Advertisement
“ಕನ್ನಡ ಪ್ರಜ್ಞೆಯೇ ಅಪ್ಪಟ ಜಾತ್ಯತೀತವಾದುದು’ ಎಂದು ಖಡಕ್ಕಾಗಿ ಹೇಳಿದ ಚಂಪಾ, ನಮ್ಮ ಸಂವಿಧಾನದಲ್ಲಿ ಅಂತರ್ಗ ತವಾದ ಸ್ವಾತಂತ್ರ್ಯ, ಸಮಾನತೆ, ಸಹಭಾವ, ಸೆಕ್ಯು ಲರಿಸಂ, ಸಾಮಾಜಿಕ ನ್ಯಾಯ ಮುಂತಾದವುಗಳಿಗೆ ಕಂಟಕ ಒದಗಿ ಬಂದಿದೆ ಎಂಬ ಆತಂಕ ವ್ಯಕ್ತಪಡಿಸಿದರು. ಇನ್ನೂ ಒಂದು ಹೆಜ್ಜೆ ಮುಂದೆ ಹೋದ ಪ್ರೊಫೆಸರ್,ನಮ್ಮ ರಾಜ್ಯದ ಹಿತಾ ಸಕ್ತಿಗಳ ಸಂರಕ್ಷಣೆಗಾಗಿ ಸೆಕ್ಯು ಲರ್ ಪಕ್ಷಗಳ ಪರವಾಗಿ ಮತಚಲಾಯಿಸಬೇಕು ಎಂದು ಮನವಿ ಮಾಡಿದರು.
Related Articles
ಮಾಡಲಾಗಿದೆ. ಭಾರತ ಮಾತೆ, ಬರೀ ಹಿಂದೂ ಮಾತೆ ಆಗುತ್ತಿರುವಳೇ ಎಂಬ ಪ್ರಶ್ನೆ ಕಾಡುತ್ತಿದೆ. ಪ್ರಶ್ನೆ ಮಾಡುವುದೇ ರಾಷ್ಟ್ರದ್ರೋಹವಾಗಿ, ವೈಚಾರಿಕತೆ ಮೇಲೆ ಹಲ್ಲೆ ಎಸಗುವುದೇ ಸಂಸ್ಕೃತಿಯಾಗಿ, ದಟ್ಟ ಭಯ ಆವರಿಸಿದೆ’ ಎಂಬ ಅವರ ಧ್ವನಿಯಲ್ಲಿ ಆತಂಕವಿತ್ತು.
Advertisement
ರಾಷ್ಟ್ರಕವಿ ಕುವೆಂಪು ಪ್ರಧಾನ ವೇದಿಕೆ, ಮೈಸೂರು: ಮಾತೃಭಾಷೆಯ ಶಿಕ್ಷಣ ಹಾಗೂ ಕರ್ನಾಟಕ ಪ್ರತ್ಯೇಕ ನಾಡಧ್ವಜ ಹೊಂದಬೇಕೆಂಬ ವಿಚಾರಕ್ಕೆ ರಾಜ್ಯ ಸರಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ 83ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿ, ಮಾತೃಭಾಷೆಯ ಶಿಕ್ಷಣಕ್ಕೆ ನಮ್ಮ ಸರಕಾರ ಬದ್ಧವಾಗಿದೆ. ಈ ಬಗೆಗೆ ಇರುವ ಕಾನೂನು ತೊಡಕನ್ನು ನಿವಾರಿಸಲು ಸಂವಿಧಾನಕ್ಕೆ ತಿದ್ದುಪಡಿ ತರ ಬೇಕಿದೆ. ಈ ಸಂಬಂಧ ಕೇಂದ್ರ ಸರಕಾರಕ್ಕೆ ಎರಡು ಬಾರಿ ಪತ್ರ ಬರೆದಿದ್ದೇವೆ. ಮುಂದಿನ ದಿನಗಳಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಈ ವಿಚಾರ ಪ್ರಸ್ತಾವಿಸಿ ಸಂವಿಧಾನಕ್ಕೆ ತಿದ್ದುಪಡಿ ತರಲು ಪ್ರಯತ್ನಿಸುವುದಾಗಿ ಹೇಳಿದರು.
