Advertisement

State Government; ಅನುದಾನವಿಲ್ಲದೆ 50ಕ್ಕೂ ಹೆಚ್ಚು ಕಾಂಗ್ರೆಸ್‌ ಶಾಸಕರಿಗೆ ಅಸಮಾಧಾನ

10:51 PM Jul 17, 2024 | Team Udayavani |

ಹುಬ್ಬಳ್ಳಿ: ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದ್ದು, ಅಭಿವೃದ್ಧಿ ಯೋಜನೆಗಳಿಗೆ ರಾಜ್ಯ ಸರಕಾರದಿಂದ ಒಂದು ರೂಪಾಯಿ ಬಾರದ ಕಾರಣ ಕಾಂಗ್ರೆಸ್‌ ಶಾಸಕರು ಕ್ಷೇತ್ರಗಳತ್ತ ಮುಖ ಮಾಡುತ್ತಿಲ್ಲ. ಸರ್ಕಾರದ ನಡೆ ಬಗ್ಗೆ 50ಕ್ಕೂ ಹೆಚ್ಚು ಕಾಂಗ್ರೆಸ್‌ ಶಾಸಕರು ಅಸಮಾಧಾನಗೊಂಡಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ಆರೋಪಿಸಿದರು.

Advertisement

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆ ಸಂದರ್ಭ ಕಾಂಗ್ರೆಸ್‌ ನಾಯಕರು ಸಾಕಷ್ಟು ಭರವಸೆಗಳನ್ನು ನೀಡಿದ್ದರು. ಆದರೆ ಒಂದೇ ಒಂದು ಅಭಿವೃದ್ಧಿ ಯೋಜನೆಗೆ ರಾಜ್ಯ ಸರಕಾರದಿಂದ ಅನುದಾನವಿಲ್ಲ. ಹೀಗಾಗಿ ಕ್ಷೇತ್ರದ ಜನರಿಗೆ ಕಾಂಗ್ರೆಸ್‌ ಶಾಸಕರು ಮುಖ ತೋರಿಸುವ ಪರಿಸ್ಥಿತಿಯಲ್ಲಿಲ್ಲ. ಇದರಿಂದಾಗಿ ಕಾಂಗ್ರೆಸ್‌ ಶಾಸಕರು ತಮ್ಮದೇ ಸರಕಾರದ ವಿರುದ್ಧ ಬೇಸರದಲ್ಲಿದ್ದಾರೆ ಎಂದರು.

ಕಾಂಗ್ರೆಸ್‌ನ ಸುಮಾರು 50ಕ್ಕೂ ಹೆಚ್ಚು ಶಾಸಕರು ಸರಕಾರ ಹಾಗೂ ತಮ್ಮ ಪಕ್ಷದ ವಿರುದ್ಧ ಅಸಮಾಧಾನ ಹೊಂದಿದ್ದಾರೆ. ಕೆಲವರು ಪಕ್ಷ ತೊರೆಯಲು ಸಿದ್ಧ ಎನ್ನುವ ಮಾತುಗಳನ್ನು ಆಡಿದ್ದಾರೆ. ಶಾಸಕರಾದ ವಿನಯ ಕುಲಕರ್ಣಿ, ಬಸವರಾಜ ರಾಯರೆಡ್ಡಿ, ಅಪ್ಪಾಜಿರಾವ ನಾಡಗೌಡ ಸೇರಿದಂತೆ ಹಲವು ಶಾಸಕರು ನೇರವಾಗಿ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ಹಿರಿಯ ಶಾಸಕರು ತಮ್ಮದೇ ಸರಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿರುವಾಗ ಇದೊಂದು ಅಭಿವೃದ್ಧಿ ಶೂನ್ಯ ಸರಕಾರ ಎನ್ನದೆ ಮತ್ತೇನು ಅನ್ನಬೇಕು ಎಂದು ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next