Advertisement

ಕನ್ನಡದ ಧ್ವಜದ ಬದಲಿಗೆ ರಾಷ್ಟ್ರಧ್ವಜ ಹಾರಿಸಲು ರಾಜ್ಯ ಸರಕಾರ ಸುತ್ತೋಲೆ

09:36 AM Nov 01, 2019 | Hari Prasad |

ಬೆಂಗಳೂರು: ಈ ಬಾರಿ ಕರ್ನಾಟಕ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ಕನ್ನಡದ ಧ್ವಜದ ಬದಲಿಗೆ ರಾಷ್ಟ್ರ ಧ್ವಜವನ್ನು ಹಾರಿಸುವಂತೆ ರಾಜ್ಯ ಸರಕಾರ ಸುತ್ತೋಲೆ ಹೊರಡಿಸಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಸಂಪ್ರದಾಯವನ್ನು ಬದಿಗೊತ್ತಿ ನಾಳೆ ಎಲ್ಲಾ ಸರಕಾರಿ ಕಾರ್ಯಕ್ರಮಗಳಲ್ಲಿ ರಾಜ್ಯದ ಅಧಿಕೃತ ಧ್ವಜದ ಬದಲಿಗೆ ತಿರಂಗಾ ಹಾರಾಡಲಿದೆ.

Advertisement

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಈ ಸುತ್ತೋಲೆಯನ್ನು ಹೊರಡಿಸಿದ್ದು. ಧ್ವಜ ಸಂಹಿತೆಯ ಅಡಿಯಲ್ಲಿ ರಾಷ್ಟ್ರ ಧ್ವಜನ್ನು ಮಾತ್ರವೇ ಹಾರಿಸುವಂತೆ ರಾಜ್ಯ ಸರಕಾರದಿಂದ ಈ ಸೂಚನೆ ಹೊರಬಿದ್ದಿದೆ. ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಂತೆ ಶಿಕ್ಷಣ ಇಲಾಖೆಯೂ ಸಹ ಸುತ್ತೋಲೆ ಹೊರಡಿಸಿದೆ.

ಕರ್ನಾಟಕ ರಾಜ್ಯ ಏಕೀಕರಣಗೊಂಡ ನೆನಪಿಗಾಗಿ ಪ್ರತೀ ವರ್ಷ ನವಂಬರ್ 01ರಂದು ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಈ ಸಂದರ್ಭದಲ್ಲಿ ರಾಜ್ಯಾದ್ಯಂತ ಈ ದಿವಸ ಕನ್ನಡದ ಬಾವುಟ ಹಾರುತ್ತದೆ. ಆದರೆ ಈ ಸಂಪ್ರದಾಯಕ್ಕೆ ಯಡಿಯೂರಪ್ಪ ನೇತೃತ್ವದ ಭಾರತೀಯ ಜನತಾ ಪಕ್ಷ ಸರಕಾರ ಅಂತ್ಯ ಹಾಡುವ ಲಕ್ಷಣ ಈ ಬಾರಿ ಗೋಚರಿಸಿದೆ.

ರಾಜ್ಯ ಸರಕಾರದ ಈ ನಿರ್ಧಾರಕ್ಕೆ ಕನ್ನಡ ಪರ ಸಂಘಟನೆಗಳು ಮತ್ತು ಕನ್ನಡಿಗರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ. ರಾಷ್ಟ್ರ ಧ್ವಜಕ್ಕೆ ಚ್ಯುತಿ ಬರುವ ಹಿನ್ನಲೆಯಲ್ಲಿ ರಾಜ್ಯ ಸರಕಾರ ಈ ನಿರ್ಧಾರವನ್ನು ಕೈಗೊಂಡಿದೆ ಎಂದು ಹೇಳಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next