ಬೆಂಗಳೂರು: ಕೋವಿಡ್ 19 ಕಾರಣದಿಂದ ನಷ್ಟದಲ್ಲಿರುವ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ನೆರವಿಗೆ ರಾಜ್ಯ ಸರಕಾರ ಮುಂದಾಗಿದೆ.
KSRTC, BMTC ವಾಯುವ್ಯ ಸಾರಿಗೆ ಹಾಗೂ ಈಶಾನ್ಯ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗಳ ವೇತನಕ್ಕಾಗಿ ಒಟ್ಟು 961 ಕೋಟಿ ರೂಪಾಯಿಗಳನ್ನು ಬಿಡಗಡೆಗೊಳಿಸಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಮಾಹಿತಿ ನೀಡಿದ್ದಾರೆ.
ಒಟ್ಟು 961 ಕೋಟಿ ರೂಪಾಯಿಗಳಲ್ಲಿ ಜೂನ್ ಮತ್ತು ಜುಲೈ ತಿಂಗಳ ವೇತನ ಪಾವತಿಗಾಗಿ 426 ಕೋಟಿ ರೂಪಾಯಿಗಳನ್ನು ಈಗಾಗಲೇ ಬಿಡುಗಡೆಗೊಳಿಸಲಾಗಿದೆ.
ಸರಕಾರದ ಈ ನಿರ್ಧಾರದಿಂದಾಗಿ ಜೂನ್ ತಿಂಗಳಿನಿಂದ ಸೆಪ್ಟಂಬರ್ ತಿಂಗಳಿನವರೆಗಿನ ವೇತನವನ್ನು ಸಂಸ್ಥೆಯ ಸಿಬ್ಬಂದಿಗಳಿಗೆ ನೀಡಲು ಅನುಕೂಲವಾಗಲಿದೆ ಎಂದು ಸವದಿ ಅವರು ತಿಳಿಸಿದ್ದಾರೆ.
ಮತ್ತು ಸಾರಿಗೆ ಸಿಬ್ಬಂದಿಗಳ ಸಂಕಷ್ಟಕ್ಕೆ ಸ್ಪಂದಿಸಿ ಅವರಿಗೆ ಕೂಡಲೇ ವೇತನ ಬಿಡುಗಡೆ ಮಾಡಬೇಕೆಂಬ ಬೇಡಿಕೆಗೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿ ವೇತನ ಮೊತ್ತವನ್ನು ಬಿಡುಗಡೆ ಮಾಡಿರುವ ಮುಖ್ಯಮಂತ್ರಿ B. S. ಯಡಿಯೂರಪ್ಪನವರಿಗೆ ಸಾರಿಗೆ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ.