Advertisement
ಇದನ್ನೂ ಓದಿ:INDvsENG; 90 ವರ್ಷಗಳ ಭಾರತೀಯ ಇತಿಹಾಸದಲ್ಲಿ ದಾಖಲೆ ಬರೆದ ಧ್ರುವ್ ಜುರೆಲ್
Related Articles
Advertisement
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ವಲಸೆ ಹೋದ ಸಂದರ್ಭದಲ್ಲಿ ಅವರಿಗೆ ತಾತ್ಕಾಲಿಕ ವಸತಿ ಸೌಲಭ್ಯ ಒದಗಿಸಲು ಆಯ್ದ 10 ಜಿಲ್ಲೆಗಳಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ತಾತ್ಕಾಲಿಕ ವಸತಿ ಸಮುಚ್ಛಯಗಳನ್ನು ನಿರ್ಮಿಸಲಾಗುವುದು ಎಂದು ಬಜೆಟ್ ನಲ್ಲಿ ಘೋಷಿಸಲಾಗಿದೆ.
ವಾಣಿಜ್ಯ ಸಾರಿಗೆ ವಾಹನಗಳ ನೋಂದಣಿಯ ಮೇಲೆ ಸುಂಕವನ್ನು ವಿಧಿಸುವ ಮೂಲಕ ಸಾರಿಗೆ ವಾಹನಗಳ ಕಾರ್ಮಿಕರಿಗೆ ಭದ್ರತಾ ಮತ್ತು ಕಲ್ಯಾಣ ಕಾರ್ಯಕ್ರಮಗಳನ್ನು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ರೂಪಿಸಲಾಗುವುದು. ಅಲ್ಲದೇ ವಾಹನ ಚಾಲಕರಿಗೆ ನಿಲ್ದಾಣ/ಹೆದ್ದಾರಿ ಬದಿಯಲ್ಲಿ ಅಗತ್ಯ ಮೂಲಸೌಕರ್ಯ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಮುಂಗಡ ಪತ್ರದಲ್ಲಿ ತಿಳಿಸಲಾಗಿದೆ.
ಇ.ಎಸ್.ಐ ಯೋಜನೆಯಡಿ ಒಟ್ಟಾರೆ 311 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಸೇವೆಗಳು, point Of Care Moblie Digital Diagnostic Kiosk, Mobile Health Unit, 40 ವರ್ಷ ಮೇಲ್ಪಟ್ಟು ಕಾರ್ಮಿಕರಿಗೆ ಸಮಗ್ರ ಆರೋಗ್ಯ ತಪಾಸಣೆ, ಎಲ್ಲಾ ವಿಮಾದಾರರಿಗೆ Tetanus ಮತ್ತು Hepatitis ಲಸಿಕೆ ಕಾರ್ಯಕ್ರಮ ಹಾಗೂ ಅತ್ಯಾಧುನಿಕ ರೋಗಪತ್ತೆ ಹಚ್ಚುವ ಕೇಂದ್ರ ಸ್ಥಾಪನೆ ಅನುಷ್ಠಾನಗೊಳಿಸುವುದಾಗಿ ಬಜೆಟ್ ನಲ್ಲಿ ಘೋಷಿಸಲಾಗಿದೆ.