್ಯಾಯಾಧೀಶರಂತೆ ವಿಚಾರಣೆಯ ಅಧಿಕಾರ ಇರಲಿದೆ. ಯಾವುದೇ ಜಾತಿಯನ್ನು ಒಬಿಸಿಗೆ ಸೇರಿಸುವ ಅಥವಾ ಅಲ್ಲಿಂದ ತೆಗೆಯುವ ಸಂಬಂಧ ಕೇಂದ್ರಕ್ಕೆ ಶಿಫಾರಸು ಮಾಡುವ ಅಧಿಕಾರವನ್ನು ಆಯೋಗಕ್ಕೆ ನೀಡಲಾಗುತ್ತದೆ ಎಂದು ವಿವರಿಸಿದರು.

ಶ್ರದಾಟಛಿಂಜಲಿ: ದಿವಂಗತ ಮಾಜಿ ಮುಖ್ಯಮಂತ್ರಿ ಧರಂಸಿಂಗ್‌ ಹಾಗೂ ಖ್ಯಾತ ವಿಜ್ಞಾನಿ ಪ್ರೊ.ಯು. ಆರ್‌.ರಾವ್‌ ಅವರಿಗೆ ಕಾರ್ಯಕ್ರಮದಲ್ಲಿ ಶ್ರದಾಟಛಿಂಜಲಿ ಸಲ್ಲಿಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತಕುಮಾರ್‌, ಡಿ.ವಿ.ಸದಾನಂದಗೌಡ, ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್‌ ರಾವ್‌, ವಿಧಾನ ಪರಿಷತ್‌ ವಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ, ಮಾಜಿ ಡಿಸಿಎಂ ಆರ್‌.ಅಶೋಕ್‌, ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ, ವಿಧಾನ ಪರಿಷತ್‌ ಸದಸ್ಯೆ ತಾರಾ, ರಾಜ್ಯ ಸಂಘಟನಾ ಕಾರ್ಯದರ್ಶಿ ರವಿಕುಮಾರ್‌ ಮೊದಲಾದವರು ಉಪಸ್ಥಿತರಿದ್ದರು.

Advertisement

ಅಹ್ಮದ್‌ ಪಟೇಲ್‌ ಸೋಲು ಖಚಿತ: ಬಿಎಸ್‌ವೈ
“ಪ್ರಧಾನಿ ಮೋದಿಯವರ ನಾಯಕತ್ವಕ್ಕೆ ಮನಸೋತು, ಸ್ಫೂರ್ತಿ ಪಡೆದು ಕಾಂಗ್ರೆಸ್‌ ಶಾಸಕರು ಬಿಜೆಪಿಗೆ ಸೇರುತ್ತಿದ್ದಾರೆ. ಹೀಗಾಗಿ ಗುಜರಾತ್‌ ಕಾಂಗ್ರೆಸ್‌ನ ರಾಜ್ಯಸಭಾ ಅಭ್ಯರ್ಥಿ ಅಹ್ಮದ್‌ ಪಟೇಲ್‌ ಸೋಲು ಖಚಿತ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಭವಿಷ್ಯ ಹೇಳುತ್ತಿಲ್ಲ. ಗುಜರಾತಿನಲ್ಲಿ ಕಾಂಗ್ರೆಸ್‌ ಪರಿಸ್ಥಿತಿ ನೋಡಿದರೆ ಅರ್ಥವಾಗುತ್ತದೆ. ಬಿಜೆಪಿಯ ಮೂರನೇ ಅಭ್ಯರ್ಥಿ ಕೂಡ ಜಯ ಸಾಧಿಸಲಿದ್ದಾರೆ. ಕಾಂಗ್ರೆಸ್‌ ಶಾಸಕರಿಗೆ ಎಷ್ಟೇ ರಕ್ಷಣೆ ನೀಡಿದರೂ, ಅವರೆಲ್ಲ ಖಂಡಿತ ಕಾಂಗ್ರೆಸ್‌ ಬಿಟ್ಟು ಬಿಜೆಪಿಗೆ ಸೇರಲಿದ್ದಾರೆ. ಗುಜರಾತ್‌ನಿಂದ ರಾಜ್ಯಸಭೆಗೆ ಅಹ್ಮದ್‌ ಪಟೇಲ್‌ ಗೆಲುವು ಸಾಧ್ಯವೇ ಇಲ್ಲ. ಅದರ ತೀರ್ಮಾನ ಮೊದಲೇ ಆಗಿತ್ತು. ಮೋದಿಯವರ ಸಾಧನೆ ನೋಡಿ ಕಾಂಗ್ರೆಸ್‌ ಶಾಸಕರು ಸ್ವಯಂ ಪ್ರೇರಿತವಾಗಿ ಬಿಜೆಪಿಗೆ ಬರುತ್ತಿ¨ªಾರೆ’ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರದ ಬಗ್ಗೆ ಗಮನಿಸುವುದನ್ನು ಬಿಟ್ಟು ರೆಸಾರ್ಟ್‌ ರಾಜಕಾರಣದಲ್ಲಿ ತೊಡಗಿರುವುದು ನೋವಿನ ಸಂಗತಿ. ಕಾಂಗ್ರೆಸ್‌ ಎಲ್ಲ ರಾಜ್ಯದಲ್ಲೂ ಇದೇ ಸ್ಥಿತಿ ಅನುಭವಿಸುತ್ತಿದೆ ಎಂದು ಲೇವಡಿ ಮಾಡಿದರು. ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಬಿ.ಎಸ್‌.ಯಡಿಯೂರಪ್ಪ ಹಾಗೂ ಅನಂತಕುಮಾರ್‌ ಪ್ರತಿಕ್ರಿಯಿಸಲು ನಿರಾಕರಿಸಿದರು.

