Advertisement

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

01:07 AM Dec 14, 2024 | Shreeram Nayak |

ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಅನುಷ್ಠಾನಕ್ಕೆ ಅನ್ನದಾತರ ಅಹೋ ರಾತ್ರಿ ಹೋರಾಟ ಆರಂಭ ವಾದ ಬೆನ್ನಲ್ಲೇ ರಾಜ್ಯ ಸರಕಾರವು ಆಲಮಟ್ಟಿ ಜಲಾಶಯದ ಎತ್ತರವನ್ನು 519.60 ಮೀ.ಗಳಿಂದ 524.526 ಮೀ.ಗಳಿಗೆ ಹೆಚ್ಚಿಸಲು ತಾನು ಬದ್ಧ ಎಂದು ಘೋಷಿಸಿದೆ. ಅಲ್ಲದೆ ಈ ಕುರಿತು ಚರ್ಚಿಸಲು ಡಿ. 16ರಂದು ಜನಪ್ರತಿನಿಧಿಗಳ ಸಭೆ ನಡೆಸಲು ನಿರ್ಧರಿಸಿದೆ.

Advertisement

ಕೃಷ್ಣಾ ನದಿ ನೀರಿನ ವಿಷಯವಾಗಿ ಆಂಧ್ರ, ತೆಲಂಗಾಣ ರಾಜ್ಯ ಸರಕಾರ ಗಳು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಹಾಕಿದ್ದು, ಕೇಂದ್ರ ಸರಕಾರ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸಬೇಕು. ಅದಕ್ಕೆ ಮುನ್ನ ಯೋಜನೆಯ ಅನು ಷ್ಠಾನಕ್ಕೆ ಇರುವ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಲು ರಾಜ್ಯ ಸರಕಾರ ಸಜ್ಜಾಗಿದೆ. ಇದರಿಂದ ಕೃಷ್ಣಾ ತೀರದ ಜನರ ಬೇಡಿಕೆಗೆ ಬಲ ಬಂದಂತಾಗಿದೆ.

ಆಲಮಟ್ಟಿ ಅಣೆಕಟ್ಟೆ ಎತ್ತರವನ್ನು 524 ಮೀ.ಗೆ ಹೆಚ್ಚಿಸುವುದು ನಮ್ಮ ನಿಲುವು. ಕೇಂದ್ರ ಸರಕಾರ ಮಧ್ಯಸ್ಥಿಕೆ ವಹಿಸಿ ಪರವಾನಿಗೆ ನೀಡಿದರೆ ಈಗಿರುವ 519ರಿಂದ 524 ಮೀ.ಗೆ ಎತ್ತರಿಸಲು ನಾವು ತಯಾರಾಗಿದ್ದೇವೆ. ಕೃಷ್ಣಾ ನದಿ ನೀರಿನ ವಿಚಾರವಾಗಿ ಆಂಧ್ರ ಪ್ರದೇಶ, ತೆಲಂಗಾಣದವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಹಾಕಿದ್ದಾರೆ. ಕೇಂದ್ರ ಸರಕಾರ ಮಧ್ಯಸ್ಥಿಕೆ ವಹಿಸಿ ನಮಗೆ ಅನು
ಕೂಲ ಮಾಡಿಕೊಡಬೇಕು ಎಂದು ವಿಜಯ ಪುರದಲ್ಲಿ ಸುದ್ದಿಗಾರರಿಗೆ ಸಿಎಂ ತಿಳಿಸಿದರು.

ದುಪ್ಪಟ್ಟು ಬೆಲೆ ಕೊಡಲು
ಸಾಧ್ಯವೆ: ಡಿಕೆಶಿ ಪ್ರಶ್ನೆ
ಡಿಸಿಎಂ ಡಿ.ಕೆ. ಶಿವಕುಮಾರ್‌ ಮಾತನಾಡಿ, ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 524 ಮೀ.ಗೆ ಹೆಚ್ಚಿಸಲು ನಾವು ಬದ್ಧವಾಗಿದ್ದೇವೆ. ಆದರೆ ಈ ವಿಷಯದಲ್ಲಿ ಕೇಂದ್ರ ಸರಕಾರವು ಅಧಿಸೂಚನೆ ಹೊರಡಿಸಬೇಕಿದೆ. ಅಧಿಸೂಚನೆ ಹೊರಡಿಸುವ ಮೊದಲೇ ಇದರ ಕಾಮಗಾರಿ ನಡೆಸಬೇಕೇ, ಬೇಡವೇ ಎಂದು ಚರ್ಚೆ ನಡೆಯುತ್ತಿದೆ. ಭೂಸ್ವಾಧೀನ ವಿಷಯವಾಗಿ ಸ್ವಲ್ಪ ಗೊಂದಲ ಇದೆ. ಕೆಲವರು ನ್ಯಾಯಾಲಯದಿಂದ ಬೆಂಗಳೂರಿನ ಬೆಲೆಗಿಂತ ಹೆಚ್ಚು ಮೊತ್ತದ ಪರಿಹಾರ ಪಡೆಯಲು ಆದೇಶ ತಂದಿದ್ದಾರೆ. 10, 20 ಕೋಟಿ ರೂ. ಕೊಡಲು ಹೇಗೆ ಸಾಧ್ಯ? ಈ ನ್ಯೂನತೆ ಸರಿಪಡಿಸಬೇಕು. ಈ ಹಿಂದೆ ಬೊಮ್ಮಾಯಿ ಸರಕಾರ ರೈತರಿಗೆ ನಿಗದಿಪಡಿಸಿರುವ ದರದ ಬಗ್ಗೆ ನಮಗೆ ತಕರಾರಿಲ್ಲ ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಅನುಷ್ಠಾನಕ್ಕೆ ಸಂಬಂಧಿಸಿ ಡಿ. 16 ರಂದು ಜನ ಪ್ರತಿನಿಧಿಗಳ ಸಭೆ ಕರೆಯಲಾಗಿದ್ದು, ಈ ಬಗ್ಗೆ ಚರ್ಚಿಸಲಾಗುವುದು.
– ಸಿದ್ದರಾಮಯ್ಯ, ಮುಖ್ಯಮಂತ್ರಿ

Advertisement

ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 524 ಮೀ. ಹೆಚ್ಚಿಸಲು ಬದ್ಧ. ಆದರೆ ಈ ವಿಷಯದಲ್ಲಿ ಕೇಂದ್ರ ಅಧಿ ಸೂಚನೆ ಹೊರ ಡಿಸಬೇಕಿದೆ.
– ಡಿ.ಕೆ. ಶಿವಕುಮಾರ್‌, ಉಪಮುಖ್ಯಮಂತ್ರಿ

Advertisement

Udayavani is now on Telegram. Click here to join our channel and stay updated with the latest news.

Next