Advertisement

Politics: ರಾಜ್ಯ ಸರಕಾರವು ಯುವನೀತಿಯಲ್ಲಿ ಯುವಜನರನ್ನು ವಂಚಿಸಿದೆ: ಕೋಟ

10:53 PM Dec 27, 2023 | Team Udayavani |

ಬೆಂಗಳೂರು: ರಾಜ್ಯ ಸರಕಾರವು ಯುವನೀತಿ ಅನುಷ್ಠಾನದ ವೇಳೆ ಕರ್ನಾಟಕದ ಯುವಜನರನ್ನು ವಂಚಿಸಿದೆ ಎಂದು ಬಿಜೆಪಿ ಅಸಮಾ ಧಾನ ವ್ಯಕ್ತಪಡಿಸಿದೆ. ಈ ಕುರಿತು ವಿಪಕ್ಷ ನಾಯಕ ಅಶೋಕ್‌ ಟ್ವೀಟ್‌ ಮಾಡಿದ್ದಾರೆ. ಮೇಲ್ಮನೆ ವಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

Advertisement

ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ, ಯುವನೀತಿ ಕುರಿತ ಪ್ರಣಾಳಿಕೆಯಲ್ಲಿ ಪದವಿ ಪಡೆದ ಎಲ್ಲ ನಿರುದ್ಯೋಗಿಗಳಿಗೆ 3 ಸಾವಿರ, ಡಿಪ್ಲೊಮಾ ಮಾಡಿದ ನಿರುದ್ಯೋಗಿಗೆ ಒಂದೂವರೆ ಸಾವಿರ ಕೊಡುವುದಾಗಿ ಹೇಳಿದ್ದರು. ರಾಜ್ಯ ದಲ್ಲಿ ಡಿಗ್ರಿ ಮತ್ತು ಡಿಪ್ಲೊಮಾ ಆದ 40 ಲಕ್ಷ ಜನರಿದ್ದಾರೆ. ಆದರೆ ಬಿಜೆಪಿಯು ಯುವನೀತಿ ಅನುಷ್ಠಾನ ವಿಳಂಬದ ಕುರಿತು ಟೀಕಿಸಿದ ಬಳಿಕ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.

2022-23ರಲ್ಲಿ ಪದವಿ ಪಡೆದ 4 ಲಕ್ಷ ಯುವಕರು, 48 ಸಾವಿರ ಜನ ಡಿಪ್ಲೊಮಾ ಪಡೆದವರು ಇದ್ದಾರೆ. ಅದರಲ್ಲಿ ಉದ್ಯೋಗ ಪಡೆದವರನ್ನು ಕೈಬಿಟ್ಟು ಹೆಚ್ಚು ಕಡಿಮೆ 3ರಿಂದ 3.5 ಲಕ್ಷ ನಿರುದ್ಯೋಗಿಗಳಿಗೆ 600- 700 ಕೋಟಿ ರೂ. ಖರ್ಚು ಮಾಡಿ ಯುವನೀತಿ ಅನುಷ್ಠಾನ ಮಾಡಿದ್ದಾಗಿ ಹೇಳಿ ಹೆಮ್ಮೆಪಡುವ ಕೆಲಸ ಮಾಡಿದ್ದಾರೆ ಎಂದು ದೂರಿದರು.

ಚುನಾವಣೆಗೆ ಮುನ್ನ 18-25ನೇ ವಯಸ್ಸಿನ ಎಲ್ಲ ನಿರುದ್ಯೋಗಿ ಡಿಪ್ಲೊಮಾ ಪದವೀಧರಿಗೆ 1,500 ರೂ. ಹಾಗೂ ಎಲ್ಲ ನಿರುದ್ಯೋಗಿ ಪದವೀಧರರಿಗೆ 3,000 ರೂ. ನೀಡುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್‌, ಈಗ 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪಾಸಾದ ಯುವಕರು ಮಾತ್ರ ಅರ್ಜಿ ಕಲ್ಪಿಸಲು ಅರ್ಹರು ಎಂದು ವರಸೆ ಬದಲಿಸಿದೆ. ನುಡಿದಂತೆ ನಡೆದ ಸರಕಾರ ಎಂದು ಹಸಿ ಸುಳ್ಳು ಹೇಳುತ್ತಿರುವ ಸಿದ್ದರಾಮಯ್ಯ ಅವರು ನಾಡಿನ ಯುವ ಸಮುದಾಯಕ್ಕೆ ಮೋಸ ಮಾಡುತ್ತಿದ್ದಾರೆ.
– ಆರ್‌.ಅಶೋಕ, ವಿಧಾನಸಭೆ ವಿಪಕ್ಷದ ನಾಯಕ

 

Advertisement
Advertisement

Udayavani is now on Telegram. Click here to join our channel and stay updated with the latest news.

Next