ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಎರಡನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. 2023-24ರ ಆಯವ್ಯಯ ಪತ್ರದಲ್ಲಿ ಗ್ರಾಮ ಸಹಾಯಕ, ಅಂಗನವಾಡಿ-ಆಶಾ ಕಾರ್ಯಕರ್ತೆಯರ ಸಹಾಯಧನ ಹೆಚ್ಚಳ ಮಾಡುವ ಘೋಷಣೆ ಮಾಡಿದ್ದಾರೆ.
ಗ್ರಾಮ ಸಹಾಯಕರ ಹುದ್ದೆಯನ್ನು ‘ಜನಸೇವಕ’ ಎಂದು ಮರುನಾಮಕರಣ ಮಾಡಲಾಗಿದೆ. ಗ್ರಾಮ ಸಹಾಯಕರ ಮಾಸಿಕ ಗೌರವಧನ 13,000 ರೂ. ಗಳಿಂದ. 14,000 ರೂ. ಗೆ ಹೆಚ್ಚಳ ಮಾಡಲಾಗುವುದು ಎಂದು ಘೋಷಿಸಿದರು.
ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಸಹಾಯಧನವನ್ನು 1000 ರೂ. ನಿಂದ 1500 ರೂ.ಗೆ ಏರಿಕೆ ಮಾಡಲಾಗುವುದು ಎಂದು ಘೋಷಿಸಿದರು.
ಮನೆ ಮನೆಗೆ ಆರೋಗ್ಯ ಕಾರ್ಯಕ್ರಮ ಜಾರಿ ಮಾಡುತ್ತಿದ್ದು, ಹಾವೇರಿ ಜಿಲ್ಲೆ ಸವಣೂರಿನಲ್ಲಿ 165 ಕೋಟಿ ರೂಪಾಯಿ ವೆಚ್ಚದಲ್ಲಿ ಬೃಹತ್ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದರು.