Advertisement

ಸೆಪ್ಟಂಬರ್‌ನಲ್ಲಿ ಚಿತ್ರದುರ್ಗದಲ್ಲಿ ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನ: ಶಂಭುಲಿಂಗ

08:57 PM May 30, 2024 | Team Udayavani |

ಬೆಂಗಳೂರು: ಸೆಪ್ಟಂಬರ್‌ 8ರಂದು ಚಿತ್ರದುರ್ಗದಲ್ಲಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ಕೆ. ಶಂಭುಲಿಂಗ ಹೇಳಿದ್ದಾರೆ.

Advertisement

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಈಗಾಗಲೇ ಮೂರು ರಾಜ್ಯಮಟ್ಟದ ವಿತರಕರ ಸಮ್ಮೇಳನ ಯಶಸ್ವಿಯಾಗಿ ಜರಗಿದೆ. ನಾಲ್ಕನೇ ವಿತರಕರ ರಾಜ್ಯ ಸಮ್ಮೇಳನವನ್ನು  ಚಿತ್ರದುರ್ಗದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಕರ್ನಾಟ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲೆಯ ಕಾರ್ಯನಿರತ ಪತ್ರಿಕಾ ವಿತರಕರ ಸಂಘದ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.

ಚಿತ್ರದುರ್ಗದ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದ್ದ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ನೆರೆದಿದ್ದ ವಿವಿಧ ಜಿಲ್ಲೆಯ ಪತ್ರಿಕಾ ವಿತರಕರ ಸಂಘಟನೆಗಳ ಮುಖಂಡರ ಸಮ್ಮುಖದಲ್ಲಿ  ಆ ಬಗ್ಗೆ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ಈ  ಸಭೆಯಲ್ಲಿ ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಹುಬ್ಬಳ್ಳಿ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಳಗಾವಿ, ಶಿಗ್ಗಾವಿ, ಚನ್ನರಾಯಪಟ್ಟಣ, ವಿಜಯಪುರ, ಹರಿಹರ, ತುಮಕೂರು, ಬೆಂಗಳೂರಿನ ಗಾಂಧಿನಗರ, ವಿಜಯನಗರದ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು ಎಂದು  ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next