Advertisement

ಭ್ರಷ್ಟಾಚಾರದಲ್ಲಿ ಮುಳುಗೆದ್ದ ರಾಜ್ಯ ಸರ್ಕಾರ: ಲಿಂಬಾವಳಿ

10:10 AM Jul 20, 2017 | |

ಚಿತ್ರದುರ್ಗ: ಮುಂದಿನ ವಿಧಾನಸಭಾ ಚುನಾವಣೆಗೆ ಹಣ ಮಾಡಲು ಹೊರಟಿರುವ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೂಗೆಯಬೇಕಿದೆ ಎಂದು ಮಾಜಿ ಸಚಿವ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಕರೆ ನೀಡಿದರು.

Advertisement

ರಾಜ್ಯ ಕಾಂಗ್ರೆಸ್‌ ಸರ್ಕಾರದ ವೈಫಲ್ಯ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಬುಧವಾರ ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ
ಅವರು ಮಾತನಾಡಿದರು. ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗೆದ್ದಿದೆ. ಆದ್ದರಿಂದ ಈ ಸರ್ಕಾರ ಮೊದಲು ತೊಲಗಬೇಕು. ಆಡಳಿತ ವೈಫಲ್ಯದಿಂದಾಗಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಭ್ರಷ್ಟರನ್ನು ಸರ್ಕಾರ ರಕ್ಷಿಸುತ್ತಿದೆ ಎಂದು ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ಸಂಪೂರ್ಣ ಹದಗೆಟ್ಟಿದೆ ಎನ್ನುವುದಕ್ಕೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಡೆಯುತ್ತಿರುವ ಕರ್ಮಕಾಂಡವೇ ಸಾಕ್ಷಿ. ಬಂಟ್ವಾಳದಲ್ಲಿ ಶರತ್‌ ಮಡಿವಾಳ ಅವರನ್ನು ಹತ್ಯೆ ಮಾಡಿರುವ ತಪ್ಪಿತಸ್ಥರನ್ನು ಬಂಧಿಸುವ ಕೆಲಸ ಮಾಡುವುದನ್ನು ಬಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿವಾದ ಸೃಷ್ಟಿಸುತ್ತಿದ್ದಾರೆ. ಮಡಿಕೇರಿಯಲ್ಲಿ ಕುಟ್ಟಪ್ಪ ಹತ್ಯೆ, ಐಎಎಸ್‌ ಅಧಿ ಕಾರಿ ಡಿ.ಕೆ. ರವಿ ಕೊಲೆಯನ್ನು ಮುಚ್ಚಿ ಹಾಕಿದ್ದೇ ಅಲ್ಲದೆ ದಕ್ಷ ಅಧಿಕಾರಿಗಳನ್ನು ಎತ್ತಂಗಡಿ ಮಾಡುವ ಕೆಲಸಕ್ಕೂ ಕೈಹಾಕಿದ್ದಾರೆ ಎಂದು ಆರೋಪಿಸಿದರು. ಜೈಲಿನಲ್ಲಿ ಕೈದಿಗಳಿಗಾಗಿ ಐಷಾರಾಮಿ ವ್ಯವಸ್ಥೆ ಮಾಡಿರುವುದರ ಕುರಿತು ಸರ್ಕಾರಕ್ಕೆ
ವರದಿ ಸಲ್ಲಿಸಿರುವ ನಿಷ್ಠಾವಂತ ಅಧಿಕಾರಿ ಡಿಐಜಿ ರೂಪಾ ಅವರನ್ನು ಎತ್ತಂಗಡಿ ಮಾಡಲಾಗಿದೆ. ತೆಲಗಿ, ಶಶಿಕಲಾಗೆ ವಿಶೇಷ ಸವಲತ್ತು ನೀಡಿರುವುದಲ್ಲದೆ ಹಣ ಕೊಟ್ಟರೆ ಜೈಲಿನಲ್ಲಿ ಜನ್ಮದಿನ ಆಚರಿಸಿಕೊಳ್ಳಲು ಅನುಮತಿ ನೀಡಿರುವುದನ್ನು ಯಾರೂ ಕ್ಷಮಿಸುವುದಿಲ್ಲ ಎಂದು ಕಿಡಿ ಕಾರಿದರು.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ರಾಜ್ಯಕ್ಕೆ ಬಂದು ಭಾಷಣ ಮಾಡಿದರೆ ಬಿಗಿ ಭದ್ರತೆ ನೀಡುವ ರಾಜ್ಯ ಸರ್ಕಾರ, ಮೊದಲು ನಾಗರೀಕರಿಗೆ ರಕ್ಷಣೆ ನೀಡಲಿ. ಮೈಸೂರು, ಬೆಂಗಳೂರು, ಮಂಗಳೂರಿನಲ್ಲಿ ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿವೆ ಎಂಬ ಗುಮಾನಿ ಇದೆ. ತಪ್ಪಿತಸ್ಥರನ್ನು ಬಂಧಿ ಸಿದರೆ ರಾಜ್ಯದ ಜನ ನೆಮ್ಮದಿಯಿಂದ ಇರಬಹುದು ಎಂಬುದನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಬೇಕಾಗಿದೆ ಎಂದರು.

ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ಧ್ವಜ ಬೇಕೆಂದು ಸಮಿತಿ ಮಾಡಲು ಹೊರಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿರ್ಧಾರವನ್ನು ಎಲ್ಲರೂ ಪಕ್ಷಾತೀತವಾಗಿ ವಿರೋಧಿ ಸಿದ್ದಾರೆ. ವಿಪರ್ಯಾಸವೆಂದರೆ ಕಾಂಗ್ರೆಸ್‌ನವರೇ ಸಿದ್ದರಾಮಯ್ಯನವರ ಈ ನಡೆಯನ್ನು ಖಂಡಿಸಿದ್ದಾರೆ.  

Advertisement

ಅರವಿಂದ ಲಿಂಬಾವಳಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ

Advertisement

Udayavani is now on Telegram. Click here to join our channel and stay updated with the latest news.

Next