Advertisement
ಈ ಕಾರಣದಿಂದಾಗಿ ಸಿಎಂ ಹೊಸದಿಲ್ಲಿಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಬುಧವಾರ ಭೇಟಿಯಾಗಿ ಚರ್ಚಿಸಿದ್ದಾರೆ. ಅದಕ್ಕಾಗಿ ಬೊಮ್ಮಾಯಿ 2 ಬಾರಿ ರಾಷ್ಟ್ರ ರಾಜಧಾನಿಗೆ ಪ್ರವಾಸ ಕೈಗೊಂಡಿದ್ದಾರೆ.
Related Articles
Advertisement
ಸೆ. 13ರಿಂದ ವಿಧಾನಸಭೆಯ ಮುಂಗಾರು ಅಧಿವೇಶನ ಆರಂಭವಾಗಲಿದೆ. ಅದಕ್ಕೂ ಮೊದಲು ಸಚಿವ ಸ್ಥಾನ ಭರ್ತಿ ಮಾಡಬೇಕು ಎನ್ನುವುದು ಆಕಾಂಕ್ಷಿಗಳ ಒತ್ತಡ ಎನ್ನುವುದು ಮೂಲಗಳ ಹೇಳಿಕೆ.
ಬಿ.ವೈ. ವಿಜಯೇಂದ್ರ, ಬಸನಗೌಡ ಪಾಟೀಲ್ ಯತ್ನಾಳ್, ಸಿ.ಪಿ. ಯೋಗೇಶ್ವರ್, ರಾಜುಗೌಡ ಅವರನ್ನು ಸೇರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ನಡುವೆಯೇ ಮಾಜಿ ಸಚಿವ ರಮೇಶ್ ಜಾರಕಿಹೊಳಿಗಾಗಿ ಒಂದು ಸ್ಥಾನ ಖಾಲಿ ಇಟ್ಟುಕೊಳ್ಳುವ ಉದ್ದೇಶವನ್ನು ಸಿಎಂ ಹೊಂದಿದ್ದಾರೆ ಎನ್ನಲಾಗಿದೆ.
ಸಮಯ ಕೇಳಿದ ಬೊಮ್ಮಾಯಿ : ದಿಲ್ಲಿಗೆ ತೆರಳುವ ಮುನ್ನ ಬಿಎಸ್‌ವೈ ಅವರನ್ನು ಭೇಟಿ ಮಾಡಿ ಸ್ವಲ್ಪ ಸಮಯ ವಕಾಶ ನೀಡುವಂತೆ ಮನವಿ ಮಾಡಿದ್ದ ಬೊಮ್ಮಾಯಿ ಅವರು ವಿಜಯೇಂದ್ರ ಸೇರ್ಪಡೆ ಕುರಿತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಜತೆಗೆ ಚರ್ಚಿಸಿ ಶೀಘ್ರ ತೀರ್ಮಾನಿಸುವುದಾಗಿ ಹೇಳಿ ದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.