Advertisement
ಪ್ರಸ್ ಕ್ಲಬ್ ಆಫ್ ಬೆಂಗಳೂರು ಹಾಗೂ ಬೆಂಗಳೂರು ವರದಿಗಾರರ ಕೂಟ ಶನಿವಾರ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಇದೇ ಫೆ.28ರಂದು ಪ್ರಕಟಿಸಲಾದ ಅಂತಿಮ ಮತದಾರರ ಪಟ್ಟಿ ಪ್ರಕಾರ ರಾಜ್ಯದ ಒಟ್ಟು ಮತದಾರರ ಸಂಖ್ಯೆ 4.96 ಕೋಟಿ ಇದೆ. ಹೆಸರು ಸೇರ್ಪಡೆಗೆ ಎ.8ರಂದು ಮಿಂಚಿನ ನೋಂದಣಿ ಅಭಿಯಾನ ನಡೆಸಲಾಯಿತು. ಆಗ 6.45 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಅಲ್ಲದೇ ಹೊಸದಾಗಿ ಹೆಸರು ಸೇರಿಸಲು ಎ.14ರವರೆಗೆ ಅವಕಾಶವಿತ್ತು. ಈ ಹಿನ್ನೆಲೆಯಲ್ಲಿ ಮತದಾರರ ಸಂಖ್ಯೆ ಐದು ಕೋಟಿ ದಾಟಬಹುದು ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದರು.
Related Articles
Advertisement
ಮತಗಟ್ಟೆಗಳು ನೆಲಮಹಡಿಯಲ್ಲಿ: 2013ರ ಚುನಾವಣೆಯಲ್ಲಿ ರಾಜ್ಯದ ಸುಮಾರು 800ಕ್ಕೂ ಹೆಚ್ಚು ಮತಗಟ್ಟೆಗಳನ್ನು ಮೊದಲ ಮಹಡಿಯಲ್ಲಿ ಸ್ಥಾಪಿಸಲಾಗಿತ್ತು. ಇದರಿಂದ ಹಿರಿಯ ನಾಗರೀಕರು, ಅಂಗವೀಕಲರಿಗೆ ತುಂಬಾ ತೊಂದರೆಗಳು ಆಗಿದ್ದವು. ಈ ಬಗ್ಗೆ ಅನೇಕ ದೂರು ಮತ್ತು ಆಕ್ಷೇಪಣೆಗಳು ಸಹ ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ 2018ರ ಚುನಾವಣೆಗೆ ಮತದಾನ ನಡೆಯುವ 41,314 ಸ್ಥಳಗಳಲ್ಲಿ 58,546 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದ್ದು, ಅದೆಲ್ಲವೂ ನೆಲಮಹಡಿಯಲ್ಲಿರಲಿವೆ. ಈಗಾಗಲೇ ಪ್ರತಿಯೊಂದು ಮತಗಟ್ಟೆಯ ಸ್ಥಳ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳು ಖಾತರಿಪಡಿಸಿಕೊಂಡಿದ್ದಾರೆ. ಮತಗಟ್ಟೆಗಳಲ್ಲಿ ಮೂಲ ಸೌಕರ್ಯಗಳನ್ನು ಪೂರೈಸುವ ಸಿದ್ಧತೆ ಪೂರ್ಣಗೊಂಡಿದೆ ಎಂದು ಇದೇ ವೇಳೆ ಸಂಜೀವ್ ಕುಮಾರ್ ಮಾಹಿತಿ ನೀಡಿದರು.
ಮಾಧ್ಯಮ ಸಂವಾದದಲ್ಲಿ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿಗಳಾದ ಬಿ.ಆರ್. ಮಮತಾ, ಕೆ.ಜಿ. ಜಗದೀಶ್, ಉಜ್ವಲ್ ಕುಮಾರ್ ಘೋಷ್, ಜಂಟಿ ಚುನಾವಣಾಧಿಕಾರಿಗಳಾದ ಕೆ.ಎನ್. ರಮೇಶ್, ರಾಘವೇಂದ್ರ, ನಗರ ಜಿಲ್ಲಾಧಿಕಾರಿ ದಯಾನಂದ್, ಪ್ರಸ್‌ಕ್ಲಬ್ ಅಧ್ಯಕ್ಷ ಸದಾಶಿವ ಶೆಣೈ ಹಾಗೂ ಪದಾಧಿಕಾರಿಗಳು ಮತ್ತಿತರರು ಇದ್ದರು.
“ಚುನಾವಣಾ ವೆಚ್ಚದ ಮಿತಿ 28 ಲಕ್ಷ ರೂ. ಮಾಡಿರುವುದಕ್ಕೆ ರಾಜಕೀಯ ಪಕ್ಷಗಳು ಅಪಸ್ವರ ಎತ್ತಿವೆ. ಕೆಲವರು ಲಿಖೀತವಾಗಿ ಮನವಿ ಸಹ ಕೊಟ್ಟಿದ್ದಾರೆ. ಆದರೆ, ವೆಚ್ಚ ನಿಗದಿಪಡಿಸುವ ಅಧಿಕಾರಿ ಕೇಂದ್ರ ಚುನಾವಣಾ ಆಯೋಗಕ್ಕೆ ಇದೆ. ಈ ವಿಚಾರದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಯಾವುದೇ ಅಧಿಕಾರವಿಲ್ಲ. ನಮಗೆ ಬಂದಿರುವ ಆಕ್ಷೇಪ, ಮನವಿಗಳನ್ನು ಚುನಾವಣಾ ಆಯೋಗದ ಗಮನಕ್ಕೆ ತರಲಾಗಿದೆ’.– ಸಂಜೀವ್ ಕುಮಾರ್, ರಾಜ್ಯ ಮುಖ್ಯ ಚುನಾವಣಾಧಿಕಾರಿ.