Advertisement

ಮೈಶುಗರ್ ಕಾರ್ಖಾನೆ ಖಾಸಗೀಕರಣ ನಿರ್ಧಾರದಿಂದ ಹಿಂದೆ ಸರಿದ ರಾಜ್ಯ ಸರ್ಕಾರ

02:36 PM Oct 18, 2021 | Team Udayavani |

ಬೆಂಗಳೂರು: ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆ ಖಾಸಗೀಕರಣ ಮಾಡುವ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿದಿದೆ. ಇಂದು ಈ ಬಗ್ಗೆ ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.

Advertisement

ಸಭೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮೂರು ತಿಂಗಳಲ್ಲಿ ಮೈಶುಗರ್ ಪುನಶ್ಚೇತನಕ್ಕೆ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಕಬ್ಬಿನ ಉಪ ಉತ್ಪನ್ನಗಳನ್ನು ತಯಾರಿಸಲು ಆದ್ಯತೆ ನೀಡಲಾಗುವುದು. ಕೂಡಲೆ ದಕ್ಷ ಅಧಿಕಾರಿಯನ್ನು ಎಂಡಿಯಾಗಿ ನೇಮಕ ಮಾಡಲು ತೀರ್ಮಾನ ಮಾಡಲಾಗಿದೆ ಎಂದರು.

ಅಗತ್ಯ ಯಂತ್ರಗಳನ್ನು ಸರಿಪಡಿಸಲು ಈಗಿನಿಂದಲೇ ಕ್ರಮ ಕೈಗೊಳ್ಳಲಾಗುವುದು. ಖಾಸಗಿಕರಣ ಮಾಡುವ ಪ್ರಸ್ತಾಪ ಸದ್ಯಕ್ಕೆ ವಾಪಸು ಪಡೆಯುತ್ತೇವೆ. ಎಲ್ಲಾ ಪರಿಶೀಲನೆ ನಡೆಸಿದ ಬಳಿಕ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡು ಅಗತ್ಯ ಹಣಕಾಸು ನೆರವು ನೀಡಲಾಗುವುದು ಎಂದು ಸಿಎಂ ಹೇಳಿದರು.

ಸಂಸದೆ ಸುಮಲತಾ ಅಂಬರೀಶ್ ಮಾತನಾಡಿ, ಇವತ್ತಿನ ಸಭೆಯಲ್ಲಿ ಹಲವಾರು ವಿಷಯ ಚರ್ಚೆ ಮಾಡಿದ್ದೇವೆ. ಸಕಾರಾತ್ಮಕ ಚರ್ಚೆಯಾಗಿದೆ. ರೈತರ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೆವು. ಯಾವ ಮಾದರಿಯಲ್ಲಾದರೂ ಕಾರ್ಖಾನೆ ಆರಂಭಿಸಬೇಕುವೆಂದು ಮನವಿ ಮಾಡಿದ್ದೇವೆ ಎಂದರು.

ಇದನ್ನೂ ಓದಿ:ಪ್ರಧಾನಿ ಭಾವಚಿತ್ರ ಸುಡಲು ಯತ್ನ:ಪೊಲೀಸರೊಂದಿಗೆ ತಳ್ಳಾಟ- ನೂಕಾಟ

Advertisement

ರೈತ ಮುಖಂಡ ಬಡಗಲಪುರ ನಾಗೇಂದ್ರ ಮಾತನಾಡಿ, ಸರ್ಕಾರ ಉತ್ತಮ ನಿರ್ಧಾರ ಮಾಡಿದೆ. ಮುಖ್ಯಮಂತ್ರಿಗಳ ತೀರ್ಮಾನ ಸ್ವಾಗತಿಸಿದ್ದೇವೆ. ರೈತರ ಪರವಾದ ತೀರ್ಮಾನವಾಗಿದೆ. ಖಾಸಗೀಕರಣ ಮಾಡುವುದನ್ನು ಮರು ಪರಿಶೀಲನೆ ನಡೆಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಶಾಸಕ ಶ್ರೀಕಂಠೆಗೌಡ ಮಾತನಾಡಿ, ಹಿಂದಿನ ಸಂಪುಟದಲ್ಲಿ ಮೈಶುಗರ್ ಕಾರ್ಖಾನೆಯನ್ನು ಖಾಸಗೀಕರಣ ಮಾಡುವುದಾಗಿ ತೀರ್ಮಾನ ಮಾಡಿದ್ದರು. ಅದರ ವಿರುದ್ಧ ಹೋರಾಟ ಮಾಡಿದ್ದೆವು. ಸಿಎಂ ನಮ್ಮ ಪರವಾಗಿ ಇಂದು ತೀರ್ಮಾನ ತೆಗೆದುಕೊಂಡಿದ್ದಾರೆ. ಮೂರು ತಿಂಗಳಲ್ಲಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಸಿಎಂ ಪ್ರತಿಭಟನೆ ಸ್ಥಳಕ್ಕೆ ಬಂದು 18ರಂದು ಸಭೆ ಕರೆದಿದ್ದರು. ಇಂದು ಸರ್ಕಾರವೇ ಮುಂದುವರೆಸುವುದಾಗಿ ಹೇಳಿದೆ. 65 ಸಕ್ಕರೆ ಕಾರ್ಖಾನೆಗಳಿಗೆ ಇದು ಮಾದರಿಯಾಗಿದೆ. ಮಂಡ್ಯ ಜಿಲ್ಲೆ ಘನತೆ ಎತ್ತಿ ಹಿಡಿದಿದ್ದಾರೆ. ಅವರಿಗೆ ನಮ್ಮ ಅಭಿನಂದನೆ ಸಲ್ಲಿಸುತ್ತೇನೆ ಎಂದು ರೈತ ಹಿತರಕ್ಷಣಾ ಸಮಿತಿ ಕಾರ್ಯದರ್ಶಿ ಸುನಂದ ಜಯರಾಮ್ ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

More
Next