Advertisement

ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರಿಗೆ ಗೌರವಧನ ಹೆಚ್ಚಳ ಮಾಡಿದ ರಾಜ್ಯ ಸರಕಾರ

09:32 PM Dec 18, 2022 | Team Udayavani |

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನ ದುಪ್ಪಟ್ಟು ಮಾಡಬೇಕೆಂಬ ನಿರಂತರ ಬೇಡಿಕೆಗೆ ರಾಜ್ಯ ಸರಕಾರ ಸ್ಪಂದಿಸಿದ್ದು, ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ 6000 ರೂ.ಗೆ, ಉಪಾಧ್ಯಕ್ಷರಿಗೆ 4000 ರೂ.ಗಳಿಗೆ ಹಾಗೂ ಸದಸ್ಯರಿಗೆ 2000 ರೂ.ಗಳಿಗೆ ಗೌರವಧನ ಹೆಚ್ಚಿಸಲಾಗಿದೆ.

Advertisement

ಗೌರವ ಧನ ಹೆಚ್ಚಳ ದಿಂದ ರಾಜ್ಯ ಸರ್ಕಾರಕ್ಕೆ 130 ಕೋಟಿ ರೂಪಾಯಿಗಳ ಹೆಚ್ಚುವರಿ ಹೊರೆಯಾಗುತ್ತದೆ ಎಂದು ತಿಳಿದು ಬಂದಿದೆ.

ಮುಖ್ಯಮಂತ್ರಿಗಳು ತಮ್ಮ ಕೋರಿಕೆಯ ಮೇರೆಗೆ ಹೆಚ್ಚಳ ಮಾಡಿದ್ದು, ಬಡವರ ಮಧ್ಯೆ ಬಡಿದಾಡುವ ಗ್ರಾಮ ಪಂಚಾಯತಿ ಸದಸ್ಯರ ಗೌರವಧನ ಹೆಚ್ಚಿಸಿದ್ದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅಭಿನಂದನೆ ಸಲ್ಲಿಸಿದ್ದಾರೆ.

ಗೌರವಧನ ಹೆಚ್ಚಿಸಲು ಸಲಹೆ ನೀಡಿದ ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ರವರಿಗೆ ಈ ಮೂಲಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next