Advertisement
ಕಾಂಗ್ರೆಸ್‌ನಲ್ಲಿ ಖಾಲಿ ಇರುವ ಆರು ಸ್ಥಾನಗಳಿಗೆ ಜಾತಿ ಹಾಗೂ ಪ್ರಾದೇಶಿಕ ಲೆಕ್ಕಾಚಾರದಲ್ಲಿ ತೀವ್ರ ಪೈಪೋಟಿ ನಡೆಯುತ್ತಿದೆ. ಲಿಂಗಾಯಿತ, ಕುರುಬ, ಮುಸ್ಲಿಂ, ಎಸ್‌ಟಿ ಹಾಗೂ ಎಡಗೈ ಪಂಗಡಕ್ಕೆ ಅವಕಾಶ ಕೊಡುವ ಲೆಕ್ಕಾಚಾರಗಳು ನಡೆಯುತ್ತಿವೆ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್, ಸಚಿವ ಡಿ.ಕೆ.ಶಿವಕುಮಾರ್ ಅವರು ತಮ್ಮ ಬೆಂಬಲಿಗರನ್ನು ಸಂಪುಟಕ್ಕೆ ಸೇರಿಸಲು ತೆರೆಮರೆಯ ಕಸರತ್ತು ನಡೆಸುತ್ತಿದ್ದಾರೆ.
Related Articles
Advertisement
ಲಂಬಾಣಿ ಸಮುದಾಯಕ್ಕೆ ಯಾವುದೇ ಪ್ರಾತಿನಿಧ್ಯ ನೀಡಿಲ್ಲ ಎಂದು ಪಿ.ಟಿ. ಪರಮೇಶ್ವರ್ ನಾಯ್ಕ ಹಾಗೂ ಭೀಮಾನಾಯ್ಕ ಪೈಪೋಟಿ ನಡೆಸಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಆರು ಶಾಸಕರು ಆಯ್ಕೆಯಾಗಿದ್ದು, ನಾಯಕ ಸಮುದಾಯದಕ್ಕೆ ಸೇರಿರುವ ಬಿ. ನಾಗೇಂದ್ರಗೆ ನೀಡುವಂತೆ ಜಾರಕಿಹೊಳಿ ಸಹೋದರರು ಪಕ್ಷದ ನಾಯಕರ ಮೇಲೆ ಒತ್ತಡ ಹೇರುತ್ತಿದ್ದಾರೆ. ಆದರೆ, ನಾಗೇಂದ್ರಗೆ ಸಚಿವ ಸ್ಥಾನ ನೀಡಲು ತುಕಾರಾಂ ವಿರೋಧ ವ್ಯಕ್ತಪಡಿಸಿ ಮೂಲ ಕಾಂಗ್ರೆಸ್ಸಿಗರಾದ ತಮಗೇ ನೀಡಬೇಕು ಎಂದು ಒತ್ತಡ ಹೇರುತ್ತಿದ್ದಾರೆ ಎನ್ನಲಾಗುತ್ತಿದೆ.
ಮುಸ್ಲಿಂ ಸಮುದಾಯದಲ್ಲಿ ರಹೀಂ ಖಾನ್, ತನ್ವಿರ್ ಸೇs…, ರೋಷನ್ ಬೇಗ್ ಅವರು ಪ್ರಯತ್ನ ನಡೆಸಿದ್ದಾರೆ. ದಲಿತ ಸಮುದಾಯದ ಎಡಗೈ ಪಂಗಡದಲ್ಲಿ ಮಾಜಿ ಸಚಿವ ಆರ್.ಬಿ. ತಿಮ್ಮಾಪುರ, ರೂಪಾ ಶಶಿಧರ್ ಹಾಗೂ ಪರಿಷತ್ ಸದಸ್ಯ ಧರ್ಮಸೇನ್ ಅವರ ಹೆಸರುಗಳು ಕೇಳಿ ಬರುತ್ತಿವೆ.
ಬೆಂಗಳೂರಿಗೆ ಇನ್ನೊಂದು ಸಚಿವ ಸ್ಥಾನ ನೀಡಬೇಕೆಂಬ ಒತ್ತಡ ಹೆಚ್ಚಾಗಿದೆ. ಪ್ರಮುಖವಾಗಿ ಹಿರಿಯ ಶಾಸಕರಾಗಿರುವ ರಾಮಲಿಂಗಾ ರೆಡ್ಡಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬ ಒತ್ತಡ ಹೆಚ್ಚಾಗಿದ್ದು, ಈಗಾಗಲೇ ಬೆಂಗಳೂರಿನಲ್ಲಿ ಮೂವರು ಸಚಿವರಿರುವುದರಿಂದ ಇನ್ನೊಂದು ಸಚಿವ ಸಿಗುವುದು ಕಷ್ಟ ಎಂಬ ಮಾತುಗಳು ಇವೆ.
ಹೀಗಾಗಿ, ಖಾಲಿ ಇರುವ ಆರು ಸ್ಥಾನಗಳಿಗೆ ಡಜನ್‌ಗೂ ಹೆಚ್ಚು ಆಕಾಂಕ್ಷಿಗಳಿರುವುದರಿಂದ ಯಾರಿಗೆ ಕೊಟ್ಟರೂ ಮತ್ತೂಬ್ಬರು ಬಂಡಾಯ ಸಾರುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ, ಮತ್ತಷ್ಟು ದಿನ ಸಂಪುಟ ವಿಸ್ತರಣೆ ಮುಂದೂಡಿದರೂ ಆಶ್ಚರ್ಯವಿಲ್ಲ ಎಂದು ಹೇಳಲಾಗುತ್ತಿದೆ.