Advertisement
ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟ ಪ್ರದೇಶದಲ್ಲಿರುವ ಗೋಪಿನಾಥಂ ಸಮೀಪ 5 ಕೋಟಿರೂ. ವೆಚ್ಚದಲ್ಲಿ ವನ್ಯಜೀವಿ ಸಫಾರಿ ಮತ್ತು ಪರಿಸರಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲಾಗು ವುದು.ಚಾಮರಾಜನಗರದಲ್ಲಿ ಅರಿಶಿನ ಮಾರುಕಟ್ಟೆ ಯನ್ನು ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವ ದಲ್ಲಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಲಾಗಿದೆ. ಆದರೆ ಅದಕ್ಕೆ ಎಷ್ಟು ಮೊತ್ತ ಎಂದು ನಮೂದಿಸಿಲ್ಲ. ಚಾಮರಾಜನಗರ ತಾಲೂಕಿನ ಬೂದಿಪಡಗದಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಆನೆ ಶಿಬಿರ ಪ್ರಾರಂಭಿಸಲಾಗುವುದು. ನಿರ್ಮಾಣ ಕಾರ್ಮಿಕರು ವಸತಿ ಸಮಸ್ಯೆ ಎದುರಿಸುತ್ತಿರುವ ಕಾರಣ ಕಾರ್ಮಿಕರ ಕಲ್ಯಾಣ ಮಂಡಳಿ ಯಿಂದ ಚಾಮರಾಜನಗರವೂಸೇರಿ ನಾಲ್ಕೈದು ಜಿಲ್ಲೆ ಗಳಲ್ಲಿ ತಾತ್ಕಾಲಿಕವಾದ 1 ವಸತಿ ಗೃಹ ನಿರ್ಮಿಸಲಾಗುವುದು.
Related Articles
Advertisement
ಯಳಂದೂರಿನ 30 ಹಾಸಿಗೆಗಳ ಆಸ್ಪತ್ರೆಯನ್ನು 100 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ 15.3 ಕೋಟಿ ರೂ ವೆಚ್ಚದ ಪ್ರಸ್ತಾವ ಈಗಾಗಲೇ ಕಳು ಹಿಸಲಾಗಿತ್ತು. ಇವು ಅಧಿಕೃತವಾಗಿ ಜಿಲ್ಲಾಧಿಕಾರಿಯವರೇ ಮಂಡಿ ಸಿದ್ದ ಪ್ರಸ್ತಾವಗಳು. ಇದರ ಬಗ್ಗೆ ಬಜೆಟ್‌ನಲ್ಲಿ ಯಾವುದೇ ಚಕಾರ ಇಲ್ಲ
ಹೊಸ ಬಸ್ ನಿಲ್ದಾಣ :
ನಗರದಲ್ಲಿ ಈಗಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಚಿಕ್ಕದಾಗಿದ್ದು, ವಿಶಾಲವಾದ ಹೈಟೆಕ್ ಬಸ್ ನಿಲ್ದಾಣವನ್ನು ಸಂತೆಮರಹಳ್ಳಿ ರಸ್ತೆಯ ರೇಷ್ಮೆ ಇಲಾಖೆ ಕಟ್ಟಡದ ಆವರಣದಲ್ಲಿ ನಿರ್ಮಿಸಲು ಅನುದಾನ ನಿರೀಕ್ಷಿಸಲಾಗಿತ್ತು.
ಪ್ರವಾಸಿತಾಣಗಳ ಅಭಿವೃದ್ಧಿಗೆ ಅನುದಾನ: ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ಪ್ರವಾಸಿ ತಾಣಗಳ ಅಭಿವೃದ್ಧಿ ಮತ್ತು ಪ್ರವಾಸಿಗರನ್ನು ಆಕರ್ಷಿಸುವ ಯೋಜನೆಗಳನ್ನು ರೂಪಿಸಿ ಅಭಿವೃದ್ಧಿ ಪಡಿಸಲು ನೂರಾರು ಕೋಟಿ ರೂ.ಗಳ ಅನುದಾನದ ಅಗತ್ಯವಿತ್ತು.ಕೈಗಾರಿಕಾ ಪ್ರದೇಶ ಅಭಿವೃದ್ಧಿ: ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ತಾಲೂಕಿನಬದನಗುಪ್ಪೆ-ಕೆಲ್ಲಂಬಳ್ಳಿ ಪ್ರದೇಶದಲ್ಲಿ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿ ಪಡಿಸಲು ಸ್ಥಳಮೀಸಲಿರಿಸಲಾಗಿದೆ. ಅಲ್ಲಿಗೆ ರಸ್ತೆ, ಬೀದಿದೀಪ ಇನ್ನಿತರ ಮೂಲಸೌಕರ್ಯ ಒದಗಿಸಲಾಗಿದೆ. ಅದರೆ ಇನ್ನೂ ಅಲ್ಲಿ ಕೈಗಾರಿಕೆಗಳು ಸ್ಥಾಪನೆಗೊಂಡಿಲ್ಲ. ಅದಕ್ಕಾಗಿ ನೂತನ ಬಜೆಟ್‌ನಲ್ಲಿ ಅನುದಾನ ನಿರೀಕ್ಷೆ ಮಾಡಲಾಗಿತ್ತು. ಈ ಎಲ್ಲ ನಿರೀಕ್ಷೆಗಳನ್ನು ಮುಖ್ಯಮಂತ್ರಿಯವರು ನಿರೀಕ್ಷೆಯಾಗೇ ಉಳಿಸಿದ್ದಾರೆ.
