ಬೆಂಗಳೂರು: ಲಾಕ್‌ಡೌನ್ ನಿರ್ವಹಣೆ ಮಾಡುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂದು ಶಾಸಕ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ವಿಪಕ್ಷದವರ ಸಲಹೆಗಳನ್ನು ಕೇಳದೇ ಏಕಮುಖಿ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಬಡವರು, ಹೂವು ಮಾರುವವರು, ಆರ್ಥಿಕ ಹಿಂದುಳಿದವರಿಗೆ ಆಹಾರ ಕಿಟ್ ಕೊಡಿ ಎಂದು ಹೇಳಿದರೂ ರಾಜ್ಯ ಸರ್ಕಾರ ಸ್ಪಂದನೆ ಮಾಡಲಿಲ್ಲ. ರಾಜ್ಯದಲ್ಲಿ ಕೋವಿಡ್ ವೈರಸ್ ರೋಗ ಹರಡಲು ಸರ್ಕಾರವೇ ಕಾರಣ ಎಂದು ಹೇಳಿದರು.
ಮಾಜಿ ಸಚಿವ ಎಚ್.ಎಂ.ರೇವಣ್ಣ ಮಾತನಾಡಿ, ಕಾಂಗ್ರೆಸ್ ಬಡವರ ಪಕ್ಷವಾಗಿದ್ದು, ಸೋನಿಯಗಾಂಧಿ ಅವರು ಆದೇಶದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಂಕಷ್ಟದಲ್ಲಿರುವವರಿಗೆ ಆಹಾರ ಕಿಟ್, ಆಹಾರ ಪ್ಯಾಕೇಟ್ ವಿತರಿಸಿ ಅವರ ನೋವುಗಳಿಗೆ ಸ್ಪಂದಿಸಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮ ದಲ್ಲಿ ಮಾಜಿ ಮೇಯರ್ ಪದ್ಮಾವತಿ, ಪಾಲಿಕೆ ಜಿ.ಕೃಷ್ಣಮೂರ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.