Advertisement

ಸಂಕ್ರಾಂತಿ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ: ಈಶ್ವರಪ್ಪ

09:57 AM Jan 04, 2020 | Hari Prasad |

ಶಿವಮೊಗ್ಗ: ಸಂಕ್ರಾಂತಿ ಅನಂತರ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಎರಡೂ ಏಕಕಾಲದಲ್ಲಿ ಆಗಬಹುದು. ಈ ಬಗ್ಗೆ ಹೈಕಮಾಂಡ್‌ ನಿರ್ಧರಿಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

Advertisement

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರಕಾರ ಆಡಳಿತಕ್ಕೆ ಬರಲು ಕಾರಣರಾದ ಮತ್ತು ಉಪ ಚುನಾವಣೆಯಲ್ಲಿ ಗೆದ್ದವರಿಗೆ ಸ್ಥಾನಮಾನ ನೀಡುವುದಂತೂ ಖಚಿತ. ಆರ್‌.ಶಂಕರ್‌ ಕುರಿತು ಸುಪ್ರೀಂ ಕೋರ್ಟ್‌ ಕೆಲವು ನಿರ್ದೇಶಗಳನ್ನು ನೀಡಿದೆ. 6 ತಿಂಗಳುಗಳಲ್ಲಿ ಎಂಎಲ್‌ಎ ಅಥವಾ ಎಂಎಲ್‌ಸಿ ಆಗಬೇಕೆಂದು ಹೇಳಿರುವುದರಿಂದ ಅದರಂತೆ ನಡೆದುಕೊಳ್ಳಬೇಕಾಗುತ್ತದೆ ಎಂದರು.

ಉಪಮುಖ್ಯಮಂತ್ರಿ ಹುದ್ದೆ ಬೇಡ ಎಂದು ಸಹಿ ಸಂಗ್ರಹ ಮಾಡುತ್ತಿಲ್ಲ ಎಂದು ಶಾಸಕ ರೇಣುಕಾಚಾರ್ಯ ಅವರೇ ಸ್ಪಷ್ಟಪಡಿಸಿದ್ದಾರೆ. ಇವನ್ನೆಲ್ಲ ಬೀದಿಯಲ್ಲಿ ನಿಂತು ಮಾತನಾಡಲಾಗದು. ಪಕ್ಷದೊಳಗೆ ಆಂತರಿಕವಾಗಿ ಸರಿಪಡಿಸಿಕೊಳ್ಳಲಾಗುವುದು ಎಂದರು.

ಮಹಾರಾಷ್ಟ್ರ ಸರಕಾರ ಅನಗತ್ಯವಾಗಿ ಕನ್ನಡಿಗರನ್ನು ಕೆಣಕುತ್ತಿದೆ. ಗಡಿ ವಿವಾದ ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿದೆ. ಶಿವಸೇನೆ-ಎಂಇಎಸ್‌ನವರು ಅವಕಾಶಕ್ಕಾಗಿ ಅರ್ಥವಿಲ್ಲದ ಇಂಥ ಮಾತುಗಳನ್ನು ಕ್ಯಾತೆ ರೂಪದಲ್ಲಿ ತೆಗೆಯುತ್ತಿದ್ದಾರೆ. ಕರ್ನಾಟಕದ ಭಾಷೆ, ನೆಲ, ಜಲದ ವಿಷಯ ಬಂದಾಗ ಕನ್ನಡಿಗರ ಸ್ವಾಭಿಮಾನಕ್ಕೆ ತಕ್ಕಂತೆ ಕೆಲಸ ಮಾಡಬೇಕಾಗುತ್ತದೆ ಎಂದು ಈಶ್ವರಪ್ಪ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next