ದೊಡ್ಡಬಳ್ಳಾಪುರ: ಸರ್ಕಾರಿ ಸೇವೆಯಲ್ಲಿ ಕಾರ್ಯನಿರ್ವಹಿಸುವಾಗ ಸಮಸ್ಯೆ ಎದುರಾಗುವುದು ಸಾಮಾನ್ಯವಾಗಿದ್ದು, ಅಧಿಕಾರಿಗಳು-ಸಿಬ್ಬಂದಿ ಎದೆಗುಂದದೆ ಧೈರ್ಯವಾಗಿ ಕಾರ್ಯನಿರ್ವಹಿಸಬೇಕು. ಒತ್ತಡದಿಂದ ಹೊರಬರಲುಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿ ಆಗಲಿವೆ ಎಂದು ಬೆಂ.ಗ್ರಾಮಾಂತರ ಜಿಲ್ಲಾಧಿಕಾರಿಆರ್.ಲತಾ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಸಹಯೋಗದೊಂದಿಗೆ ದೊಡ್ಡಬಳ್ಳಾಪುರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ನೌಕರರು ಕ್ರೀಡೆ ಹಾಗೂಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಒತ್ತಡ ನಿವಾರಣೆಯಾಗಿ, ದೈಹಿಕ ಸದೃಢತೆಗೆ ಸಹಕಾರಿಯಾಗಲಿದೆ ಎಂದರು.
ಸಮಸ್ಯೆ ಬಗೆಹರಿಸಿಕೊಳ್ಳಿ: ನೌಕರರು ಹೆಚ್ಚು ಪ್ರಾಮಾಣಿಕತೆ, ಬದ್ಧತೆ ಹಾಗೂ ನಿಷ್ಠೆಯಿಂದಕಾರ್ಯ ನಿರ್ವಹಿಸುತ್ತಾರೆ. ಏನೇ ಸಮಸ್ಯೆ ಗಳಿದ್ದರೂ ನನ್ನೊಂದಿಗೆ ಸಿಬ್ಬಂದಿ ಮುಕ್ತವಾಗಿ ವಿಷಯಗಳನ್ನು ಹಂಚಿಕೊಳ್ಳುವ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳ ಬಹುದು. ಜಿಲ್ಲೆಯ ಸರ್ಕಾರಿ ನೌಕರರು ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರಮಟ್ಟದಲ್ಲೂ ವಿಜೇತರಾಗಿ ಜಿಲ್ಲೆಗೆ ಕ್ರೀಡಾ ವಿಭಾಗದಲ್ಲಿ ಕೀರ್ತಿ ತರವಂತೆ ಶುಭ ಹಾರೈಸಿದರು.
ಕ್ರೀಡಾಪಟುಗಳಿಗೆ ಉತ್ಸಾಹ: ಶಾಸಕ ಟಿ. ವೆಂಕಟರಮಣಯ್ಯ ಮಾತನಾಡಿ, ನಾಲ್ಕು ತಾಲೂಕುಗಳ ಸರ್ಕಾರಿ ನೌಕರರು ಕ್ರೀಡೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿರುವುದು ಸಂತಸತಂದಿದೆ. ಕ್ರೀಡೆಯಲ್ಲಿ ಸೋತವರು ಕುಗ್ಗದೇ, ಗೆದ್ದವರು ಬೀಗದೇ ಇದ್ದು ಭಾಗವಹಿಸುವಿಕೆಯೇ ಮುಖ್ಯವಾಗಿದೆ ಎಂದು ಕ್ರೀಡೆಯ ಕುರಿತು ತಮ್ಮಬಾಲ್ಯದ ನೆನಪು ಸ್ಮರಿಸಿ, ಕ್ರೀಡಾಪಟುಗಳಿಗೆ ಉತ್ಸಾಹ ತುಂಬಿ ಹಾರೈಸಿದರು.
ಕ್ರೀಡಾಜ್ಯೋತಿ ಸ್ವೀಕಾರ: ಕ್ರೀಡಾಕೂಟದ ಅಂಗವಾಗಿ ಕಾರ್ಯಕ್ರಮದಲ್ಲಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ, ಕ್ರೀಡಾಜ್ಯೋತಿ ಸ್ವೀಕರಿಸಲಾಯಿತು. ತ್ರಿವರ್ಣ ಬಣ್ಣದ ಬಲೂನ್ ಹಾರಿಬಿಡಲಾಯಿತು.
ತಹಶೀಲ್ದಾರ್ ಮೋಹನಕುಮಾರಿ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ಕರ್ನಾಟಕ ರಾಜ್ಯ ಸರ್ಕಾರಿನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಾಲಕೃಷ್ಣ, ಪ್ರಧಾನ ಕಾರ್ಯದರ್ಶಿ ಪಿ.ಗಂಗಾಧರಪ್ಪ, ಉಪಾಧ್ಯಕ್ಷ ರಾಜಶೇಖರ್, ತಾಲೂಕು ಘಟಕದಅಧ್ಯಕ್ಷ ಎನ್.ಲಕ್ಷ್ಮೀನರಸಿಂಹಯ್ಯ, ಕಾರ್ಯದರ್ಶಿಶ್ರೀನಿವಾಸ್ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಇದ್ದರು.