Advertisement
ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾದ ಪರಿಹಾರ ಪ್ಯಾಕೇಜ್ ಗೆ ಸಮ್ಮತಿ ನೀಡಲಾಯಿತು. ಈ ಉದ್ದೇಶಕ್ಕಾಗಿ ಒಟ್ಟು 137 ಕೋಟಿ ರೂಪಾಯಿಗಳ ಪರಿಹಾರ ಮೊತ್ತವನ್ನು ನಿಗದಿಪಡಿಸಲಾಗಿದೆ.
Related Articles
Advertisement
ಇದರ ಜೊತೆಗೆ ಈ ಹಿಂದೆ ಪ್ಯಾಕೇಜ್ ಘೋಷಣೆ ಮಾಡುವ ಸಂದರ್ಭದಲ್ಲಿ ಪ್ರತೀ ಕೈಮಗ್ಗ ನೇಕಾರರಿಗೆ 2,000 ರೂಪಾಯಿಗಳಂತೆ ಪರಿಹಾರ ನೀಡಲು ನಿರ್ಧರಿಸಲಾಗಿತ್ತು. ಪ್ರಸ್ತುತ ಒಂದು ಬಾರಿಗೆ ಈ ಪರಿಹಾರ ಸೌಲಭ್ಯವನ್ನು ರಾಜ್ಯದಲ್ಲಿರುವ 1.25 ಲಕ್ಷ ವಿದ್ಯುತ್ ಚಾಲಿತ ಘಟಕಗಳಿಗೂ ಸಹ ವಿಸ್ತರಿಸಲು ನಿರ್ಧರಿಸಲಾಗಿದೆ.
ಇದರ ಪ್ರಕಾರ ಪ್ರತೀ ವಿದ್ಯುತ್ ಚಾಲಿತ ಘಟಕಗಳಲ್ಲಿ ಕೆಲಸ ಮಾಡುತ್ತಿರುವ ಪ್ರತೀ ಕೂಲಿ ಕಾರ್ಮಿಕರಿಗೆ ತಲಾ 2000 ರೂಪಾಯಿಗಳಂತೆ ಒಟ್ಟು 25 ಕೋಟಿ ರೂಪಾಯಿಗಳನ್ನು ನೀಡಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.