ಮಂಗಳೂರು: ಸಹಕಾರಿ ಬ್ಯಾಂಕಿಂಗ್ ರಂಗದಲ್ಲಿ 108 ವರ್ಷಗಳ ಸಾರ್ಥಕ ಸೇವೆ ಪೂರೈಸಿ ಜನ ಸಾಮಾನ್ಯರ ಆರ್ಥಿಕ ಶಕ್ತಿಯಾಗಿ ಬೆಳೆದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ಎಸ್‌ಸಿಡಿಸಿಸಿ ಬ್ಯಾಂಕ್)ಗೆ ರಾಜ್ಯದ ಪ್ರತಿಷ್ಠಿತ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಬುಧವಾರ ಪ್ರದಾನ ಮಾಡಲಾಯಿತು.
ಕರ್ನಾಟಕ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ರಾಜ್ಯದಲ್ಲಿ ಅತ್ಯು ತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ ವರ್ಷಂಪ್ರತಿ ನೀಡುತ್ತಿ ರುವ ರಾಜ್ಯಮಟ್ಟದ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷರಾದ ಬೆಳ್ಳಿಪ್ರಕಾಶ್ ಅವರಿಂದ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಹಾಗೂ ನಿಕಟಪೂರ್ವ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಬಿ.ಅವರು ಸ್ವೀಕರಿಸಿದರು.
ಎಸ್‌ಸಿಡಿಸಿಸಿ ಬ್ಯಾಂಕ್ 2020-21ನೇ ಸಾಲಿನಲ್ಲಿ ಸರ್ವಾಂಗೀಣ ಪ್ರಗತಿಯೊಂದಿಗೆ ಗುರುತಿಸಿಕೊಂಡು ಲೆಕ್ಕ ಪರಿಶೋಧನೆಯಲ್ಲಿ ಎ ವರ್ಗವನ್ನು ಪಡೆದು ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಗೆ ಆಯ್ಕೆಗೊಂಡಿರುತ್ತದೆ. ಮಾತ್ರವಲ್ಲದೆ 20ನೇ ಬಾರಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಹೆಗ್ಗಳಿಕೆಗೆ ಎಸ್‌ಸಿಡಿಸಿಸಿ ಬ್ಯಾಂಕ್ ಪಾತ್ರವಾಗಿದೆ.
ಸಂಪೂರ್ಣ ಗಣಕೀಕೃತ 111 ಶಾಖೆಗಳು: ಎಸ್ ಸಿಡಿಸಿಸಿ ಬ್ಯಾಂಕಿನ 111 ಶಾಖೆಗಳು ಸಂಪೂರ್ಣ ಗಣಕೀಕರಣಗೊಂಡು ಕೋರ್ ಬ್ಯಾಂಕಿಂಗ್ ಹಾಗೂ ಮೊಬೈಲ್ ಬ್ಯಾಂಕಿಂಗ್‌ನಂತಹ ಹೊಸತನದ ಬ್ಯಾಂಕಿಂಗ್ ಸೇವೆಯನ್ನು ತನ್ನ ಗ್ರಾಹಕರಿಗೆ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಶಾಖೆಗಳ ಮೂಲಕ ನೀಡುತ್ತಿದೆ. ಇಂತಹ ವಿನೂತನ ಬ್ಯಾಂಕಿಂಗ್ ಸೇವೆಯನ್ನು ರಾಜ್ಯಮಟ್ಟದಲ್ಲೇ ಪರಿಚಯಿಸಿದ ಮೊದಲ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಎಂಬ ಮನ್ನ ಣೆಗೂ ಎಸ್‌ಸಿಡಿಸಿಸಿ ಬ್ಯಾಂಕ್ ಪಾತ್ರವಾಗಿದೆ.
ಸೇವೆಯೇ ಮುಖ್ಯ ಧ್ಯೇಯ: ಸೇವೆಯನ್ನೇ ಧ್ಯೇಯವನ್ನಾಗಿಟ್ಟುಕೊಂಡು ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರ ದಕ್ಷ ಸಾರಥ್ಯದಲ್ಲಿ ಕಳೆದ 2 8 ವರ್ಷಗಳಿಂದ ಯಶಸ್ಸಿನ ಪಥದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಮುನ್ನಡೆ ಕಾಣುತ್ತಿದೆ. ವರದಿ ವರ್ಷದಲ್ಲಿ ಬ್ಯಾಂಕಿಗೆ “ಬ್ಯಾಂಕೋ ಬ್ಲೂ ರಿಬ್ಬನ್-2021′ ಪ್ರಶಸ್ತಿ ಹಾಗೂ ಕೇಂದ್ರ ಸರ್ಕಾರದ ಅಟಲ್ ಪಿಂಚಣಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ 2021-22ನೇ ಸಾಲಿನ “ಎಪಿವೈ ರಾಷ್ಟ್ರೀಯ ಪ್ರಶಸ್ತಿ’ ಬಂದಿದೆ.