ಪ್ರವಾಸೋದ್ಯಮಕ್ಕೆ ಅನುದಾನ ಇಲ್ಲ,ಕೈಗಾರಿಕೆ ಪ್ರದೇಶಕ್ಕೆ ದಂಬಡಿ ಹಣವಿಲ್ಲ :
ಸಮ್ಮಿಶ್ರ ಸರ್ಕಾರದಲ್ಲಿ ಎನ್. ಮಹೇಶ್ ಶಿಕ್ಷಣ ಸಚಿವರಾಗಿದ್ದಾಗ ಜಿಲ್ಲೆಯ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿಗೆ 79.92 ಕೋಟಿ ರೂ. ಬಿಡುಗಡೆ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈಗ ಕೊಠಡಿಗಳ ನಿರ್ಮಾಣ ಸೇರಿದಂತೆ ಜಿಲ್ಲೆಯ ಶಾಲೆಗಳ ಅಭಿವೃದ್ಧಿಗೆ 100 ಕೋಟಿ ರೂ. ಗಳ ಅನುದಾನ ಅಗತ್ಯವಿದೆ. ಅದನ್ನು ಬಜೆಟ್‌ನಲ್ಲಿ ನೀಡಬೇಕು ಎಂಬ ಕೋರಲಾಗಿತ್ತು. ಕಾನೂನು ಕಾಲೇಜು: ಜಿಲ್ಲೆಯಲ್ಲಿಸರ್ಕಾರಿ ಕಾನೂನು ಕಾಲೇಜು ಆರಂಭವಾಗಲು ರಾಜ್ಯ ಸರ್ಕಾರ ಅನುದಾನ ನೀಡಿಲ್ಲ.
ವಿಶ್ವವಿದ್ಯಾನಿಲಯ: ನಗರದ ಡಾ. ಅಂಬೇಡ್ಕರ್‌ಸ್ನಾತಕೋತ್ತರ ಕೇಂದ್ರವನ್ನು ವಿಶ್ವವಿದ್ಯಾಲಯವಾಗಿ ಮಾಡುವ ಉದ್ದೇಶದಿಂದ ಸ್ಥಾಪಿಸಲಾಗಿದೆ. ಇದ ರಿಂದ ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಸಹಾಯಕವಾಗು ತ್ತದೆ. ಆದ್ದರಿಂದ ಇದನ್ನು ವಿವಿಯಾಗಿಪರಿವರ್ತಿಸ ಬೇಕು ಎಂಬ ಬೇಡಿಕೆ ಶೈಕ್ಷಣಿಕ ವಲಯದಲ್ಲಿತ್ತು.
ಬಹುಗ್ರಾಮ ಕುಡಿಯುವ ನೀರಿನ ಯೋಜನೆ: ಚಾಮರಾಜನಗರ, ಗುಂಡ್ಲುಪೇಟೆ ತಾಲೂಕಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಕಾರ್ಯಗತವಾಗಿದೆ. ಹನೂರು ತಾಲೂಕಿಗೆಇನ್ನೂ ಜಾರಿಯಾಗಿಲ್ಲ. ಆ ತಾಲೂಕಿನ 291 ಹಳ್ಳಿಗಳಿಗೆ 414 ಕೋಟಿ ರೂ. ಗಳ ಯೋಜನೆ ರೂಪಿಸಲಾಗಿತ್ತು.
ಕಾವೇರಿ 2ನೇ ಹಂತ: ಜಿಲ್ಲಾ ಕೇಂದ್ರ ಚಾಮರಾಜ ನಗರಕ್ಕೆ ತಿ.ನರಸೀಪುರದಿಂದ ಕಾವೇರಿ ನೀರುಪೂರೈಸಲಾಗುತ್ತಿದ್ದು, ಈಗಿನ ಜನಸಂಖ್ಯೆಗೆ ಈ ನೀರು ಸಾಲುತ್ತಿಲ್ಲ. ಹೀಗಾಗಿ ಪಟ್ಟಣಕ್ಕೆ ಎರಡನೇ ಹಂತದಕಾವೇರಿ ಕುಡಿಯುವ ನೀರಿನ ಯೋಜ® ಯನ್ನುನಿರೀಕ್ಷಿಸಲಾಗಿದೆ. ಮಾಲಂಗಿಯಿಂದ ಪೈಪುಗಳ ಮೂಲಕ ನೀರು ಪೂರೈಸುವ ಈ ಯೋಜನೆಗೆ 220ಕೋಟಿ ರೂ. ಅಂದಾಜು ತಯಾರಿಸಲಾಗಿದೆ. ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
–ಕೆ.ಎಸ್. ಬನಶಂಕರ ಆರಾಧ್ಯ