ಹುಣಸಗಿ: ಕಾಂಗ್ರೆಸ್ ಪಕ್ಷದಿಂದ ರಾಜ್ಯದ ಅಭಿವೃದ್ಧಿ ಸಾಧ್ಯ. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ ಬಡ ಕೂಲಿ ಕಾರ್ಮಿಕರಿಗೆ ಅನುಕೂಲ ಕಲ್ಪಿಸಿದೆ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.
ಅವರು ಗುರುವಾರ ಹುಣಸಗಿ ತಾಂಡಾದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಮುಖಂಡರ, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಇಂದಿರಾ ಕ್ಯಾಂಟೀನ್ ಕುರಿತು ಪ್ರತಿಷ್ಠಿತ ನ್ಯೂಸ್ ಚಾನೆಲ್‌ನಲ್ಲಿ ಪ್ರಶಂಸೆ ವ್ಯಕ್ತವಾಗಿದೆ ಎಂದು ತಿಳಿಸಿದರು.
ಸುರಪುರ ಮತಕ್ಷೇತ್ರದ ತಾಂಡಾಗಳಲ್ಲಿ ನಾನಾ ಅಭಿವೃದ್ಧಿ ಯೋಜನೆಯಡಿ ಸಿಸಿ ರಸ್ತೆ, ಸಮುದಾಯ ಭವನ, ಕುಡಿಯುವ ನೀರಿನ ವ್ಯವಸ್ಥೆ, ಶಾಲಾ ಕಟ್ಟಡಗಳ ನಿರ್ಮಾಣ ಸೇರಿದಂತೆ ಹತ್ತು ಹಲವಾರು ಜನಪರ ಕಾರ್ಯಗಳನ್ನು ಮಾಡಲಾಗಿದೆ ಎಂದರು. ಮುಖ್ಯಮಂತ್ರಿ ವಿಕಾಸ ಯೋಜನೆಯಲ್ಲಿ ಅನೇಕ ತಾಂಡಾಗಳ ಪ್ರಗತಿ ಮಾಡಲಾಗುತ್ತಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ತಾಂಡಾದ ಅನೇಕರು ಆರ್‌ವಿಎನ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಸಭೆಯಲ್ಲಿ ಹಿರಿಯ ಮುಖಂಡರಾದ ಸೂಲಪ್ಪ ಕಮತಗಿ, ವೆಂಕೋಬ ಯಾದವ್, ನಾಗಣ್ಣ ದಂಡಿನ್, ಜಿಪಂ
ಸದಸ್ಯ ರಾಜಶೇಖರಗೌಡ ಪಾಟೀಲ್ ವಜ್ಜಲ್, ಸಿದ್ದಣ್ಣ ಮಲಗಲದಿನ್ನಿ, ಬಾಪುಗೌಡ ಪಾಟೀಲ್, ಸಂಗನಗೌಡ
ಪಾಟೀಲ್, ಶರಣಪ್ಪ ಬೋನಾಳ್, ಚನ್ನಯ್ಯಸ್ವಾಮಿ ಹಿರೇಮಠ, ಗುರಲಿಂಗಪ್ಪ ಸಜ್ಜನ್, ಆರ್.ಎಂ. ರೇವಡಿ, ಬಿ.ಎಂ. ಬಳಿ, ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಕಾಯಕರ್ತರು ಇದ್ದರು.