Advertisement

ರಾಜ್ಯ ಬಜೆಟ್ ನಲ್ಲಿ ಪರಿಣಾಮ ಬೀರುವ ಘೋಷಣೆ ಬೇಡ; ಚು.ಆಯೋಗಕ್ಕೆ BJP

04:18 PM Mar 10, 2017 | Sharanya Alva |

ಬೆಂಗಳೂರು:ಮುಂಬರುವ ರಾಜ್ಯ ಬಜೆಟ್ ನಲ್ಲಿ ಉಪಚುನಾವಣೆ ಮೇಲೆ ಪರಿಣಾಮ ಬೀರುವಂತಹ ಘೋಷಣೆ ಬೇಡ ಎಂದು ರಾಜ್ಯ ಸರ್ಕಾರಕ್ಕೆ ತಕ್ಷಣವೇ ನಿರ್ದೇಶನ ನೀಡುವಂತೆ ರಾಜ್ಯ ಬಿಜೆಪಿ ನಿಯೋಗ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

Advertisement

ಶಾಸಕ ಸುರೇಶ್ ಕುಮಾರ್ ನೇತೃತ್ವದ ರಾಜ್ಯ ಬಿಜೆಪಿ ನಿಯೋಗ, ನಾವು ಬಜೆಟ್ ಮುಂದೂಡುವಂತೆ ಒತ್ತಾಯಿಸುತ್ತಿಲ್ಲ. ಆದರೆ ಬಜೆಟ್ ನಲ್ಲಿ ಪರಿಣಾಮ ಬೀರುವ ಘೋಷಣೆ ಬೇಡ ಎಂದು ಚುನಾವಣಾ ಆಯೋಗ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ಒತ್ತಾಯಿಸಿದೆ.

2017-18ನೇ ಸಾಲಿನ ರಾಜ್ಯ ಬಜೆಟ್ ಅನ್ನು ವಿತ್ತ ಸಚಿವರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 15ರಂದು ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲಿದ್ದಾರೆ. ಮುಂದಿನ ವರ್ಷ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯ ಬಜೆಟ್ ಭರ್ಜರಿ ಕೊಡುಗೆ ಘೋಷಿಸುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next