Advertisement

ಡಿ ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ ರಾಜ್ಯ ಸರಕಾರ

06:50 PM Jun 09, 2020 | keerthan |

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜೂನ್ 14 ರಂದು ಪದಗ್ರಹಣಕ್ಕೆ ಕೋರಿದ್ದ ಅನುಮತಿಯನ್ನು ರಾಜ್ಯ ಸರಕಾರ ನಿರಾಕರಿಸಿದೆ.

Advertisement

ಜೂನ್ 14ರಂದು ಪದಗ್ರಹಣ ಕಾರ್ಯಕ್ರಮ ನಡೆಸಲು ಡಿ ಕೆ ಶಿವಕುಮಾರ್ ಅವರು ಅವಕಾಶ ಕೋರಿ ರಾಜ್ಯ ಸರಕಾರಕ್ಕೆ ಪತ್ರ ಬರೆದಿದ್ದರು. ಆದರೆ ಲಾಕ್ ಡೌನ್ ಮಾರ್ಗಸೂಚಿಗಳ ಕಾರಣದಿಂದ ಸರಕಾರ ಈ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದೆ.

ಕೇಂದ್ರೀಯ ಮಾರ್ಗಸೂಚಿಯ ಪ್ರಕಾರ ಸಾರ್ವಜನಿಕ ಕಾರ್ಯಕ್ರಮಗಳನ್ನು ನಡೆಸಲು ಅವಕಾಶವಿಲ್ಲ. 50 ಜನರಿಗಿಂತ ಹೆಚ್ಚು ಜನ ಸೇರದಂತೆ ಮದುವೆ ಕಾರ್ಯಕ್ರಮ, 20 ಕ್ಕಿಂತ ಹೆಚ್ಚು ಜನರು ಸೇರದಂತೆ ಅಂತ್ಯಕ್ರಿಯೆ ನಡೆಸಲು ಮಾತ್ರ ಅವಕಾಶವಿರುತ್ತದೆ. ಹಾಗಾಗಿ ಪದಗ್ರಹಣ ಕಾರ್ಯಕ್ರಮದ ಕೋರಿಕೆಯನ್ನು ಪರಿಗಣಿಸಲು ಸಾಧ್ಯವಿಲ್ಲವೆಂದು ಸರಕಾರ ಹೇಳಿದೆ.

ಡಿ ಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದರೂ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಕೋವಿಡ್-19 ಲಾಕ್ ಡೌನ್ ಅಡ್ಡಗಾಲು ಹಾಕಿತ್ತು. ಸದ್ಯ ಡಿಕೆಶಿ ಅವರು ಜೂನ್ 14ರಂದು ಕಾರ್ಯಕ್ರಮ ನಡೆಸಲು ನಿಶ್ಚಯಿಸಿದ್ದು, ಆದರೆ ಸರಕಾರ ಅವಕಾಶ ನಿರಾಕರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next