Advertisement
ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ. ಸುಧಾಕರ್ ಮತ್ತು ವೈದ್ಯಕೀಯ ಶಿಕ್ಷಣ ಸಚಿವರ ಶರಣ ಪ್ರಕಾಶ್ ಪಾಟೀಲ್ ಜಂಟಿಯಾಗಿ ಕರ್ನಾಟಕ ಅನುದಾನರಹಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಸಂಘ (ಕುಪೇಕಾ) ಮತ್ತು ಕರ್ನಾಟಕ ವೃತ್ತಿಪರ ಕಾಲೇಜುಗಳ ಫೌಂಡೇಶನ್ (ಕೆಪಿಸಿಎಫ್) ಪದಾಧಿಕಾರಿಗಳ ಜತೆಗೆ ಶುಕ್ರವಾರ ಉನ್ನತ ಶಿಕ್ಷಣ ಪರಿಷತ್‌ನಲ್ಲಿ ಸಭೆ ನಡೆಸಿ ಈ ನಿರ್ಧಾರ ಪ್ರಕಟಿಸಿದ್ದಾರೆ. ಶೀಘ್ರದಲ್ಲೇ ಪರಿಷ್ಕೃತ ಶುಲ್ಕ ಪಟ್ಟಿಯನ್ನು ಉನ್ನತ ಶಿಕ್ಷಣ ಇಲಾಖೆ ಹೊರಡಿಸಲಿದೆ.
ಖಾಸಗಿ ವೈದ್ಯಕೀಯ ಕಾಲೇಜುಗಳ ಶುಲ್ಕದ ಬಗ್ಗೆ ಇನ್ನೂ ಅಂತಿಮ ತೀರ್ಮಾನವನ್ನು ಸರಕಾರ ಕೈಗೊಂಡಿಲ್ಲ. ಖಾಸಗಿ ಕಾಲೇಜುಗಳ ಆಡಳಿತ ಮಂಡಳಿ ಜತೆಗೆ ಇನ್ನೆರಡು ಸಭೆ ನಡೆಸಿ ಬಳಿಕ ತೀರ್ಮಾನ ಕೈಗೊಳ್ಳಲಾಗು ವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.