“ಮತಕ್ಕಾಗಿ ರಾಜಕೀಯ: ಸಿಎಂಗೆ ತಕ್ಕ ಪಾಠ’
ನಾಲ್ಕು ವರ್ಷಗಳಲ್ಲಿ ಒಮ್ಮೆಯೂ ದಲಿತರ ಕೇರಿಗೆ ಹೋಗಿ ಸಮಸ್ಯೆ ಆಲಿಸದ ಸಿಎಂ ಸಿದ್ದರಾಮಯ್ಯ ಕೇವಲ ಮತಗಳ ಮೇಲೆ ಕಣ್ಣಿಟ್ಟು ರಾಜಕೀಯ ಮಾಡುತ್ತಿದ್ದಾರೆ.

ಅವರಿಗೆ ಮುಂದೆ ಜನತೆಯೇ ತಕ್ಕ ಪಾಠ ಕಲಿಸಲಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ ಧ್ವನಿ ಸಂಸ್ಥೆ ವತಿಯಿಂದ ಡಾ.ಬಿ.ಆರ್‌.ಅಂಬೇಡ್ಕರ್‌ ಹಾಗೂ ಡಾ.ಬಾಬು ಜಗಜೀವನರಾಂ ಜಯಂತಿ ಪ್ರಯುಕ್ತ ನಗರದ ಪುರಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ದಲಿತ ಜನಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಾನು ಕೇವಲ ಒಂದೂವರೆ ತಿಂಗಳಲ್ಲಿ 40ಕ್ಕೂ ಹೆಚ್ಚು ದಲಿತರ ಮನೆಗಳಿಗೆ ಭೇಟಿ ನೀಡಿ ಅವರ ಕಷ್ಟ ಸುಖಗಳಿಗೆ ದನಿಯಾಗಿದ್ದೇನೆ.ಆದರೆ ಅಹಿಂದಪರ ಎಂದು ಕರೆದುಕೊಳ್ಳುವ ಸಿದ್ದರಾಮಯ್ಯ ನಾಲ್ಕು ವರ್ಷಗಳಲ್ಲಿ ಒಮ್ಮೆಯೂ ದಲಿತರ ವಾಸ್ತವ ಸ್ಥಿತಿಗತಿ ತಿಳಿಯುವ ಪ್ರಯತ್ನ ಮಾಡಿಲ್ಲ. ಆದರೆ, ಬಿಜೆಪಿ ಮುಖಂಡರು ದಲಿತರ ಮನೆಯ ಸಂಬಂಧ ಬೆಳೆಸಲಿ ಎಂದು ಹಗುರವಾಗಿ ಮಾತನಾಡುತ್ತಾರೆಂದು ವಾಗ್ಧಾಳಿ ನಡೆಸಿದರಲ್ಲದೆ, ಪ್ರವಾಸ ಸಂದರ್ಭದಲ್ಲಿ ನನಗೆ ಆತಿಥ್ಯ ನೀಡಿದ ದಂಪತಿಯನ್ನು ಬೆಂಗಳೂರಿಗೆ ಕರೆಸಿ ಗೌರವಿಸುವುದಾಗಿ ತಿಳಿಸಿದರು. ಸಮಿತಿಯ ರಾಜ್ಯಾಧ್ಯಕ್ಷ ಚಂದ್ರಕಾಂತ ಎಸ್‌.ಕಾದೊÅಳ್ಳಿ ಇತರರು ಇದ್ದರು.

