Advertisement

ಮಾ.5ರಂದು ರಾಜ್ಯ ಬಜೆಟ್‌ ಮಂಡನೆ: ಸಿಎಂ ಯಡಿಯೂರಪ್ಪ

09:23 AM Jan 16, 2020 | sudhir |

ಶಿಕಾರಿಪುರ/ದಾವಣಗೆರೆ: ಅಮಿತ್‌ ಶಾ ರಾಜ್ಯಕ್ಕೆ ಭೇಟಿ ನೀಡಿದ ಅನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಹೇಳಿದರು.

Advertisement

ಪಟ್ಟಣದ ಸ್ವಗೃಹದಲ್ಲಿ ಕುಟುಂಬದವರೊಂದಿಗೆ ಸಂಕ್ರಾಂತಿ ಪೂಜೆ ಸಲ್ಲಿಸಿ ಬೇವು-ಬೆಲ್ಲ ವಿತರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ.18ರಂದು ಹುಬ್ಬಳ್ಳಿಗೆ ಅಮಿತ್‌ ಶಾ ಬರಲಿದ್ದು ಅವರೊಂದಿಗೆ ಚರ್ಚಿಸಿ ಸಚಿವ ಸಂಪುಟ ವಿಸ್ತರಣೆ ನಡೆಸಲಾಗುವುದು. ಮಾ. 5ರಂದು ರಾಜ್ಯ ಬಜೆಟ್‌ ಮಂಡಿಸಲಿದ್ದು, ಇದಕ್ಕಾಗಿ ಒಂದು ತಿಂಗಳ ಕಾಲ ತಯಾರಿ ನಡೆಯಲಿದೆ ಎಂದರು.

ರಾಜ್ಯದ ವಿವಿಧೆಡೆಯಿಂದ ಆಗಮಿಸಿದ ಸಾರ್ವಜನಿಕರ ಮನವಿ ಸ್ವೀಕರಿಸಿದ ಸಿಎಂ ಆಬಳಿಕ ಶ್ರೀ ಹುಚ್ಚರಾಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಆ ಬಳಿಕ ದಾವಣಗೆರೆಯಲ್ಲಿ ಮಾತನಾಡಿದ ಅವರು, ಮಾ.5ರಂದು ಬಜೆಟ್‌ ಮಂಡನೆಗೆ ದಿನಾಂಕ ನಿಗದಿಯಾಗಿದ್ದು, ನಾನು ಸಹ ರೈತನ ಮಗ. ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಈ ಬಾರಿ ಪ್ರತ್ಯೇಕ ಕೃಷಿ ಬಜೆಟ್‌ ಮಂಡಿಸುವ ಬಗ್ಗೆ ಇನ್ನೂ ಆಲೋಚಿಸಿಲ್ಲ ಆದರೆ ಬಜೆಟ್‌ನಲ್ಲಿ ಕೃಷಿ ಕ್ಷೇತ್ರ ಹಾಗೂ ರೈತರ ಹಿತ ಕಾಯಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next