Advertisement
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿತ್ತು. ಸಭೆ ಬಳಿಕ ಸಚಿವ ಜಯಚಂದ್ರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ 2011ನೇ ಸಾಲಿನ 362 ಪ್ರೊಬೆಶನರಿ ಅಧಿಕಾರಿಗಳ ನೇಮಕಕ್ಕೆ ನಿರ್ಧರಿಸಿರುವ ತೀರ್ಮಾನದ ಬಗ್ಗೆ ಕೆಪಿಎಸ್ಸಿ ಅಭ್ಯರ್ಥಿಗಳು ತುಂಬಾ ಸಂತಸ ವ್ಯಕ್ತಪಡಿಸಿದ್ದಾರೆ. ಕಳೆದ 6 ವರ್ಷಗಳಿಂದ ಕಷ್ಟ ಪಟ್ಟಿದ್ದೇವೆ. ಕೊನೆಗೂ ನಮ್ಮ ಹೋರಾಟಕ್ಕೆ ಜಯ ಸಂದಿದೆ. ನಮ್ಮ ಕೆಲಸದ ಮೂಲಕ ನಾವು ಉತ್ತರ ನೀಡುತ್ತೇವೆ ಎಂದು ವಿಧಾನಸೌಧದ ಬಳಿ ಪ್ರತಿಕ್ರಿಯೆ ನೀಡಿದ್ದಾರೆ.
Related Articles
ನಾವು ನಮ್ಮ ನೆಲದಲ್ಲಿ ಅಣೆಕಟ್ಟು ಕಟ್ಟುತ್ತಿದ್ದೇವೆ. ಹಾಗಾಗಿ ಮೇಕೆದಾಟು ಅಣೆಕಟ್ಟು ಕಟ್ಟುವ ಯೋಜನೆಯಿಂದ ಹಿಂದೆ ಸರಿಯುವುದಿಲ್ಲ. ತಮಿಳುನಾಡು ಸರ್ಕಾರ ಪ್ರಧಾನಿಗೆ ದೂರು ಕೊಟ್ಟರೂ, ನಾವು ನಮ್ಮ ಯೋಜನೆಯನ್ನು ಕೈಬಿಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಭೆ ನಂತರ ಸುದ್ದಿಗಾರರ ಜೊತೆ ಮಾತನಾಡುತ್ತ ತಿಳಿಸಿದ್ದಾರೆ.
Advertisement