Advertisement
ಸಭೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮೂರು ತಿಂಗಳಲ್ಲಿ ಮೈಶುಗರ್ ಪುನಶ್ಚೇತನಕ್ಕೆ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಕಬ್ಬಿನ ಉಪ ಉತ್ಪನ್ನಗಳನ್ನು ತಯಾರಿಸಲು ಆದ್ಯತೆ ನೀಡಲಾಗುವುದು. ಕೂಡಲೆ ದಕ್ಷ ಅಧಿಕಾರಿಯನ್ನು ಎಂಡಿಯಾಗಿ ನೇಮಕ ಮಾಡಲು ತೀರ್ಮಾನ ಮಾಡಲಾಗಿದೆ ಎಂದರು.
Related Articles
Advertisement
ರೈತ ಮುಖಂಡ ಬಡಗಲಪುರ ನಾಗೇಂದ್ರ ಮಾತನಾಡಿ, ಸರ್ಕಾರ ಉತ್ತಮ ನಿರ್ಧಾರ ಮಾಡಿದೆ. ಮುಖ್ಯಮಂತ್ರಿಗಳ ತೀರ್ಮಾನ ಸ್ವಾಗತಿಸಿದ್ದೇವೆ. ರೈತರ ಪರವಾದ ತೀರ್ಮಾನವಾಗಿದೆ. ಖಾಸಗೀಕರಣ ಮಾಡುವುದನ್ನು ಮರು ಪರಿಶೀಲನೆ ನಡೆಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ ಎಂದು ಹೇಳಿದರು.
ಶಾಸಕ ಶ್ರೀಕಂಠೆಗೌಡ ಮಾತನಾಡಿ, ಹಿಂದಿನ ಸಂಪುಟದಲ್ಲಿ ಮೈಶುಗರ್ ಕಾರ್ಖಾನೆಯನ್ನು ಖಾಸಗೀಕರಣ ಮಾಡುವುದಾಗಿ ತೀರ್ಮಾನ ಮಾಡಿದ್ದರು. ಅದರ ವಿರುದ್ಧ ಹೋರಾಟ ಮಾಡಿದ್ದೆವು. ಸಿಎಂ ನಮ್ಮ ಪರವಾಗಿ ಇಂದು ತೀರ್ಮಾನ ತೆಗೆದುಕೊಂಡಿದ್ದಾರೆ. ಮೂರು ತಿಂಗಳಲ್ಲಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಸಿಎಂ ಪ್ರತಿಭಟನೆ ಸ್ಥಳಕ್ಕೆ ಬಂದು 18ರಂದು ಸಭೆ ಕರೆದಿದ್ದರು. ಇಂದು ಸರ್ಕಾರವೇ ಮುಂದುವರೆಸುವುದಾಗಿ ಹೇಳಿದೆ. 65 ಸಕ್ಕರೆ ಕಾರ್ಖಾನೆಗಳಿಗೆ ಇದು ಮಾದರಿಯಾಗಿದೆ. ಮಂಡ್ಯ ಜಿಲ್ಲೆ ಘನತೆ ಎತ್ತಿ ಹಿಡಿದಿದ್ದಾರೆ. ಅವರಿಗೆ ನಮ್ಮ ಅಭಿನಂದನೆ ಸಲ್ಲಿಸುತ್ತೇನೆ ಎಂದು ರೈತ ಹಿತರಕ್ಷಣಾ ಸಮಿತಿ ಕಾರ್ಯದರ್ಶಿ ಸುನಂದ ಜಯರಾಮ್ ಹೇಳಿದರು.