ಕಳೆದ 60 ವರ್ಷದ ಅಧಿಕಾರಾವಧಿಯಲ್ಲಿ ಕಾಂಗ್ರೆಸ್‌ ಪಕ್ಷ ಏನು ಮಾಡಿದೆ?, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಹುಲ್‌ಗಾಂಧಿಯವರ ಕ್ಲಾಸ್‌ನಲ್ಲಿ ತರಬೇತಿ ಪಡೆಯುತ್ತಿದ್ದಾರೆ. ರಾಹುಲ್‌ಗಾಂಧಿ ತರಗತಿಯಲ್ಲಿ ಓದಿ ಪಾಸಾಗುವುದು ಉಂಟೆ?. ಹೀಗಾಗಿಯೇ ಕೇಂದ್ರ ಸರ್ಕಾರದ ನಿರ್ಧಾರವನ್ನು ಸಿಎಂ ವಿರೋಧಿಸುತ್ತಿದ್ದಾರೆ.
-ಮುರಳೀಧರ್‌ ರಾವ್‌, ರಾಜ್ಯ ಬಿಜೆಪಿ ಉಸ್ತುವಾರಿ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹೊಸ ಭಾರತದ ಪರಿಕಲ್ಪನೆಗೆ ಹಿಂದುಳಿದ ವರ್ಗಗಳ ಆಯೋಗದ ಸಂವಿಧಾನಾತ್ಮಕ ಸ್ಥಾನಮಾನ ಹೊಸ ಮೈಲಿಗಲ್ಲು ನೀಡಲಿದೆ. ಪಶ್ಚಿಮಬಂಗಾಲ, ಒಡಿಶಾ ಹಾಗೂ ಕರ್ನಾಟಕ ಸರ್ಕಾರ ರಾಜಕೀಯ ಉದ್ದೇಶದಿಂದಲೇ ಇದನ್ನು ವಿರೋಧಿಸುತ್ತಿದ್ದಾರೆ.
-ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ.

ಸಾಮಾಜಿಕ ನ್ಯಾಯಕ್ಕೆ ಸಿದ್ದರಾಮಯ್ಯ ಅಡ್ಡಗಾಲು ಹಾಕುತ್ತಿದ್ದಾರೆ. ಹಿಂದುಳಿದ ವರ್ಗದ ನಾಯಕ ನಂತೆ ಬಿಂಬಿಸಿಕೊಂಡು ಹಿಂದುಳಿದ ವರ್ಗದ ಆಯೋಗಕ್ಕೆ ಸಾಂವಿಧಾನಾತ್ಮಕ ಸ್ಥಾನಮಾನ ನೀಡುವುದನ್ನು
ವಿರೋಧಿಸುತ್ತಿದ್ದಾರೆ. ಇದರ ವಿರುದಟಛಿ ಹೋರಾಟ ನಡೆಸುವುದು ಅಗತ್ಯ.

– ಅನಂತಕುಮಾರ್‌ ಕೇಂದ್ರ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next