ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೆ ದಿನಗಣನೆ ಪ್ರಾರಂಭವಾಗಿರುವಂತೆಯೇ ರಾಜ್ಯ ಸರಕಾರ ಸರಕಾರಿ ಬಸ್ ಪ್ರಯಾಣಿಕರಿಗೆ ದರ ಹೆಚ್ಚಳದ ಬಿಸಿ ನೀಡಿದೆ.
Advertisement
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ಸಾರಿಗೆ ಹಾಗೂ ಈಶಾನ್ಯ ಕರ್ನಾಟಕ ಸಾರಿಗೆ ಬಸ್ಸುಗಳಲ್ಲಿನ ಪ್ರಯಾಣ ದರಗಳನ್ನು ಶೇ.12ರಷ್ಟು ಹೆಚ್ಚಿಸಲಾಗಿದೆ. ಬಸ್ ದರ ಏರಿಕೆ ಪ್ರಸ್ತಾವನೆಗೆ ರಾಜ್ಯ ಸರಕಾರ ಒಪ್ಪಿಗೆ ನೀಡಿದ್ದು ಮಂಗಳವಾರ ಮಧ್ಯರಾತ್ರಿಯಿಂದಲೇ ಈ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ತಿಳಿದುಬಂದಿದೆ.
ಬೆಂಗಳೂರು ಮಹಾನಗರದಲ್ಲಿ ಸಾರಿಗೆ ಸೇವೆ ಒದಗಿಸುತ್ತಿರುವ ಬಿ.ಎಂ.ಟಿ.ಸಿ ಬಸ್ ಪ್ರಯಾಣದ ದರಗಳಲ್ಲಿ ಯಾವುದೇ ರೀತಿಯ ಹೆಚ್ಚಳವನ್ನು ಮಾಡಲಾಗಿಲ್ಲ.