ಭಾರತದ ಒಕ್ಕೂಟ ತಣ್ತೀವನ್ನು ಒಪ್ಪಿಕೊಂಡು ಕನ್ನಡದ ಅನನ್ಯತೆಯನ್ನು ಎತ್ತಿ ಹಿಡಿಯುವುದು ನಮ್ಮ ಕರ್ತವ್ಯಹಾಗೂ ಜವಾಬ್ದಾರಿ. ಆದುದರಿಂದಲೇ ನಾಡ ಗೀತೆ ಇರುವಂತೆ, ನಾಡಧ್ವಜವೂ ಇರಬೇಕು. ನಾಡ ಗೀತೆ-
ರಾಷ್ಟ್ರಗೀತೆ, ನಾಡಧ್ವಜ-ರಾಷ್ಟ್ರಧ್ವಜ ಇವೆರಡೂ ಪರಸ್ಪರ ಪೂರಕ, ಪರಸ್ಪರ ವಿರೋಧಿ ಅಲ್ಲ. ರಾಷ್ಟ್ರಕವಿ ಕುವೆಂಪು ಅವರು “ಜಯ ಭಾರತ ಜನನಿಯ ತನುಜಾತೆ; ಜಯಹೇ ಕರ್ನಾಟಕ ಮಾತೆ’ಎಂದು ಹಾಡಿದ್ದಾರೆ. ಈ ಆದರ್ಶಕ್ಕೆ ನಾವು ಬದ್ಧರಾಗಿದ್ದೇವೆ. ಇದನ್ನು ವಿರೋಧಿಸುವುದು ನಾಡು-ನುಡಿಗೆ ತೋರುವ ಅಗೌರವವಾಗುತ್ತದೆ ಎಂದರು. ಕನ್ನಡದಿಂದ ರಾಜಕೀಯ ಮಾಡಲ್ಲ ಕನ್ನಡ ಎನ್ನುವುದು ನನಗೆ ರಾಜಕೀಯ ಅಲ್ಲ. ಅದು ನನ್ನ ಬದುಕು. ನಾನು ಹುಟ್ಟು ಕನ್ನಡ ಪ್ರೇಮಿ. ಕನ್ನಡ ಕಾವಲು ಸಮಿತಿ ಅಧ್ಯಕ್ಷನಾಗಿ ಸಾರ್ವತ್ರಿಕ ಜೀವನ ಪ್ರಾರಂಭಿಸಿದ್ದ ನಾನು ಅಲ್ಲಿಂದ ಇಲ್ಲಿಯ
ವರೆಗೆ ನೆಲ-ಜಲ-ನುಡಿ ಬಗ್ಗೆ ಎಂದೂ ರಾಜಿ ಮಾಡಿಕೊಂಡಿಲ್ಲ, ರಾಜಕೀಯ ವನ್ನೂ ಮಾಡಿಲ್ಲ ಎಂದು ಹೇಳಿದರು. ಮಾನವ ಧರ್ಮ ಧರ್ಮ ಎಂಬುದು ಸಂಕುಚಿತ ಅರ್ಥಕ್ಕೆ ಸೀಮಿತಗೊಳ್ಳದೆ, ಧರ್ಮ- ಮಾನವಧರ್ಮ ಎಂದು ನಂಬಿದ ಪರಂಪರೆ ನಮ್ಮದು. ದೇವರು ಗುಡಿ ಯಲ್ಲಿ ಇಲ್ಲ, ಮನುಷ್ಯನ ಅಂತರಂಗದಲ್ಲಿದ್ದಾನೆ, ದೇಹವೇ ದೇಗುಲ ಎಂದು ವಚನಕಾರರು ಘೋಷಿಸಿದರು. ದೇಹವೇ ದೇವಾಲಯ ಎಂದಾಗ, ಎಲ್ಲ ಮನುಷ್ಯರು ಅವರ ದೇಹವೂ ದೇವನ ಆವಾಸ ಸ್ಥಾನವಾಗುತ್ತದೆ. ಅಲ್ಲಿ ಒಬ್ಬರನ್ನು ಮತ್ತೂಬ್ಬರು ಹಿಂಸಿಸಲು ಅವಕಾಶವಿಲ್ಲ ಎಂದು ಹೇಳಿದರು. ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ| ಎಚ್.ಸಿ. ಮಹದೇವಪ್ಪ, ಕಸಾಪ ಅಧ್ಯಕ್ಷ ಡಾ| ಮನು ಬಳಿಗಾರ್, ಸಮ್ಮೇಳನಾಧ್ಯಕ್ಷ ಪ್ರೊ| ಚಂದ್ರಶೇಖರ ಪಾಟೀಲ, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಡಾ| ಬರಗೂರು ರಾಮಚಂದ್ರಪ್ಪ ಸಹಿತ ಸಚಿವರು, ಶಾಸಕರು, ಚುನಾಯಿತ ಪ್ರತಿನಿಧಿಗಳು ಹಾಗೂ ಹಿರಿಯ ಸಾಹಿತಿಗಳು ಉಪಸ್ಥಿತರಿದ್ದರು. *ಕೀರ್ತಿ ಕೋಲ್ಗಾರ್