Advertisement

ಮೂರು ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಿಸಿದ ಸರ್ಕಾರ

11:48 AM May 07, 2021 | Team Udayavani |

ಬೆಂಗಳೂರು: ಕೋಲಾರ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

Advertisement

ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರಿಗೆ ಕೋಲಾರ ಜಿಲ್ಲೆಯ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ಅವರಿಗೆ ಬೀದರ್ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶಿಸಲಾಗಿದೆ.

ಇದನ್ನೂ ಓದಿ:ಬೆಳ್ತಂಗಡಿ : ಅನಗತ್ಯವಾಗಿ ಓಡಾಡುವ ಮಂದಿಗೆ ಪೊಲೀಸ್ ಲಾಠಿ ಬಿಸಿ

ಉಳಿದಂತೆ ಯಾದಗಿರಿ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ತೋಟಗಾರಿಕೆ ಸಚಿವ ಆರ್.ಶಂಕರ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಕೆಲ ದಿನಗಳ ಹಿಂದೆ ಬೆಳಗಾವಿ, ಬಾಗಲಕೋಟೆ ಸೇರಿದಂತೆ ಆರು ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು.

Advertisement

ಇದನ್ನೂ ಓದಿ: ಡಿಎಂಕೆ ವರಿಷ್ಠ ಎಂಕೆ ಸ್ಟಾಲಿನ್ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

Advertisement

Udayavani is now on Telegram. Click here to join our channel and stay updated with the latest news.

Next